ವಿವಿಧ ಅಲಂಕಾರಗಳಿಂದ ಕಂಗೊಳಿಸ್ತಿದೆ ಕಲಬುರಗಿ
ಕಲ್ಯಾಣ ನಾಡಿನ ಉತ್ಸವಕ್ಕೆ ಪೊಲೀಸ್ ಬಿಗಿ ಭದ್ರತೆ
1948 ಸೆ.17 ರಂದು ಭಾರತದ ಭಾಗವಾಗಿ ಸ್ವಾತಂತ್ರ್ಯ
ಕಲ್ಯಾಣ ಕರ್ನಾಟಕದಲ್ಲಿ ಅಮೃತ ಮಹೋತ್ಸವದ ಸಂಭ್ರಮ ಕಳೆಗಟ್ಟಿದೆ. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಿನ್ನೆಲೆ ಕಲ್ಯಾಣ ನಾಡಿನ ಹೆಬ್ಬಾಗಿಲು, ತೊಗರಿ ನಾಡು ಕಲಬುರಗಿ ಮಹಾನಗರ ಅಲಂಕಾರದಿಂದ ಕಂಗೊಳಿಸುತ್ತಿದೆ.
ಮಿನಿ ವಿಧಾನಸೌಧ, ಜೆಸ್ಕಾಂ ಕಚೇರಿ, ಸರ್ದರ್ ವಲ್ಲಭಭಾಯಿ ಪಟೇಲ್ ವೃತ್ತ, ಸಾರಿಗೆ ಬಸ್ ನಿಲ್ದಾಣ ಸೇರಿದಂತೆ ಸರ್ಕಾರಿ ಕಚೇರಿಗಳ ಕಟ್ಟಡಗಳಿಗೆ ತಿರಂಗಾ ಬಣ್ಣ ಕೇಸರಿ, ಬಿಳಿ, ಹಸಿರು ಬಣ್ಣಗಳ ದೀಪಾಲಂಕಾರ ಮಾಡಿದ್ದು, ಸರ್ಕಾರಿ ಕಟ್ಟಡಗಳು ಝಗಮಗಿಸುತ್ತಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕಲಬುರಗಿಗೆ ಆಗಮಿಸಿ ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಬಳಿಕ ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೇರವೇರಿಸಿದರು. ಕಲ್ಯಾಣ ಉತ್ಸವ ದಿನ ನಿಮಿತ್ತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಸಿಎಂ ಆಗಮನ ಹಿನ್ನೆಲೆ ಬೀಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಆಗಸ್ಟ್ 1947ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಆದರೆ ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳು ಹೈದರಾಬಾದ್ನ ನಿಜಮಾರ ಆಳ್ವಿಕೆಯಲ್ಲಿತ್ತು. ಭಾರತ ಸ್ವಾತಂತ್ರ್ಯಗೊಂಡು ಒಂದು ವರ್ಷ ಆದ ನಂತರ ನಿಜಾಮರಿಂದ ಈ ಪ್ರದೇಶ ದೇಶದ ಭಾಗವಾಗಿ ಸೇರ್ಪಡೆ ಆಯಿತು. ಅಂದರೆ 1948 ಸೆಪ್ಟೆಂಬರ್ 17 ರಂದು ಭಾರತದ ಭಾಗವಾಗಿ ಸ್ವಾತಂತ್ರ್ಯ ಲಭಿಸಿತ್ತು. ಸ್ವಾತಂತ್ರ್ಯ ಲಭಿಸಿ 75 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನ ಆಚರಣೆ ಮಾಡಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ