newsfirstkannada.com

Breaking News: ಸೋಲಿನ ಹೊಣೆ ಹೊತ್ತ ನಿಖಿಲ್​ ಕುಮಾರಸ್ವಾಮಿ ರಾಜೀನಾಮೆ

Share :

25-05-2023

    ತೆನೆ ಹೊತ್ತು ಭಾರ ಇಳಿಸಿದ ಜೆಡಿಎಸ್ ಯುವರಾಜ

    ಮಂಡ್ಯ, ರಾಮನಗರದಲ್ಲೂ 'ಕೈ' ಕೊಟ್ಟ ಮತದಾರರು

    ಸೋಲೇ ಅಂತಿಮವಲ್ಲ ಎಂದ ನಿಖಿಲ್ ಕುಮಾರಸ್ವಾಮಿ

ವಿಧಾನಸಭಾ ಚುನಾವಣೆಯಲ್ಲಿ JDS ಪಕ್ಷ ಸೋತಿದೆ. ಕಾಂಗ್ರೆಸ್​ ಅಧಿಕಾರ ಹಿಡಿದಿದೆ. ಆದರೀಗ ಮತ್ತೆ ಪಕ್ಷವನ್ನು ಮುನ್ನಲೆಗೆ ತರುವ ನಿಟ್ಟಿನಲ್ಲಿ ನಿಖಿಲ್​ ಕುಮಾರಸ್ವಾಮಿ ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ನೀಡುವ ಮೂಲಕ ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದಾರೆ. ಇದರೊಂದಿಗೆ ಪಕ್ಷದ ಜತೆ ಸದಾ ನಿಲ್ಲುವೆ ಎಂದು ಹೇಳುವ ಮೂಲಕ ಹೊಸ ನಾಯಕತ್ವಕ್ಕೆ ಅವಕಾಶ ಕೊಡಲು ಮನವಿ ಮಾಡಿದ್ದಾರೆ.

ವಿಧಾನ ಸಭಾ ಚುನಾವಣೆಯಲ್ಲಿ ನಿಖಿಲ್​ ಕುಮಾರಸ್ವಾಮಿ ರಾಮನಗರದಿಂದ ಸ್ಪರ್ಧಿಸಿದ್ದರು. ಆದರೆ ಈ ಕ್ಷೇತ್ರದಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಇಕ್ಬಾಲ್​ ಹುಸೇನ್​ ಗೆಲುವು ಸಾಧಿಸಿದ್ದರು. ಇದೀಗ ಸೋಲಿನ ಬಳಿಕ ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್​ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ಬಳಿಕ ಸೋಲಿನಿಂದ ಕಂಗೆಡದೆ ಪಕ್ಷ ಕಟ್ಟಲು ಮುಂದಾಗಿದ್ದೇವೆ. ಸೋಲೇ ಅಂತಿಮವಲ್ಲ ಎಂದು ಯುವ ನಾಯಕ ಹೇಳಿದ್ದಾರೆ.

ಪಕ್ಷ ಮರು ನಿರ್ಮಾಣ ದಿಸೆಯಲ್ಲಿ ನಿಖಿಲ್​ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ಪಕ್ಷ ಕಟ್ಟುವ ಕೆಲಸದಲ್ಲಿ ನಾನು ಎಂದೂ ಹಿಂಜರಿಯಲಾರೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

Breaking News: ಸೋಲಿನ ಹೊಣೆ ಹೊತ್ತ ನಿಖಿಲ್​ ಕುಮಾರಸ್ವಾಮಿ ರಾಜೀನಾಮೆ

https://newsfirstlive.com/wp-content/uploads/2023/05/Nikhil.jpg

Load More