newsfirstkannada.com

‘ದೇವೇಗೌಡರೇ ಪ್ಲಾನ್ ಮಾಡಿ ವಿದೇಶಕ್ಕೆ ಕಳಿಸಿದ್ರಾ?’- ಪ್ರಜ್ವಲ್ ಕೇಸ್‌ಗೆ ಹೊಸ ಟ್ವಿಸ್ಟ್ ಕೊಟ್ಟ ಸಿಎಂ ಸಿದ್ದರಾಮಯ್ಯ

Share :

Published May 1, 2024 at 6:15pm

Update May 1, 2024 at 8:49pm

    ಸಿಎಂ ಹೇಳಿಕೆಗೆ ಕೆಂಡಾಮಂಡಲರಾದ JDS ಕೋರ್ ಕಮಿಟಿ ಜಿ.ಟಿ. ದೇವೇಗೌಡ

    ದೇವೆಗೌಡರೇ ಪ್ಲಾನ್ ಮಾಡಿ ಪ್ರಜ್ವಲ್​ಗೆ ವಿದೇಶಕ್ಕೆ ಕಳುಹಿಸಿದ್ದಾರೆ ಎಂದ ಸಿಎಂ

    ಚುನಾವಣೆಗೋಸ್ಕರ ದೇವೇಗೌಡರನ್ನು ತೇಜೋವಧೆ ಮಾಡುವುದು ಎಷ್ಟು ಸರಿ

ಹಾಸನ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ SIT ವಿಚಾರಣೆಗೆ ಹಾಜರಾಗುವಂತೆ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ನೋಟಿಸ್ ನೀಡಲಾಗಿದೆ. ಈ ಬೆನ್ನಲ್ಲೇ ಮಾಜಿ ಪ್ರಧಾನಿ ಹೆಚ್​​.ಡಿ ದೇವೇಗೌಡರೇ ಪ್ಲಾನ್​ ಮಾಡಿ ಪ್ರಜ್ವಲ್‌ ರೇವಣ್ಣನನ್ನು ವಿದೇಶಕ್ಕೆ ಕಳಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯನವರು ನೇರವಾಗಿ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ.. ಪ್ರಧಾನಿ ಮೋದಿಗೆ ರಾಹುಲ್‌ ಗಾಂಧಿ ಖಡಕ್ ಪ್ರಶ್ನೆ; ಹೇಳಿದ್ದೇನು?

ಯಾದಗಿರಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು, ಹೆಚ್​.ಡಿ ದೇವೇಗೌಡರೇ ಪ್ಲಾನ್​ ಮಾಡಿ ಪ್ರಜ್ವಲ್​ ರೇವಣ್ಣ ಅವರನ್ನು ವಿದೇಶಕ್ಕೆ ಕಳುಹಿಸಿದ್ದಾರೆ. ವೀಸಾ ಕೋಡೋರೋ ಯಾರು, ಪಾಸ್ ಕೋಡೋರು ಬಿಜೆಪಿಯವರೇ ತಾನೇ ಅಂತ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಆಕ್ರೋಶ ಹೊರ ಹಾಕಿದ್ದಾರೆ. ಈ ಬಗ್ಗೆ ನ್ಯೂಸ್​ ಫಸ್ಟ್ ಜೊತೆ ಮಾತಾಡಿದ ಅವರು, ಮುಖ್ಯಮಂತ್ರಿಗಳಿಗೆ ಗೊತ್ತಿರಬೇಕು. ಆದರೆ ರಾಜಕೀಯವಾಗಿ ಹೀಗೆ ಮಾತಾಡುವುದು ಸರಿಯಲ್ಲ. ದೇವೇಗೌಡರಿಗೂ ಹಾಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ. ವೋಟ್​ ಹಾಕಿದ ಮೇಲೆ ಅವರು ವಿದೇಶಕ್ಕೆ ಹೋಗಿದ್ದಾನೆ. ಅದನ್ನೂ ತಿಳಿದುಕೊಳ್ಳದೇ ಸಿಎಂ ಹೀಗೆ ಮಾತಾಡುವುದು ಸರಿಯಲ್ಲ. ದೇವೇಗೌಡರು ಯಾವುದೇ ಕಾರಣಕ್ಕೂ ಆ ಕೆಲಸ ಮಾಡೋರಲ್ಲ. ಪ್ರಜ್ವಲ್ ರೇವಣ್ಣ ಮುಂಚೆನೇ ಫಿಕ್ಸ್​ ಮಾಡಿಕೊಂಡಿದ್ದ. ಎಲೆಕ್ಷನ್​ ಮುಗಿದ ಬಳಿಕ ವಿದೇಶಕ್ಕೆ ಹೋಗಬೇಕು ಅಂತ. ಎಸ್​ಐಟಿ ಕೇಸ್​ ಹಾಕಿದ್ದು ಯಾವಾಗ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿದ ಮೇಲೆ. ಇಂತಹ ಸಮಯದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಚುನಾವಣೆಗೋಸ್ಕರ ದೇವೇಗೌಡರನ್ನು ತೇಜೋವಧೆ ಮಾಡುವುದು ಸರಿಯಲ್ಲ ಅಂತಾ ಆಕ್ರೋಶ ಹೊರ ಹಾಕಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಇನ್ನೆರಡು ದಿನದಲ್ಲಿ ಕರ್ನಾಟಕಕ್ಕೆ ಬರುತ್ತಾನೆ ಎಂದು ಜಿ.ಟಿ. ದೇವೇಗೌಡ ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

‘ದೇವೇಗೌಡರೇ ಪ್ಲಾನ್ ಮಾಡಿ ವಿದೇಶಕ್ಕೆ ಕಳಿಸಿದ್ರಾ?’- ಪ್ರಜ್ವಲ್ ಕೇಸ್‌ಗೆ ಹೊಸ ಟ್ವಿಸ್ಟ್ ಕೊಟ್ಟ ಸಿಎಂ ಸಿದ್ದರಾಮಯ್ಯ

https://newsfirstlive.com/wp-content/uploads/2024/05/hd.jpg

Load More