/newsfirstlive-kannada/media/post_attachments/wp-content/uploads/2024/06/ANNAMALAI_1.jpg)
ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ಅವರು ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಹೈಕಮಾಂಡ್ ಸೂಚಿಸಿದ ಹಿನ್ನೆಲೆಯಲ್ಲಿ ಕೆ.ಅಣ್ಣಾಮಲೈ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಎರಡು ದಿನಗಳ ಹಿಂದೆಯೇ ಕೆ.ಅಣ್ಣಾಮಲೈ ಅವರು ಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ರಾಜಕೀಯ ಮೂಲಗಳು ಹೇಳಿದ್ದವು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಅಣ್ಣಾಮಲೈ ಅವರಿಗೆ ಬಿಜೆಪಿ ನಿರ್ಧಾರವನ್ನು ತಿಳಿಸಲಾಗಿತ್ತು. ಅದರಂತೆ ಈಗ ಕೆ.ಅಣ್ಣಾಮಲೈ ಅವರು ಸ್ಥಾನದಿಂದ ಕೆಳಗಿಳಿದಿದ್ದಾರೆ.
ರಾಜೀನಾಮೆ ಬಳಿಕ ಮಾತನಾಡಿದ ಕೆ.ಅಣ್ಣಾಮಲೈ ಅವರು, ಈಗ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ನಾನಲ್ಲ. ಆದರೆ ತಮಿಳುನಾಡಿನಲ್ಲಿ ಜೀವ ಕೊಟ್ಟು ಬಿಜೆಪಿ ಪಕ್ಷವನ್ನು ಬೆಳೆಸಿದ್ದೇನೆ. ಮುಂದಿನ ನೂತನ ರಾಜ್ಯಾಧ್ಯಕ್ಷ ಯಾರಾಗಬೇಕು ಎಂದು ನಾನು ಯಾರನ್ನೂ ಸೂಚಿಸಿಲ್ಲ. ಈ ಮಣ್ಣನ್ನ ಬಿಟ್ಟು ನಾನು ಎಲ್ಲಿಗೂ ಹೋಗಲ್ಲ. ಸದ್ಯ ಬಿಜೆಪಿ ರಾಜ್ಯಾಧ್ಯಕ್ಷರ ರೇಸ್​ನಲ್ಲಿ ನಾನು ಇಲ್ಲ. ಈ ಪಕ್ಷ ಚೆನ್ನಾಗಿರಬೇಕು. ಏಕೆಂದರೆ ಈ ಪಕ್ಷದಲ್ಲಿ ಎಲ್ಲ ಒಳ್ಳೆಯವರೇ ಇದ್ದಾರೆ. ಈ ಪಕ್ಷಕ್ಕಾಗಿ ಸಾಕಷ್ಟು ಜನ ಉಸಿರು ಕೊಟ್ಟಿದ್ದಾರೆ. ಬಿಜೆಪಿ ನೂತನ ಅಧ್ಯಕ್ಷರನ್ನ ಆಯ್ಕೆ ಮಾಡುವಾಗ ಇನ್ನಷ್ಟು ಮಾತನಾಡುತ್ತೇನೆ ಎಂದು ಅಣ್ಣಾಮಲೈ ಅವರು ಹೇಳಿದ್ದಾರೆ.
/newsfirstlive-kannada/media/post_attachments/wp-content/uploads/2024/03/ANNAMALAI_MODI.jpg)
ತಮಿಳುನಾಡಿನ ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷ ಯಾರು?
ಸದ್ಯ ಕೆ.ಅಣ್ಣಾಮಲೈ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಹಿಂದುಳಿದ ಸಮುದಾಯಕ್ಕೆ ಸೇರಿರುವ ನೈನಾರ್ ನಾಗೇಂದ್ರನ್ ಅವರು ಆಯ್ಕೆ ಆಗುವ ಸಾಧ್ಯತೆ ಇದೆ. ಮುಂದಿನ ವರ್ಷ ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಬಿಜೆಪಿ ಗುರಿ ಇಟ್ಟುಕೊಂಡಿದೆ.
ಸದ್ಯಕ್ಕಂತೂ ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುತ್ತಿದ್ದರಿಂದ ಅಣ್ಣಾಮಲೈ ಅವರು ರಾಜೀನಾಮೆ ನೀಡಿದ್ದಾರೆ ಎಂದು ವ್ಯಾಖ್ಯಾನ ಮಾಡಲಾಗುತ್ತಿದೆ. ಅಣ್ಣಾಮಲೈ ಅವರು ರಾಜೀನಾಮೆ ಬೆನ್ನಲ್ಲೇ ಬಿಜೆಪಿ ಹಾಗೂ ಎಐಎಡಿಎಂಕೆ ಮೈತ್ರಿ ಮಾಡಿಕೊಂಡು ಘೋಷಣೆ ಮಾಡುವ ಸಾಧ್ಯತೆ ಇದೆ.
ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
 Follow Us