newsfirstkannada.com

ಜೆಡಿಎಸ್‌ಗೆ ಮಣಿದ ಬಿಜೆಪಿ ಹೈಕಮಾಂಡ್‌; ಮಂಡ್ಯ, ಹಾಸನ, ಕೋಲಾರ ಕ್ಷೇತ್ರದ ಬಗ್ಗೆ ಅಧಿಕೃತ ಘೋಷಣೆ

Share :

Published March 23, 2024 at 11:51am

    ಮೊದಲಿಂದಲೂ ಈ 3 ಸ್ಥಾನಗಳಿಗಾಗಿ ದಳಪತಿಗಳು ಬಿಗಿಪಟ್ಟು

    ಅರಮನೆ ಮೈದಾನದ ವೃಕ್ಷ ಸಭಾಂಗಣದಲ್ಲಿ ಬಿಜೆಪಿ ಘೋಷಣೆ

    ಅಂದುಕೊಂಡಂತೆ 3 ಸ್ಥಾನಗಳನ್ನ ಗಿಟ್ಟಿಸಿಕೊಂಡ ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಸೀಟ್ ಹಂಚಿಕೊಂಡು ಸ್ಪರ್ಧೆ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಹಾಸನ, ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿದ್ದೇವೆ ಎಂದು ಬಿಜೆಪಿಯ ಚುನಾವಣಾ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲಾ ಅವರು ಹೇಳಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದ ವೃಕ್ಷ ಸಭಾಂಗಣದಲ್ಲಿ ನಡೆಯುತ್ತಿರುವ ರಾಜ್ಯ ಚುನಾವಣೆ ನಿರ್ವಹಣಾ ಸಮಿತಿಯ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ರಾಧಾ ಮೋಹನ್ ದಾಸ್ ಮಾತನಾಡಿದರು. ಕೋಲಾರ, ಮಂಡ್ಯ, ಹಾಸನ ಕ್ಷೇತ್ರಗಳಲ್ಲಿ ಅಭ್ಯರ್ಥಿ ಯಾರೆಂಬುದು ಮುಖ್ಯವಲ್ಲ. ಕಾರ್ಯಕರ್ತರೆಲ್ಲ ಒಟ್ಟಾಗಿ ಪೂರ್ತಿ ಶ್ರದ್ಧೆಯನ್ನಿಟ್ಟು ಮನಪೂರ್ವಕವಾಗಿ ಕೆಲಸ ಮಾಡಬೇಕು. 25 ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಜೆಡಿಎಸ್​ ಎಲ್ಲಿಯು ಕೂಡ ಹಸ್ತಕ್ಷೇಪ ಮಾಡಿಲ್ಲ. ಹೀಗಾಗಿ ಅವರು ಕೇಳಿದ 3 ಕ್ಷೇತ್ರಗಳನ್ನು ಬಿಟ್ಟು ಕೊಟ್ಟಿದ್ದೇವೆ ಎಂದು ರಾಧಾ ಮೋಹನ್ ದಾಸ್ ಅವರು ಕಾರ್ಯಾಗಾರದಲ್ಲಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಇದನ್ನು ಓದಿ: ಮರುಜೀವ ಪಡೆದ ಪಂತ್​​ಗೆ ಇದು ಬದುಕಿನ ಸೆಕೆಂಡ್ ಇನ್ನಿಂಗ್ಸ್; ಕ್ರಿಕೆಟ್ ಲೋಕದಲ್ಲೂ ಪವಾಡ ಮಾಡಲು ರೆಡಿ..!

3 ಕ್ಷೇತ್ರಗಳಲ್ಲಿ ಕಾರ್ಯಕರ್ತರು ಒಟ್ಟಿಗೆ ಕೆಲಸ ಮಾಡಿ, ಕೈ ಮುಗಿದು ಕೇಳಿಕೊಳ್ಳುತ್ತೇನೆ ಪ್ರಧಾನಿ ಮೋದಿಗಾಗಿ ಒಟ್ಟಾಗಿ ಕೆಲಸ ಮಾಡಬೇಕು. ಈ ಕ್ಷೇತ್ರಗಳ ಕಾರ್ಯಕರ್ತರು ಒಗ್ಗಟ್ಟಾಗಿ, ನಿಮ್ಮ ವೈಯಕ್ತಿಕ ಮುನಿಸು ಏನೇ ಇದ್ದರೂ ಬಿಟ್ಟು ಬಿಡಿ. ಗೆಲುವಿನತ್ತ ಎಲ್ಲರೂ ಗಮನ ಕೊಡಬೇಕು ಎಂದು ಇದೇ ವೇಳೆ ಹೇಳಿದರು.

ಅರಮನೆ ಮೈದಾನದ ವೃಕ್ಷ ಸಭಾಂಗಣದಲ್ಲಿ ನಡೆಯುತ್ತಿರುವ ರಾಜ್ಯ ಚುನಾವಣೆ ನಿರ್ವಹಣಾ ಸಮಿತಿಯ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್, ಪ್ರೀತಮ್ ಗೌಡ, ಪಿ.ರಾಜು, ಪರಿಷತ್ ಸದಸ್ಯ ಭಾರತಿ ಶೆಟ್ಟಿ, ಕೇಸವ ಪ್ರಸಾದ್ ಈ ವೇಳೆ ಉಪಸ್ಥಿತರಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಜೆಡಿಎಸ್‌ಗೆ ಮಣಿದ ಬಿಜೆಪಿ ಹೈಕಮಾಂಡ್‌; ಮಂಡ್ಯ, ಹಾಸನ, ಕೋಲಾರ ಕ್ಷೇತ್ರದ ಬಗ್ಗೆ ಅಧಿಕೃತ ಘೋಷಣೆ

https://newsfirstlive.com/wp-content/uploads/2024/02/HDK-Amith-Sha.jpg

Load More