/newsfirstlive-kannada/media/post_attachments/wp-content/uploads/2024/12/PLANE-2.jpg)
ಇಂದು ಬೆಳಗ್ಗೆ ದಕ್ಷಿಣ ಕೊರಿಯಾದಲ್ಲಿ ದೊಡ್ಡ ವಿಮಾನ ಅಪಘಾತ ಸಂಭವಿಸಿದೆ. 175 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಮಾನವು ರನ್‌ವೇಯಿಂದ ಸ್ಕಿಡ್ ಆಗಿ ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗೋಡೆಗೆ ಡಿಕ್ಕಿ ಹೊಡೆದಿದೆ.
ದುರ್ಘಟನೆಯ ಪರಿಣಾಮ ವಿಮಾನ ಅಪಘಾತದಲ್ಲಿ 179 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ದುರಂತದಲ್ಲಿ ಇಬ್ಬರನ್ನು ಮಾತ್ರ ಜೀವಂತವಾಗಿ ರಕ್ಷಣೆ ಮಾಡಲಾಗಿದೆ.
/newsfirstlive-kannada/media/post_attachments/wp-content/uploads/2024/12/South-Korea-2.jpg)
ಲ್ಯಾಂಡಿಂಗ್ ವೇಳೆ ಅಪಘಾತ
ವರದಿಗಳ ಪ್ರಕಾರ.. ಜೆಜು ಏರ್ ವಿಮಾನವು ಥೈಲ್ಯಾಂಡ್‌ನಿಂದ ಹಿಂತಿರುಗುತ್ತಿತ್ತು. ಲ್ಯಾಂಡಿಂಗ್ ವೇಳೆ ಅವಘಡ ಸಂಭವಿಸಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಮುವಾನ್ ವಿಮಾನ ನಿಲ್ದಾಣದ ಅಧಿಕಾರಿ ತಿಳಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಬೆಂಕಿಯನ್ನು ನಂದಿಸಲಾಗಿದೆ ಎಂದು ಅದೇ ಸಂದರ್ಭದಲ್ಲಿ ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
ಮುವಾನ್ ವಿಮಾನ ನಿಲ್ದಾಣದಲ್ಲಿ ಇಳಿಯಲು ಪ್ರಯತ್ನಿಸುತ್ತಿತ್ತು. ಪಕ್ಷಿಯೊಂದು ವಿಮಾನಕ್ಕೆ ಡಿಕ್ಕಿ ಹೊಡೆದಿದೆ. ಹೀಗಾಗಿ ಲ್ಯಾಂಡಿಂಗ್ ಮಾಡುವಾಗ ವಿಮಾನ ಸ್ಕಿಡ್ ಆಗಿದೆ. ನಂತರ ವಿಮಾನವು ನಿಲ್ದಾಣದ ಗೋಡೆಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ:VIDEO: ಹಕ್ಕಿ ಡಿಕ್ಕಿ ಹೊಡೆದು ವಿಮಾನ ಪತನ; ಲ್ಯಾಂಡಿಂಗ್ ವೇಳೆ ಸಂಭವಿಸಿದ ಭಯಾನಕ ದೃಶ್ಯ ಇಲ್ಲಿದೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us