newsfirstkannada.com

×

ಕಲಬುರಗಿಯಲ್ಲಿ ಕಿರಾತಕ ಕೃತ್ಯ; ಬೈಕ್ ರಿಪೇರಿ ಮಾಡಿಲ್ಲ ಎಂದು ಶೋ ರೂಮ್​ಗೆ ಬೆಂಕಿ ಇಟ್ಟ..!

Share :

Published September 11, 2024 at 1:53pm

    ಎಲೆಕ್ಟ್ರಿಕ್ ಬೈಕ್ ಶೋ ರೂಂಗೆ ಬೆಂಕಿ ಹಚ್ಚಿದ್ನಾ ಕಿರಾತಕ?

    ಕಲಬುರಗಿಯ ಹುಮನಾಬಾದ್ ರಸ್ತೆಯಲ್ಲಿರುವ ಶೋ ರೂಂ

    ಆರೋಪಿ ಪೊಲೀಸ್ ವಶಕ್ಕೆ , ಪೊಲೀಸರಿಂದ ತೀವ್ರ ವಿಚಾರಣೆ

ಕಲಬುರಗಿ: ಎಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಶೋ ರೂಂಗೆ ಬೆಂಕಿ ಇಟ್ಟಿರುವ ಘಟನೆ ಕಲಬುರಗಿಯ ಹುಮನಾಬಾದ್ ರಸ್ತೆಯಲ್ಲಿ ನಡೆದಿದೆ. ಮಹಮ್ಮದ್ ನದೀಮ್ ಎಂಬ ವ್ಯಕ್ತಿ ವಿರುದ್ಧ ಈ ಆರೋಪ ಕೇಳಿಬಂದಿದೆ.

ನಿನ್ನೆ ಬೆಳಗ್ಗೆ ಶೋ ರೂಮ್​ಗೆ ಬೆಂಕಿ ತಗುಲಿತ್ತು. ಆರಂಭದಲ್ಲಿ ಎಲ್ಲರೂ ಶಾಟ್೯ ಸರ್ಕ್ಯೂಟ್​ನಿಂದ ಬೆಂಕಿ ತಗುಲಿದೆ ಎಂದುಕೊಂಡಿದ್ದರು. ಆದರೆ ಪೊಲೀಸರ ವಿಚಾರಣೆ ವೇಳೆ ಬೆಂಕಿ ಹಚ್ಚಿರೋದು ಪತ್ತೆಯಾಗಿದೆ ಎನ್ನಲಾಗಿದೆ. ತನ್ನ ಏಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಅಂತ ಶೋ ರೂಂ ಸಿಬ್ಬಂದಿ ಜೊತೆ ವಾಗ್ವಾದ ಮಾಡಿದ್ದ.

ಇದರಿಂದ ಕೋಪಿಸಿಕೊಂಡಿದ್ದ ಆರೋಪಿ ಪೆಟ್ರೋಲ್ ತಂದು ಶೋ ರೂಂ ಒಳಗೆ ಬೆಂಕಿ ಹಚ್ಚಿರೋದು ಬೆಳಕಿಗೆ ಬಂದಿದೆ. ಸದ್ಯ ಆರೋಪಿಯನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಲಬುರಗಿಯ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಪತ್ನಿಯ ಆಸ್ಪತ್ರೆ ಬಿಲ್ ಕಟ್ಟಲು 3 ವರ್ಷದ ಮಗುವನ್ನೇ ಮಾರಿದ ಪತಿ; ಕರುಳು ಹಿಂಡುವ ಕೆಲಸ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಲಬುರಗಿಯಲ್ಲಿ ಕಿರಾತಕ ಕೃತ್ಯ; ಬೈಕ್ ರಿಪೇರಿ ಮಾಡಿಲ್ಲ ಎಂದು ಶೋ ರೂಮ್​ಗೆ ಬೆಂಕಿ ಇಟ್ಟ..!

https://newsfirstlive.com/wp-content/uploads/2024/09/KLB-FIRE.jpg

Load More