/newsfirstlive-kannada/media/post_attachments/wp-content/uploads/2024/08/tharun-sudhir3.jpg)
ಸ್ಯಾಂಡಲ್​ವುಡ್​​ ಸ್ಟಾರ್​ ಡೈರೆಕ್ಟರ್​​ ತರುಣ್ ಕಿಶೋರ್ ಸುಧೀರ್ ಹಾಗೂ ಕನ್ನಡದ ನಟಿ ಸೋನಲ್ ಮೊಂತೆರೊ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರು ಹಿರಿಯರು, ಸ್ನೇಹಿತರು, ಹಾಗೂ ಬಂಧು ಮಿತ್ರರ ಸಮ್ಮುಖದಲ್ಲಿ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮದುವೆಯಾಗಿದ್ದಾರೆ.
/newsfirstlive-kannada/media/post_attachments/wp-content/uploads/2024/08/tharun-sudhir1.jpg)
ತರುಣ್ ಸುಧೀರ್ ಹಾಗೂ ಸೋನಲ್ ಮದುವೆಯೂ ಮೈಸೂರು ರಸ್ತೆಯ ಪೂರ್ಣಿಮಾ ಪ್ಯಾಲೆಸ್​ನಲ್ಲಿ ನಡೆಯುತ್ತಿದೆ. ನಿನ್ನೆ ಸ್ಟಾರ್ ಜೋಡಿದ ಆರತಕ್ಷತೆ ಸಮಾರಂಭಕ್ಕೆ ಸಿನಿಮಾ ತಾರೆಯರು, ರಾಜಕೀಯ ಗಣ್ಯರು ಆಗಮಿಸಿ ನವ ಜೋಡಿಗೆ ಶುಭ ಹಾರೈಸಿದ್ದರು.
/newsfirstlive-kannada/media/post_attachments/wp-content/uploads/2024/08/tharun-sudhir2.jpg)
ಇಂದು ಕೂಡ ಹಲವಾರು ಸೆಲೆಬ್ರಿಟಿಗಳು ತರುಣ್ ಸುಧೀರ್ ಹಾಗೂ ಸೋನಲ್ ಮದುವೆಯಲ್ಲಿ ಭಾಗಿಯಾಗಿದ್ದಾರೆ. ನಟ ಶರಣ್​ ದಂಪತಿ, ನಟಿ ಶೃತಿ ಕುಟುಂಬಸ್ಥರು, ನೆನಪಿರಲಿ ಪ್ರೇಮ್ ದಂಪತಿ ಸೇರಿದಂತೆ ಇನ್ನೂ ಹಲವಾರು ಸ್ಟಾರ್​ ನಟ ನಟಿಯರು ಬಂದಿದ್ದಾರೆ. ಸದ್ಯ ಸ್ಟಾರ್​ ಜೋಡಿಯ ಮದುವೆಯ ಫೋಟೋಗಳು ಸಾಮಾಜಿಕಲ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಇದೇ ಫೋಟೋಗಳನ್ನು ನೋಡಿದ ಅಭಿಮಾನಿಗಳು ನವಜೋಡಿಗೆ ಶುಭ ಹಾರೈಸಿದ್ದಾರೆ. ಸದ್ಯ ತರುಣ್ ಸುಧೀರ್ ಅವರ ಮನೆಯಲ್ಲಿ ಸಂಭ್ರಮ ಮನೆಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us