ಅಂತರಾಷ್ಟ್ರೀಯ ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಸ್ಟಾರ್ ಕ್ರಿಕೆಟರ್
ಇಂಗ್ಲೆಂಡ್ ತಂಡದ ಸ್ಟಾರ್ ಕ್ರಿಕೆಟರ್ ಜೇಮ್ಸ್ ಆಂಡರ್ಸನ್ ಗುಡ್ ಬೈ..!
ಗೆಲುವಿನೊಂದಿಗೆ ಲೆಜೆಂಡರಿ ಬೌಲರ್ ಜೇಮ್ಸ್ ಆಂಡರ್ಸನ್ ವಿದಾಯ
ಪ್ರತಿಷ್ಠಿತ ಲಾರ್ಡ್ಸ್ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ನಲ್ಲಿ ಇಂಗ್ಲೆಂಡ್ ತಂಡವು 114 ರನ್ಗಳಿಂದ ಗೆದ್ದು ಬೀಗಿದೆ. ಇಂಗ್ಲೆಂಡ್ ಗೆಲುವಿನ ಬೆನ್ನಲ್ಲೇ ತಂಡದ ಲೆಜೆಂಡರಿ ಬೌಲರ್ ಜೇಮ್ಸ್ ಆಂಡರ್ಸನ್ಗೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಗುಡ್ ಬೈ ಹೇಳಿದ್ದಾರೆ.
ಯಾರು ಈ ಜೇಮ್ಸ್ ಆಂಡರ್ಸನ್..?
ಜೇಮ್ಸ್ ಆಂಡರ್ಸನ್ ಇಂಗ್ಲೆಂಡ್ ತಂಡದ ಸ್ಟಾರ್ ಬೌಲರ್. ಇವರು 2002ರಲ್ಲಿ ತಮ್ಮ ಅಂತರರಾಷ್ಟ್ರೀಯ ವೃತ್ತಿಜೀವನ ಶುರು ಮಾಡಿದ್ರು. ನಂತರ 2003ರಲ್ಲಿ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದರು. ಬರೋಬ್ಬರಿ 22 ವರ್ಷಗಳ ಕಾಲ ಕ್ರಿಕೆಟ್ ಆಡಿರೋ ಜೇಮ್ಸ್ ಆಂಡರ್ಸನ್ ಹಲವು ದಾಖಲೆಗಳು ಬರೆದಿದ್ದಾರೆ.
ಇದುವರೆಗೂ 188 ಟೆಸ್ಟ್ ಪಂದ್ಯಗಳನ್ನು ಆಡಿರೋ ಜೇಮ್ಸ್ ಒಟ್ಟು 704 ವಿಕೆಟ್ಗಳನ್ನು ಪಡೆದಿದ್ದಾರೆ. ಇದರೊಂದಿಗೆ ಟೆಸ್ಟ್ನಲ್ಲಿ 700 ವಿಕೆಟ್ಗಳನ್ನು ಪಡೆದ ಏಕೈಕ ವೇಗದ ಬೌಲರ್ ಎಂಬ ದಾಖಲೆ ಕೂಡ ಜೇಮ್ಸ್ ಹೆಸರಲ್ಲಿದೆ. ಟೆಸ್ಟ್ ಕ್ರಿಕೆಟ್ನಲ್ಲಿ ಅವರು 32 ಬಾರಿ 5 ವಿಕೆಟ್ ಮತ್ತು 3 ಬಾರಿ 10 ವಿಕೆಟ್ಗಳನ್ನು ಪಡೆದ ಸಾಧನೆ ಮಾಡಿದ್ದಾರೆ.
ಟೆಸ್ಟ್ ಅಲ್ಲದೆ, ಜೇಮ್ಸ್ ಆಂಡರ್ಸನ್ ಇಂಗ್ಲೆಂಡ್ ಪರ 194 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಏಕದಿನ ಪಂದ್ಯದಲ್ಲಿ ಒಟ್ಟು 269 ವಿಕೆಟ್ಗಳನ್ನು ಪಡೆದಿದ್ದಾರೆ. ಇದಲ್ಲದೇ ಆಂಡರ್ಸನ್ ಇಂಗ್ಲೆಂಡ್ ಪರ 19 ಟಿ20 ಪಂದ್ಯಗಳನ್ನು ಆಡಿದ್ದು, 18 ವಿಕೆಟ್ ತೆಗೆದಿದ್ದಾರೆ.
ಇದನ್ನೂ ಓದಿ: ‘400 ರನ್ಗಳ ಟೆಸ್ಟ್ ರೆಕಾರ್ಡ್ ಮುರಿಯೋ ಭಾರತದ ಇಬ್ಬರು ಆಟಗಾರು ಇವರೇ’- ಬ್ರಿಯಾನ್ ಲಾರಾ
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್