/newsfirstlive-kannada/media/post_attachments/wp-content/uploads/2024/08/JAY-SHAH-ICC-PRESIDENT.jpg)
ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ಅಧ್ಯಕ್ಷರಾಗಿ ಜಯ್ ಶಾ ಅವರ ಅಧಿಕಾರಾವಧಿ ಶುರುವಾಗಿದೆ. ಈ ಮೂಲಕ ಅತ್ಯಂತ ಕಿರಿಯ ಐಸಿಸಿ ಅಧ್ಯಕ್ಷ ಎಂಬ ಹೆಗ್ಗಳಿಕೆ ಜಯ್ ಶಾ ಪಾತ್ರರಾಗಿದ್ದಾರೆ.
ಕಳೆದ 4 ವರ್ಷಗಳಿಂದ ಎಂದರೆ 2020 ರಿಂದ ಐಸಿಸಿ ಅಧ್ಯಕ್ಷರಾಗಿ ಗ್ರೆಗ್ ಬಾರ್ಕ್ಲೇ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಈಗ ಇವರು ಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದಾರೆ. ಇವರ ಸ್ಥಾನಕ್ಕೆ ಬಿಸಿಸಿಐ ಕಾರ್ಯದರ್ಶಿ ಆಗಿದ್ದ ಜಯ್ ಶಾ ಅವರು ಬಂದಿದ್ದಾರೆ.
ಐಸಿಸಿ ಅಧ್ಯಕ್ಷರಾದ 5ನೇ ಭಾರತೀಯ ಜಯ್ ಶಾ
ಈಗ ಜಯ್ ಶಾ ಐಸಿಸಿ ಅಧ್ಯಕ್ಷರಾದ 5ನೇ ಭಾರತೀಯ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಶರದ್ ಪವಾರ್, ಎನ್. ಶ್ರೀನಿವಾಸನ್, ಶಶಾಂಕ್ ಮನೋಹರ್ ಮತ್ತು ಜಗಮೋಹನ್ ದಾಲ್ಮಿಯಾ ಅವರು ಐಸಿಸಿ ಅಧ್ಯಕ್ಷರಾಗಿದ್ದರು.
ಈ ಬಗ್ಗೆ ಏನಂದ್ರು ಜಯ್ ಶಾ?
ಐಸಿಸಿ ಅಧ್ಯಕ್ಷರಾಗಲು ನನಗೆ ಹೆಮ್ಮೆ ಆಗುತ್ತಿದೆ. ನನ್ನ ಮೇಲೆ ನಂಬಿಕೆ ಇಟ್ಟ ಐಸಿಸಿ ನಿರ್ದೇಶಕರು ಮತ್ತು ಸದಸ್ಯ ಮಂಡಳಿಗೆ ಕೃತಜ್ಞನಾಗಿದ್ದೇನೆ. ಇದು ನನ್ನ ಜೀವನದ ಹೆಮ್ಮೆಯ ಕ್ಷಣ. ನಾವು 2028ರ ಒಲಿಂಪಿಕ್ ಕ್ರೀಡಾಕೂಟಕ್ಕೆ ಈಗಿನಿಂದಲೇ ತಯಾರಿ ನಡೆಸುತ್ತಿದ್ದೇವೆ ಎಂದರು.
ಇದನ್ನೂ ಓದಿ: ಟೆಸ್ಟ್ ಕ್ರಿಕೆಟ್ನಲ್ಲೇ ಅತೀ ವೇಗದ ಅರ್ಧಶತಕ; ದಾಖಲೆ ಬರೆದ RCB ಸ್ಫೋಟಕ ಬ್ಯಾಟರ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ