newsfirstkannada.com

ಕಲಬುರಗಿ: ಬಿಸಿಯೂಟದ ಸಾಂಬಾರ್ ಪಾತ್ರೆಗೆ ಬಿದ್ದಿದ್ದ 2ನೇ ತರಗತಿ ವಿದ್ಯಾರ್ಥಿನಿ ಸಾವು

Share :

19-11-2023

  ಸರ್ಕಾರಿ ಶಾಲೆಯಲ್ಲಿ 2ನೇ ತರಗತಿ ವ್ಯಾಸಂಗ ಮಾಡ್ತಿದ್ದ ವಿದ್ಯಾರ್ಥಿನಿ

  ಮಗು ಸಾಂಬಾರ್ ಪಾತ್ರೆಯಲ್ಲಿ ಬಿದ್ದಿದ್ದಕ್ಕೆ ಶಾಲಾ ಶಿಕ್ಷಕರು ಅಮಾನತು

  ಚಿಕಿತ್ಸೆ ಫಲಕಾರಿಯಾಗದೆ ನಗರದ ಆಸ್ಪತ್ರೆಯಲ್ಲಿ ಇಂದು ಮಗು ಸಾವು

ಕಲಬುರಗಿ: ಬಿಸಿಯೂಟದ ಸಾಂಬಾರ್ ಪಾತ್ರೆಯಲ್ಲಿ 2ನೇ ತರಗತಿ ವಿದ್ಯಾರ್ಥಿನಿ ಬಿದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದೆ.

ಕಲಬುರಗಿಯ ಚಿಣಮಗೇರಾ ಗ್ರಾಮದ ಸರ್ಕಾರಿ ಶಾಲೆಯ ಮಹಾಂತಮ್ಮ (8) ಮೃತ ವಿದ್ಯಾರ್ಥಿನಿ. ನವೆಂಬರ್ 16 ರಂದು ಶಾಲೆಯಲ್ಲಿ ಬಿಸಿಯೂಟದ ಸಾಂಬಾರ್ ಪಾತ್ರೆಯಲ್ಲಿ ವಿದ್ಯಾರ್ಥಿನಿ ಬಿದ್ದಿದ್ದಳು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದರಿಂದ ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿತ್ತು.

ನಿನ್ನೆಯಷ್ಟೇ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಬರಲಾಗಿತ್ತು. ಆದ್ರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಮಗು ಸಾವನ್ನಪ್ಪಿದೆ. ಶಾಲೆಯಲ್ಲಿ ಶಿಕ್ಷಕರ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಮುಖ್ಯಶಿಕ್ಷಕ ಸೇರಿದಂತೆ ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಲಬುರಗಿ: ಬಿಸಿಯೂಟದ ಸಾಂಬಾರ್ ಪಾತ್ರೆಗೆ ಬಿದ್ದಿದ್ದ 2ನೇ ತರಗತಿ ವಿದ್ಯಾರ್ಥಿನಿ ಸಾವು

https://newsfirstlive.com/wp-content/uploads/2023/11/KLB_CHILD_DEAD.jpg

Load More