ತಮ್ಮ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ವಿನಂತಿ.. ಸಿಎಂಗೆ ಮನವಿ ಪತ್ರ ಸಲ್ಲಿಸಿದ ಜೆಡಿಎಸ್​ ಶಾಸಕರು

author-image
Gopal Kulkarni
Updated On
ತಮ್ಮ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ವಿನಂತಿ.. ಸಿಎಂಗೆ ಮನವಿ ಪತ್ರ ಸಲ್ಲಿಸಿದ ಜೆಡಿಎಸ್​ ಶಾಸಕರು
Advertisment
  • ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಜೆಡಿಎಸ್​ನ ಹಲವು ಶಾಸಕರು
  • ಕ್ಷೇತ್ರಕ್ಕೆ ಬಿಡುಗಡೆಯಾಗಿರುವ ಅನುದಾನಕ್ಕೆ ಅನುಮೂದನೆ ನೀಡಲು ಮನವಿ
  • ಸಿಎಂ ವಿಶೇಷ ಅನುದಾನದ ನಿಧಿಯನ್ನು ವಾರ್ಷಿಕ 5 ಕೋಟಿಗೆ ಏರಿಸಲು ವಿನಂತಿ

ರಾಜ್ಯದ ಜೆಡಿಎಸ್ ಶಾಸಕರು ತಮ್ಮ ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಬಿಡುಗಡೆಯಾಗಿರುವ ಕಡತಕ್ಕೆ ಅನುಮೋದನೆ ನೀಡುವಂತೆ ಹಾಗೂ ಶಾಸಕರ ಪ್ರದೇಶಾಭಿವೃದ್ಧಿಯ ನಿಧಿಯನ್ನು ಹೆಚ್ಚಿಸಬೇಕು ಎಂದು ಕುರಿತು ಸಿಎಂ ಸಿದ್ದರಾಮಯ್ಯನವರ ಬಳಿ ಮನವಿ ಪತ್ರ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ವಿವಿಧ ಇಲಾಖೆಗಳ ಅಡಿಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಬೇಕಿದೆ. ಹೀಗಾಗಿ ನಮ್ಮ ವಿಧಾನಸಭಾ ಕ್ಷೇತ್ರಗಳಿಗೆ ವಿಶೇಷ ಅನುದಾನ ಬಿಡುಗಡೆಯಾಗಿರುವ ಕಡತಕ್ಕೆ ಮಾನ್ಯ ಮುಖ್ಯಮಂತ್ರಿಗಳು ಅನುಮೋದನೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ನಮ್ಮ ಜನರಿಗೆ ಅನ್ಯಾಯ ಮಾಡಿದ್ದಕ್ಕೆ ನೀವು ಕುಂಟುತ್ತಿದ್ದೀರಿ.. CM ಮಂಡಿ ನೋವಿನ ಬಗ್ಗೆ ಪರಿಷತ್ ವಿಪಕ್ಷ ನಾಯಕ ಲೇವಡಿ

ಅಲ್ಲದೇ ಕಳೆದ 10 ವರ್ಷಗಳ ಹಿಂದೆ ಸ್ಥಳೀಯ ಪ್ರದೇಶಾಭಿವೃದ್ಧಿಯ ನಿಧಿಯನ್ನು ವಾರ್ಷಿಕ 2 ಕೋಟಿ ರೂಪಾಯಿಗಳಿಗೆ ನಿಗದಿಪಡಿಸಲಾಗಿತ್ತು. ಸದ್ಯ ಇರುವ ನಿಮ್ಮ ಸರ್ಕಾರ ದರಪಟ್ಟಿಯಲ್ಲಿ ನಿಗದಿಪಡಿಸಿರುವ ದರಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಕಾರಣ, ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯನ್ನು 5 ಕೋಟಿಗೆ ಹೆಚ್ಚಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ

ಇಂದು ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರು ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಿದ್ದು. ಶಾಸಕರ ಮನವಿಗೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ.ಇನ್ನು ಜೆಡಿಎಸ್ ಶಾಸಕರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಕೂಡ ಕಾಣಿಸಿಕೊಂಡಿದ್ದರು

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment