/newsfirstlive-kannada/media/post_attachments/wp-content/uploads/2024/06/suraj2.jpg)
ಅಸಹಜ ಲೈಂಗಿಕ ಕಿರುಕುಳ ಆರೋಪದ ಮೇಲೆ ಜೆಡಿಎಸ್ ಎಂಎಲ್​ಸಿ ಸೂರಜ್ ರೇವಣ್ಣ ಅವರ ಬಂಧನವಾಗಿದೆ. ಹಾಸನದ ಸೆನ್ ಠಾಣೆಯಲ್ಲಿ ಸೂರಜ್​ ರೇವಣ್ಣ ಅವರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ.
ಏನಿದು ಪ್ರಕರಣ?
MLC ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯದ ಗಂಭೀರ ಆರೋಪ ಕೇಳಿ ಬಂದಿತ್ತು. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೂರಜ್ ರೇವಣ್ಣ ವಿರುದ್ಧ FIR ದಾಖಲಾಗಿತ್ತು. ಅಸಹಜ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಾದ ಬೆನ್ನಲ್ಲೇ ಆರೋಪಿ ಸೂರಜ್ ರೇವಣ್ಣ ಅವರನ್ನು ಇದೀಗ ಸೆಣ್​ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಸೂರಜ್ ರೇವಣ್ಣ ವಿರುದ್ಧ ಸಂತ್ರಸ್ತ ಯುವಕ ದೂರು ನೀಡಿದ್ದರು. ಸಂತ್ರಸ್ತ ಯುವಕ ದೂರಿನ ಮೇರೆಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ವೇಳೆ ಸಂತ್ರಸ್ತ ಯುವಕನ ದೇಹದ ಮೇಲೆ ಕಚ್ಚಿದ ಗಾಯಗಳು ಪತ್ತೆಯಾಗಿವೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us