ಅಮೆರಿಕದ ನ್ಯೂಜೆರ್ಸಿಯಲ್ಲಿ ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ಅಮಾವಾಸ್ಯೆ ಪೂಜೆ; ಏನಿದರ ವಿಶೇಷ?

author-image
Gopal Kulkarni
Updated On
ಅಮೆರಿಕದ ನ್ಯೂಜೆರ್ಸಿಯಲ್ಲಿ ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ಅಮಾವಾಸ್ಯೆ ಪೂಜೆ; ಏನಿದರ ವಿಶೇಷ?
Advertisment
  • ನ್ಯೂಜೆರ್ಸಿಯಲ್ಲಿರುವ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಶಾಖೆ
  • ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಶ್ರೀಗಳಿಂದ ನೇರವೇರಿದ ಅಭಿಷೇಕ
  • ಮೈಸೂರು ಶಾಖೆಯ ಪೂಜ್ಯ ಸೋಮೇಶ್ವರನಾಥ ಸ್ವಾಮೀಜಿಯವರ ಉಪಸ್ಥಿತಿ

ಅಮೆರಿಕದ ನ್ಯೂಯಾರ್ಕ್​ನ ನ್ಯೂಜೆರ್ಸಿಯಲ್ಲಿರುವ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಶಾಖೆಯಲ್ಲಿ ಶ್ರಾವಣ ಅಮವಾಸ್ಯೆಯ ನಿಮಿತ್ಯ ಇಂದು ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ಅಭಿಷೇಕ ಮಾಡಲಾಯಿತು. ಈ ಮೂಲಕ ಶ್ರಾವಣ ಅಮವಾಸ್ಯೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಹಲವಾರು ಭಕ್ತರು ಕುಟುಂಬ ಸಮೇತ ಈ ಪೂಜೆಯಲ್ಲಿ ಭಾಗಿಯಾಗಿ ಧನ್ಯತೆ ಕಂಡರು.

publive-image

ಇದನ್ನೂ ಓದಿ:‘ಸ್ವರ್ಗಕ್ಕೆ ಹೋಗಬೇಕಾದ್ರೆ ಸಂಸ್ಕೃತ ಕಲೀಬೇಕು’- ಸುಗುಣೇಂದ್ರ ತೀರ್ಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ

ಪೂಜಾ ಕಾರ್ಯಕ್ರಮವು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀನಿರ್ಮಲಾನಂದನಾಥ ಮಹಾಸ್ವಾಮೀಜಿಯಯವರ ದಿವ್ಯ ಸಾನಿಧ್ಯದಲ್ಲಿ ನೆರವೇರಿತು.

publive-image

ಇದನ್ನೂ ಓದಿ:ನವ ವಿವಾಹಿತರಿಗೆ ಶುಭ ಸುದ್ದಿ, ಉದ್ಯೋಗಸ್ಥರಿಗೆ ಬಡ್ತಿಯ ಸೂಚನೆ ಇದೆ; ಇಲ್ಲಿದೆ ಇಂದಿನ ಭವಿಷ್ಯ

ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಪ್ರಸನ್ನನಾಥ್ ಸ್ವಾಮೀಜಿಯವರು, ಮೈಸೂರು ಶಾಖೆಯ ಪೂಜ್ಯ ಸೋಮೇಶ್ವರನಾಥ ಸ್ವಾಮೀಜಿಯವರ ಉಪಸ್ಥಿತಿಯೂ ಪೂಜೆಯಲ್ಲಿದ್ದಿದ್ದು. ಪೂಜಾ ಕೈಂಕರ್ಯಕ್ಕೆ ಮತ್ತಷ್ಟು ಮೆರಗು ತಂದಿತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment