/newsfirstlive-kannada/media/post_attachments/wp-content/uploads/2025/06/Kamal-Hassan-thug-life-1.jpg)
ಬೆಂಗಳೂರು: ತಮಿಳು ನಟ ಕಮಲ್ ಹಾಸನ್, ನಿರ್ದೇಶಕ ಮಣಿರತ್ನಂ 36 ವರ್ಷದ ಬಳಿಕ ಮತ್ತೆ ಒಂದಾಗಿ ಥಗ್ ಲೈಫ್ ಸಿನಿಮಾ ನಿರ್ಮಾಣ ಮಾಡಿದ್ದು, ಇಂದು ವಿಶ್ವಾದ್ಯಂತ ಬಿಡುಗಡೆಯಾಗುತ್ತಿದೆ. ಎ.ಆರ್ ರೆಹಮಾನ್ ಸಂಗೀತ ನಿರ್ದೇಶನದ ಥಗ್‌ಲೈಫ್ ಸಿನಿಮಾ ಕಣ್ತುಂಬಿಕೊಳ್ಳಲು ಅವರ ಅಭಿಮಾನಿಗಳು ಕಾತರರಾಗಿದ್ದಾರೆ.
ಇಂದು ಪ್ಯಾನ್ ಇಂಡಿಯಾ ರಿಲೀಸ್ ಆಗುತ್ತಿರುವ ಥಗ್ ಲೈಫ್ ಸಿನಿಮಾ ಕರ್ನಾಟಕದಲ್ಲಿ ಬ್ಯಾನ್ ಆಗಿರುವುದರಿಂದ ಬಾಕ್ಸ್ ಆಫೀಸ್ ಕಲೆಕ್ಷನ್‌ಗೆ ದೊಡ್ಡ ಹೊಡೆತ ಬೀಳುತ್ತಿದೆ. ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದ್ದು ಎಂದು ಕಮಲ್ ಹಾಸನ್ ಹೇಳಿಕೆ ನೀಡಿದ್ದು, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕಮಲ್ ಸಿನಿಮಾ ಬಿಡುಗಡೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು.
ಕನ್ನಡ ಭಾಷೆಗೆ ಕಮಲ್ ಹಾಸನ್ ಅವಮಾನ ಮಾಡಿದ್ದಾರೆ. ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಹೋರಾಟಕ್ಕೆ ಮುಂದಾಗಿದ್ದರು. ಒಂದು ವೇಳೆ ಜೂನ್ 5 ಅಂದ್ರೆ ಇಂದು ರಾಜ್ಯದಲ್ಲಿ ಸಿನಿಮಾ ಬಿಡುಗಡೆಯಾದ್ರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಲಾಗಿತ್ತು. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಕೂಡ ಕಮಲ್ ಹಾಸನ್ ಕ್ಷಮೆ ಕೇಳಲು ಆಗ್ರಹಿಸಿತ್ತು.
ಕನ್ನಡ ಪರ ಸಂಘಟನೆಗಳ ಹೋರಾಟಕ್ಕೆ ಮಣಿಯದ ನಟ ಕಮಲ್ ಹಾಸನ್ ಅವರು ಕನ್ನಡಿಗರ ಕ್ಷಮೆ ಕೇಳಲು ನಿರಾಕರಿಸಿದ್ದರು. ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡ ಕಮಲ್ ಹಾಸನ್ ಅವರು ಹೈಕೋರ್ಟ್‌ನಲ್ಲಿ ಸಿನಿಮಾ ಬಿಡುಗಡೆಗೆ ಭದ್ರತೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಕಮಲ್ ಹಾಸನ್ ಮನವಿಗೆ ಗರಂ ಆದ ಹೈಕೋರ್ಟ್ ಮೊದಲು ಕ್ಷಮೆ ಕೇಳಿದ್ದಾರಾ? ಎಂದು ಪ್ರಶ್ನಿಸಿ ತರಾಟೆ ತೆಗೆದುಕೊಂಡಿತ್ತು.
ಇಷ್ಟೆಲ್ಲಾ ಬೆಳವಣಿಗೆಯ ನಡುವೆಯು ಕಮಲ್ ಹಾಸನ್ ಅವರು ಕನ್ನಡಿಗರ ಒತ್ತಡಕ್ಕೆ ಮಣಿಯದೇ ತಮ್ಮ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಮುಂದಾಗಿದ್ದಾರೆ. ಕರ್ನಾಟಕ ಬಿಟ್ಟು ಪ್ಯಾನ್ ಇಂಡಿಯಾದಲ್ಲಿ ಸಿನಿಮಾ ರಿಲೀಸ್ ಆಗುತ್ತಿರೋದ್ರಿಂದ ಥಗ್ ಲೈಫ್ ನಿರ್ಮಾಪಕರಿಗೆ 25 ಕೋಟಿ ರೂಪಾಯಿ ನಷ್ಟವಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: ಕಮಲ್ ಹಾಸನ್ ಮೇಲೆ ಮತ್ತೆ ಗರಂ ಆದ ಹೈಕೋರ್ಟ್.. ಥಗ್ ಲೈಫ್ ಸಿನಿಮಾ ಬಿಡುಗಡೆಯ ಭವಿಷ್ಯ ಏನು?
ಕನ್ನಡಿಗರು ಬ್ಯಾನ್ ಮಾಡಿರೋ ಥಗ್ ಲೈಫ್ ಸಿನಿಮಾ ಕಲೆಕ್ಷನ್‌ಗೆ ಮಾತ್ರ ಪೆಟ್ಟು ಬಿದ್ದಿಲ್ಲ. ಸಿನಿಮಾ ತಜ್ಞರು ಹೇಳೋ ಮೂಲಕ ಕಮಲ್ ಹಾಸನ್ ಸಿನಿಮಾದ ಬಿಗ್ ಹಿಟ್‌ಗೆ ಕರ್ನಾಟಕದ ಬ್ಯಾನ್ ದೊಡ್ಡ ಹೊಡೆತ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದೇ ರೀತಿ ಕರ್ನಾಟಕದಲ್ಲಿ ವಿರೋಧಿಸಿದ್ದ ರಜನಿಕಾಂತ್ ಅವರ ಜೈಲರ್ ಹಾಗೂ ದಳಪತಿ ವಿಜಯ್ ಅವರ ಲಿಯೋ ಸಿನಿಮಾಗೆ 40-50 ಕೋಟಿ ರೂಪಾಯಿ ನಷ್ಟವಾಗಿತ್ತು. ಕರ್ನಾಟಕದಲ್ಲಿ ತಮಿಳು ಸಿನಿಮಾಗೆ 20-25ಕೋಟಿ ರೂಪಾಯಿ ಆದಾಯ ಬರುವ ನಿರೀಕ್ಷೆ ಇದ್ದು, ಕಮಲ್ ಹಾಸನ್ ಥಗ್ ಲೈಫ್ ಸಿನಿಮಾ ಲಾಸ್ ಆಗುವ ಸಾಧ್ಯತೆ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ