ಬಸ್ನಲ್ಲಿ ತೆರಳುತ್ತಿದ್ದ ಪ್ರಯಾಣಿಕರನ್ನು ಬಲಿ ಪಡೆದ ಯಮ
ಚಲಿಸುತ್ತಿದ್ದ ಬಸ್ ಮೇಲೆ ಭಾರೀ ಪ್ರಮಾಣದಲ್ಲಿ ಭೂ ಕುಸಿತ
ಆಸ್ಪತ್ರೆಗೆ ದಾಖಲು ಮಾಡಿದ್ರೂ ಉಳಿಯಲಿಲ್ಲ ಅಮಾಯಕರ ಜೀವ
ಶ್ರೀನಗರ: ಭೂ ಕುಸಿತದಿಂದ ರಸ್ತೆ ಮೇಲೆ ಚಲಿಸುತ್ತಿದ್ದ ಬಸ್ ಮೇಲೆ ಭಾರೀ ಪ್ರಮಾಣದಲ್ಲಿ ಮಣ್ಣು ಬಿದ್ದು ಇಬ್ಬರು ಪ್ರಯಾಣಿಕರು ಸಾವನ್ನಪ್ಪಿ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾಶ್ಮೀರದ ದೋಡಾ ಜಿಲ್ಲೆಯ ಭಂಗ್ರೂಗಂದೋ ಗ್ರಾಮದ ಬಳಿ ನಡೆದಿದೆ.
ದೋಡಾದ ಕಹಾರ ಗ್ರಾಮದ ನಿವಾಸಿ ಅಮಿತ್ ಸೊಹೈಲ್, ಹಾಲೋರ್ ಚಾಂಗಾ ಗ್ರಾಮದ ಮುದಾಸಿರ್ ಅಲಿ ಸಾವನ್ನಪ್ಪಿದ ದುರ್ದೈವಿಗಳು. ಬಸ್ ಭಂಗ್ರೂಗಂದೋ ಗ್ರಾಮದ ಬಳಿ ಚಲಿಸುತ್ತಿದ್ದ ವೇಳೆ ಎತ್ತರ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿದೆ. ಇದರಿಂದ ಭಾರೀ ಪ್ರಮಾಣದಲ್ಲಿ ಕಲ್ಲು ಮಣ್ಣು ಬಸ್ ಮೇಲೆ ಬಿದ್ದಿದೆ. ಪರಿಣಾಮ ಬಸ್ನಲ್ಲಿದ್ದ ಪ್ರಯಾಣಿಕರು ಹೊರಗೆ ಬರಲಾಗದೇ ಒಳಗೆ ಸಿಕ್ಕಿ ಹಾಕಿಕೊಂಡಿದ್ದರು.
ಈ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಸ್ಥಳೀಯರು ಜೆಸಿಬಿ ಮೂಲಕ ಬಸ್ ಮೇಲೆ ಬಿದ್ದಿದ್ದ ಮಣ್ಣನ್ನು ತೆರವುಗೊಳಿಸಿದ್ದಾರೆ. ಈ ವೇಳೆ ರಕ್ಷಣಾ ಕಾರ್ಯದಲ್ಲಿ ತೊಡಗಿ ಎಲ್ಲರನ್ನು ರಕ್ಷಣೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿತ್ತು. ಹೀಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಇಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಇನ್ನು ಬಸ್ ದೋಡಾದ ಗವಾರಿ ಗ್ರಾಮದಿಂದ ಜಮ್ಮುವಿನ ಗಂಡೋ ಪ್ರದೇಶಕ್ಕೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ