/newsfirstlive-kannada/media/post_attachments/wp-content/uploads/2024/03/JDS-Candidate-List.jpg)
ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗಿದೆ. ಕಾಂಗ್ರೆಸ್ಸನ್ನು ಸೋಲಿಸಲು ಬಿಜೆಪಿ, ಜೆಡಿಎಸ್​ ಮೈತ್ರಿ ಮಾಡಿಕೊಂಡಿವೆ. ಬಿಜೆಪಿ ಈಗಾಗಲೇ ಬಹುತೇಕ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಈ ಬೆನ್ನಲ್ಲೀಗ ಜೆಡಿಎಸ್​​​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.
ಜೆಡಿಎಸ್​ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ದೇವೇಗೌಡ ಕೋಲಾರ, ಮಂಡ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ನಿರೀಕ್ಷೆಯಂತೆ ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ, ಕೋಲಾರದಿಂದ ಮಲ್ಲೇಶ್ ಬಾಬು ಕಣಕ್ಕಿಳಿಯಲಿದ್ದಾರೆ. ಜತೆಗೆ ಬಹುನಿರೀಕ್ಷಿತ ಮಂಡ್ಯ ಕ್ಷೇತ್ರದಿಂದ ಎಚ್.ಡಿ ಕುಮಾರಸ್ವಾಮಿ ಅವರೇ ಸ್ಪರ್ಧೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us