ರಾಜ್ಯದಲ್ಲೇ ಮೊದಲು ಭರ್ತಿಯಾದ ಕಬಿನಿ ಡ್ಯಾಂ! ನದಿ ಪಾತ್ರದ ಜನರಿಗೆ ಎಚ್ಚರಿಕೆ

author-image
AS Harshith
Updated On
Kabini: ಉಕ್ಕಿ ಹರಿಯುತ್ತಿದ್ದಾಳೆ ಕಪಿಲೆ! ಪರಶುರಾಮ ದೇವಸ್ಥಾನ ಮುಳುಗಡೆ, ಮನೆ ಖಾಲಿ ಮಾಡುತ್ತಿದ್ದಾರೆ ಜನರು
Advertisment
  • ಕೇರಳದ ವಯನಾಡು ಪ್ರದೇಶದಲ್ಲಿ ಜೋರು ಮಳೆ
  • ರಾಜ್ಯದಲ್ಲೇ ಮೊದಲು ಭರ್ತಿಯಾದ ಕಬಿನಿ ಅಣೆಕಟ್ಟು
  • ಕಪಿಲಾ ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದಿರುವಂತೆ ಸೂಚನೆ

ಮೈಸೂರು: ಕೇರಳದ ವಯನಾಡು ಪ್ರದೇಶದಲ್ಲಿ ಜೋರು ಮಳೆಯ ಹಿನ್ನೆಲೆ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯ ಡ್ಯಾಂ ಭರ್ತಿಯಾಗಿದೆ. ಕಬಿನಿ ಜಲಾಶಯ ತುಂಬಿದ ಕಾರಣ ನದಿ ಪಾತ್ರದ ಜನಕ್ಕೆ ಧ್ವನಿವರ್ಧಕ ಮೂಲಕ ಎಚ್ಚರಿಕೆ ರವಾನಿಸಲಾಗುತ್ತಿದೆ.

ಮಳೆಯಿಂದಾಗಿ ಕಬಿನಿ ಜಲಾಶಯದ ಒಳಹರಿವು ಗಣನೀಯ ಏರಿಕೆ ಕಂಡಿದೆ. ಜಲಾಶಯದ ‌ನಾಲ್ಕು ಕ್ರಸ್ಟ್‌ ಗೇಟ್‌ಗಳ ಮೂಲಕ ನೀರು ಹರಿಸಲಾಗುತ್ತಿದೆ.

ಇದನ್ನೂ ಓದಿ: ಸ್ಟೇರಿಂಗ್​ ಕಟ್​​! ಸರ್ಕಾರಿ ಬಸ್​ ಪಲ್ಟಿ; 30ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ಗಾಯ, ಓರ್ವ ವಿದ್ಯಾರ್ಥಿನಿ ಗಂಭೀರ

ಕಬಿನಿ ರಾಜ್ಯದಲ್ಲೇ ಮೊದಲು ಭರ್ತಿಯಾದ ಅಣೆಕಟ್ಟು ಆಗಿದೆ. ಹೀಗಾಗಿ ನದಿ ಪಾತ್ರದ ಜನರು ಎಚ್ಚರಿಕೆ ವಹಿಸಲು ಸೂಚನೆ ಹೊರಡಿಸಿದೆ. ಯಾವುದೇ ಕ್ಷಣದಲ್ಲಾದರೂ ನದಿಗೆ ಬಿಡುವ ನೀರಿನ ಪ್ರಮಾಣ ಹೆಚ್ಚಾಗಲಿದೆ. ಕಪಿಲಾ ನದಿ ಪಾತ್ರದ ಜನ ಎಚ್ಚರಿಕೆಯಿಂದ ಇರುವಂತೆ ಹೇಳಲಾಗಿದೆ.

ಇದನ್ನೂ ಓದಿ: ಮದುವೆ ಮುಗಿಸಿ ಬರುವಾಗ ಕಾರು ಅಪಘಾತ.. ಓರ್ವ ಸಾವು, ಇಬ್ಬರಿಗೆ ಗಾಯ

ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಧ್ವನಿವರ್ಧಕ ಮೂಲಕ ಪ್ರಚಾರ ಮಾಡಲಾಗುತ್ತಿದೆ. ನದಿ ಪಾತ್ರಕ್ಕೆ ಹೋಗದಂತೆ ಮತ್ತು ಜಾನುವಾರುಗಳನ್ನು ಸುರಕ್ಷಿತ ಪ್ರದೇಶಗಳಿಗೆ ರವಾನಿಸುವಂತೆ ಧ್ವನಿ ವರ್ಧಕದ ಮೂಲಕ ಪ್ರಚಾರ ಮಾಡಲಾಗುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment