ಜೈಲು ಸೇರಿರುವ ಸೆಂಥಿಲ್ ಸಂಪುಟದಿಂದ ವಜಾ
ತಮಿಳುನಾಡಿನಲ್ಲಿ ಭಾರೀ ರಾಜಕೀಯ ಹೈಡ್ರಾಮಾ
ರಾಜ್ಯಪಾಲರ ವಿರುದ್ಧ ಕಾನೂನು ಹೋರಾಟಕ್ಕೆ DMK ಸಜ್ಜು
ಜೈಲು ಸೇರಿರುವ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಯನ್ನು ಸಂಪುಟದಿಂದ ವಜಾ ಮಾಡಿದ ಕೆಲವೇ ಗಂಟೆಗಳಲ್ಲಿ ರಾಜ್ಯಪಾಲರು ತಮ್ಮ ಆದೇಶಕ್ಕೆ ತಡೆ ನೀಡಿದ್ದಾರೆ. ಮಾತ್ರವಲ್ಲ, ಮುಖ್ಯಮಂತ್ರಿ ಸ್ಟಾಲಿನ್ಗೆ ವಜಾ ಮಾಡಿರುವ ಪತ್ರವನ್ನೂ ಕಳುಹಿಸಿದ್ದರು.
ವಜಾಗೊಂಡಿರುವ ಮಂತ್ರಿ, ರಾಜ್ಯಪಾಲ ಆರ್.ಎನ್.ರವಿ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗುತ್ತಿದ್ದಂತೆಯೇ, ತಮ್ಮ ಆದೇಶಕ್ಕೆ ತಡೆ ನೀಡಿದ್ದಾರೆ. ಕೇಂದ್ರ ಗೃಹ ಸಚಿವಾಲಯದ ಸಲಹೆಯಂತೆ ರಾಜ್ಯಪಾಲರು ತಮ್ಮ ಆದೇಶವನ್ನು ಹಿಂದೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಜೊತೆಗೆ ತಮಿಳುನಾಡು ಮುಖ್ಯಮಂತ್ರಿಗೆ ಪತ್ರ ಕೂಡ ಬರೆದಿದ್ದಾರೆ. ರಾಜ್ಯಪಾಲರ ಈ ನಡೆ ಭಾರೀ ಚರ್ಚೆಗೆ ಕಾರಣವಾಗಿದೆ.
ರಾಜ್ಯಪಾಲರಿಗೆ ಅಧಿಕಾರ ಇಲ್ಲ
ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜೂನ್ 14 ರಂದು ಬಂಧಿಸಿದ್ದಾರೆ. ಸ್ಟಾಲಿನ್ ಸರ್ಕಾರದಲ್ಲಿ ಇಂಧನ ಸಚಿವರಾಗಿರುವ, ಸೆಂಥಿಲ್ ಸದ್ಯ ಜೈಲಿನಲ್ಲಿಯೇ ಇದ್ದಾರೆ. ಬಂಧನಕ್ಕೆ ಒಳಗಾದರೂ ಸ್ಟಾಲಿನ್, ಅವರನ್ನು ಸಂಪುಟದಿಂದ ವಜಾ ಮಾಡಿಲ್ಲ. ನಿಯಮಗಳ ಪ್ರಕಾರ, ಮುಖ್ಯಮಂತ್ರಿಗಳ ಶಿಫಾರಸ್ಸಿನ ಮೇರೆಗೆ ರಾಜ್ಯಪಾಲರು ವಜಾ ಮಾಡಬೇಕು.
ಇದನ್ನೂ ಓದಿ: ಮರಳು ತುಂಬಿದ್ದ ಲಾರಿ ಡಿಕ್ಕಿ; ಬೈಕ್ ಸವಾರ ಸಾವು, ಚಾಲಕ ಪರಾರಿ
ರಾಜ್ಯಪಾಲರು ನಾಟಕೀಯ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಸರ್ಕಾರದ ಮಂತ್ರಿಗಳನ್ನು ಅವರಿಗೆ ವಜಾ ಮಾಡುವ ಹಕ್ಕಿಲ್ಲ. ರಾಜ್ಯಪಾಲರ ಕ್ರಮದ ವಿರುದ್ಧ ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ