ಕನ್ನಡ ತಮಿಳಿನಿಂದ ಬಂದಿಲ್ಲ.. ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕನ್ನಡಿಗರ ಟಾಂಗ್‌!

author-image
admin
Updated On
ಕನ್ನಡ ತಮಿಳಿನಿಂದ ಬಂದಿಲ್ಲ.. ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕನ್ನಡಿಗರ ಟಾಂಗ್‌!
Advertisment
  • ನಿಮ್ಮ ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದಿದ್ದ ಕಮಲ್ ಹಾಸನ್
  • ಇತಿಹಾಸದಲ್ಲಿ ತಮಿಳಿಗಿಂತ ಕನ್ನಡ ಭಾಷೆಯೇ ಪುರಾತನವಾದದ್ದು
  • ಥಗ್ ಲೈಫ್ ಅನ್ನೋ ತಮಿಳು ಸಿನಿಮಾದ ಇವೆಂಟ್‌ನಲ್ಲಿ ವಿವಾದ

ಸಾವಿರಾರು ವರ್ಷಗಳ ಭವ್ಯ ಇತಿಹಾಸ, ಸ್ವತಂತ್ರ್ಯ ಲಿಪಿ, ಶಾಸ್ತ್ರೀಯ ಸ್ಥಾನಮಾನ ಹೊಂದಿರುವ ಶ್ರೀಮಂತ ಭಾಷೆ ಕನ್ನಡ. ಕೋಟ್ಯಾಂತರ ಕರುನಾಡಿಗರ ಜೀವನಾಡಿಯಾಗಿರುವ ಹೆಮ್ಮೆಯ ಕನ್ನಡ ಭಾಷೆಗೆ ನಟ ಕಮಲ್ ಹಾಸನ್‌ ಅವರು ಅವಮಾನಿಸಿದ್ದಾರೆ. ಕಮಲ್ ಹಾಸನ್ ಅವರ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಇತ್ತೀಚೆಗೆ ಥಗ್ ಲೈಫ್ ಅನ್ನೋ ತಮಿಳು ಸಿನಿಮಾದ ಇವೆಂಟ್‌ನಲ್ಲಿ ನಟ ಕಮಲ್ ಹಾಸನ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತಮಿಳಿನಿಂದ ಕನ್ನಡ ಹುಟ್ಟಿದ್ದು ಅನ್ನೋ ಮೂಲಕ ಆಕ್ರೋಶಕ್ಕೆ ತುತ್ತಾಗಿದ್ದಾರೆ.


">May 26, 2025

ನಟ ಶಿವರಾಜ್​ಕುಮಾರ್ ಎದುರು ಡಾ.ರಾಜ್​ಕುಮಾರ್ ಅವರ ಬಗ್ಗೆ ತಮಗಿರುವ ಗೌರವ ಹಂಚಿಕೊಂಡಿದ್ದ ಕಮಲ್ ಹಾಸನ್ ಅವರು ನಿಮ್ಮ ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದಿದ್ದಾರೆ. ಕನ್ನಡಿಗರ ಪ್ರೀತಿ, ಗೌರವಕ್ಕೆ ವಂದಿಸುತ್ತಲೇ ನಿಮ್ಮ ಕನ್ನಡ ನಮ್ಮಿಂದ ಬಂದಿದ್ದು ಎಂದು ಕಮಲ್ ಹಾಸನ್ ಹೇಳಿದ್ದಕ್ಕೆ ವಿರೋಧ ವ್ಯಕ್ತವಾಗಿದೆ.

ಇದನ್ನೂ ಓದಿ: ಮಡೆನೂರು ಮನು ಮೇಲೆ ಶಿವಣ್ಣ ಫ್ಯಾನ್ಸ್ ಆಕ್ರೋಶ.. ಕನ್ನಡ ಕಿರುತೆರೆ, ಸ್ಯಾಂಡಲ್‌ವುಡ್‌ನಿಂದಲೇ ಬ್ಯಾನ್? 

ಕಮಲ್ ಹಾಸನ್​ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ಕೆಂಡಾಮಂಡಲರಾಗಿದ್ದು, ಕನ್ನಡ ತಮಿಳಿನಿಂದ ಬಂದಿಲ್ಲ. ತಮಿಳಿಗಿಂತ ಕನ್ನಡ ಭಾಷೆಯೇ ಪುರಾತನವಾದದ್ದು ಎಂದು ಕನ್ನಡಿಗರು ಕಿಡಿಕಾರುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment