newsfirstkannada.com

‘ನೇಹಾ ಹಂತಕನನ್ನು ಎನ್‌ಕೌಂಟರ್ ಮಾಡಿ’- ಹುಬ್ಬಳ್ಳಿಯಲ್ಲಿ ಬೀದಿಗಿಳಿದು ಹಿಂದೂ ಕಾರ್ಯಕರ್ತರ ಒತ್ತಾಯ

Share :

Published April 19, 2024 at 8:15pm

  ಕೈಯಲ್ಲಿ ಜಸ್ಟೀಸ್ ಫಾರ್ ನೇಹಾ ಎಂಬ ಪೋಸ್ಟರ್ ಹಿಡಿದು ಘೋಷಣೆ

  ಕೋರ್ಟ್ ವೃತ್ತದಲ್ಲಿ ಹಿಂದೂಪರ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ

  ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ

ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಕ್ಯಾಂಪಸ್​​ನಲ್ಲಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾಳನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಕೊಲೆ ಪ್ರಕರಣದಲ್ಲಿ ಪೊಲೀಸರು ಆರೋಪಿ ಫಯಾಜ್​ನನ್ನು (23) ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಈ ಘಟನೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಜಸ್ಟೀಸ್ ಫಾರ್ ನೇಹಾ ಹೋರಾಟ ತೀವ್ರಗೊಂಡಿದೆ.

ಇದನ್ನೂ ಓದಿ: 11 ಬಾರಿ ಚಾಕು ಇರಿದು ನೇಹಾ ಹಿರೇಮಠ್ ಕೊಲೆ; ಲವ್ ಜಿಹಾದ್ ಅನುಮಾನ, ತನಿಖೆಗೆ ಆಗ್ರಹ

ನೇಹಾ ಹಿರೇಮಠ್ ಅನ್ನು 11 ಬಾರಿ ಕುತ್ತಿಗೆಗೆ ಇರಿದು ಕೊಂದ ಆರೋಪಿ ಫಯಾಜ್‌ ವಿರುದ್ಧ ಹುಬ್ಬಳ್ಳಿಯಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಹಿಂದೂಪರ ಸಂಘಟನೆ ವತಿಯಿಂದ ತೀವ್ರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೋರ್ಟ್ ವೃತ್ತದಲ್ಲಿ ಹಿಂದೂಪರ ಸಂಘಟನೆ ನೇತೃತ್ವದಲ್ಲಿ ಈ ಬೃಹತ್​ ಪ್ರತಿಭಟನೆ ನಡೆಸಲಾಗಿದೆ. ನೂರಾರು ವಿದ್ಯಾರ್ಥಿಗಳಿಂದ ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರ ಹಾಗೂ ಆರೋಪಿ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಜಸ್ಟೀಸ್ ಫಾರ್ ನೇಹಾ ಅನ್ನೋ ಟ್ರೆಂಡಿಂಗ್ ಆಗಿದ್ದು ಕೊಲೆಗಾರನ ಮೇಲೆ ನೆಟ್ಟಿಗರು ಕೆಂಡಕಾರುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಸಾಲು, ಸಾಲು ಮರ್ಡರ್‌; ಗೆಳೆಯರ ಜೊತೆ ಪಾರ್ಟಿಗೆ ಹೋಗಿದ್ದ ಯುವಕನ ಬರ್ಬರ ಹತ್ಯೆ

ಸಿಎಂ ಹಾಗೂ ಗೃಹ ಸಚಿವರ ವಿರುದ್ಧ ಧಿಕ್ಕಾರ ಕೂಗುತ್ತಿದ್ದಾರೆ. ಆರೋಪಿಗೆ ಎನ್‌ಕೌಂಟರ್ ಮಾಡಿ ಅಂತಾ ಕೈಯಲ್ಲಿ ಜಸ್ಟೀಸ್ ಫಾರ್ ನೇಹಾ ಎಂಬ ಪೋಸ್ಟರ್ ಹಿಡಿದು ಘೋಷಣೆ ಕೂಗುತ್ತಿದ್ದಾರೆ. ಜೊತೆಗೆ ಟೈರ್​ಗೆ ಬೆಂಕಿ ಹಚ್ಚಿ ಜೈ ಶ್ರೀರಾಮ್ ಘೋಷಣೆ ಮೂಲಕ ಖಂಡನೆ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನಾಕಾರರ ಮನವೊಲಿಸಲು ಪೊಲೀಸರ ಹರಸಾಹಸ ಪಡುವಂತ ಸ್ಥಿತಿ ನಿರ್ಮಾಣಗೊಂಡಿದೆ. ಇನ್ನು, ಪ್ರತಿಭಟನಾಕಾರರು ವಾಹನಕ್ಕೆ ಒದ್ದು ಆಕ್ರೋಶ ಹೊರ ಹಾಕುತ್ತಿದ್ದಾರೆ. ಕೋರ್ಟ್ ಸರ್ಕಲ್‌ನಿಂದ ರೈಲ್ವೆ ನಿಲ್ದಾಣ ಕಡೆ ಹೊರಟಿದ್ದ ಗೂಡ್ಸ್​ಗೆ ಹಿಂದೂ ಸಂಘಟನೆ ಒದ್ದು ತಡೆದು ನಿಲ್ಲಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ನೇಹಾ ಹಂತಕನನ್ನು ಎನ್‌ಕೌಂಟರ್ ಮಾಡಿ’- ಹುಬ್ಬಳ್ಳಿಯಲ್ಲಿ ಬೀದಿಗಿಳಿದು ಹಿಂದೂ ಕಾರ್ಯಕರ್ತರ ಒತ್ತಾಯ

https://newsfirstlive.com/wp-content/uploads/2024/04/neha1.jpg

Load More