ನಂದಿಪರ್ವತ ಆಶ್ರಮದ ಜೈನಮುನಿಯ ಬರ್ಬರ ಹತ್ಯೆ
ಜುಲೈ 6 ರಂದು ಇದ್ದಕ್ಕಿದ್ದಂತೆ ನಾಪತ್ತೆ ಆಗಿದ್ದ ಜೈನಮುನಿ
ಇಬ್ಬರು ಅರೆಸ್ಟ್, ವಿಷಯ ತಿಳಿದು ಪೊಲೀಸರು ಶಾಕ್
ಚಿಕ್ಕೋಡಿ: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಮೊನ್ನೆ ಇದ್ದಕ್ಕಿದ್ದಂತೆ ನಾಪತ್ತೆ ಆಗಿದ್ದರು. ಇದೀಗ ನಂದಿಪರ್ವತ ಆಶ್ರಮದ ಜೈನಮುನಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ 15 ವರ್ಷಗಳಿಂದ ನಂದಿಪರ್ವತ ಆಶ್ರಮದಲ್ಲಿ ವಾಸವಿದ್ದ ಜೈನಮುನಿ ಜುಲೈ 6ರಿಂದ ಹಿರೇಕೋಡಿಯ ನಂದಿಪರ್ವತ ಆಶ್ರಮದಿಂದ ನಾಪತ್ತೆ ಆಗಿದ್ದರು. ಹೀಗಾಗಿ ಇಡೀ ದಿನ ಆಶ್ರಮದ ಸುತ್ತಮುತ್ತ ಶೋಧ ಭಕ್ತರು ಹುಡುಕಾಡಿದ್ದರು. ಬಳಿಕ ನಿನ್ನೆ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಕೇಸ್ ದಾಖಲಿಸಿದ್ದರು. ಆಚಾರ್ಯ ಕಾಮಕುಮಾರನಂದಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭೀಮಪ್ಪ ಉಗಾರೆ ಅವರು ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಚಿಕ್ಕೋಡಿ ಪೊಲೀಸರು, ಅನುಮಾನದ ಮೇಲೆ ಇಬ್ಬರನ್ನು ವಶಕ್ಕೆ ಪಡೆದಿದ್ದರು. ತನಿಖೆ ವೇಳೆ ಜೈನಮುನಿಯ ಹತ್ಯೆಯ ರಹಸ್ಯ ಬಯಲಾಗಿದೆ. ಕೆಲವು ವರದಿಗಳ ಪ್ರಕಾರ, ಆಸ್ತಿಗಾಗಿ ಜೈನಮುನಿಗಳನ್ನು ಹೊಡೆದು ಹಾಕಲಾಗಿದೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಸಂಪೂರ್ಣ ತನಿಖೆ ಬಳಿಕವೇ ಅಸಲಿ ಸತ್ಯ ಬಯಲಾಗಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ