/newsfirstlive-kannada/media/post_attachments/wp-content/uploads/2024/06/PRAJWAL.jpg)
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಆದ ಪ್ರಕರಣ ಹಾಗೂ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಎದುರಿಸುತ್ತಿರುವ ಆರೋಪಿ ಪ್ರಜ್ವಲ್ ರೇವಣ್ಣ ಅವರಿಗೆ ಹೀನಾಯ ಸೋಲಾಗಿದೆ. ಹಾಸನ ಮತದಾರರು ಕಾಂಗ್ರೆಸ್ ಅಭ್ಯರ್ಥಿಯ ಕೈ ಹಿಡಿದಿದ್ದು, 20 ವರ್ಷದ ಬಳಿಕ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆದ್ದು ಬೀಗಿದೆ.
/newsfirstlive-kannada/media/post_attachments/wp-content/uploads/2024/05/Hassan-Shreyas-patel.jpg)
ಹಾಸನದ ಲೋಕಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಆರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದರು. ಆಮೇಲೆ ಜೆಡಿಎಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದ ಪ್ರಜ್ವಲ್ ರೇವಣ್ಣ ಅವರು ತೀವ್ರ ಪೈಪೋಟಿ ನೀಡಿದ್ದರು. ಆದರೆ ಮುಂದಿನ ಹಂತದ ಮತಎಣಿಕೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಸತತ ಹಿನ್ನೆಡೆ ಅನುಭವಿಸಿ ತೀವ್ರ ಮುಖಭಂಗ ಅನುಭವಿಸಿದ್ದಾರೆ.
ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರ ಭರ್ಜರಿ ಜಯ ಸಾಧಿಸಿದ್ದು, ಅಧಿಕೃತ ಘೋಷಣೆ ಒಂದೇ ಬಾಕಿ ಉಳಿದಿದೆ. 16ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾದಾಗ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರು 4 ಲಕ್ಷ 2 ಸಾವಿರ 261 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
16ನೇ ಸುತ್ತಿನ ಮತ ಎಣಿಕೆ
ಕಾಂಗ್ರೆಸ್ 6,32,090
ಜೆಡಿಎಸ್ 5,89,829
14ನೇ ಸುತ್ತಿನ ಮತ ಎಣಿಕೆ
ಕಾಂಗ್ರೆಸ್ 6,01,152
ಜೆಡಿಎಸ್ 5,61,687
13ನೇ ಸುತ್ತಿನ ಮತಎಣಿಕೆ
ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ - 5,46,289
ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ಪಟೇಲ್ - 5,80,418
7603 ನೋಟಾ ಮತಗಳು
34129 ಮತಗಳಿಂದ ಶ್ರೇಯಸ್‌ಪಟೇಲ್ ಮುನ್ನಡೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us