/newsfirstlive-kannada/media/post_attachments/wp-content/uploads/2024/06/TRAIN-3.jpg)
ಪಶ್ಚಿಮ ಬಂಗಾಳದಲ್ಲಿ ರೈಲು ಅಪಘಾತ ಸಂಭವಿಸಿದೆ. ಸಿಲಿಗುರಿಯಲ್ಲಿ ಪ್ರಯಾಣಿಕರನ್ನು ತುಂಬಿದ್ದ ಕಾಂಚನಜುಂಗಾ ಎಕ್ಸ್‌ಪ್ರೆಸ್ (Kanchanjunga Express train) ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಭೀಕರತೆಗೆ ಕಾಂಚನ್ಜುಂಗಾ ಎಕ್ಸ್‌ಪ್ರೆಸ್‌ನ ಹಲವು ಬೋಗಿಗಳು ಹಳಿತಪ್ಪಿ ನೆಲಕ್ಕುರುಳಿವೆ.
ಬೆಳಗ್ಗೆ 9.30ಕ್ಕೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ರೈಲು ಸಂಖ್ಯೆ 13174 ಕಾಂಚನಜುಂಗಾ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಕಾಂಚನಜುಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿದವು. ಪ್ರಾಣಹಾನಿಯಾಗಿರುವ ಬಗ್ಗೆ ಇನ್ನೂ ಯಾವುದೇ ಸುದ್ದಿ ಇಲ್ಲ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸುವ ಕೆಲಸ ನಡೆಯುತ್ತಿದೆ. ಅಪಘಾತದ ನಂತರ ರಕ್ಷಣಾ ತಂಡಗಳು ಮತ್ತು ಸ್ಥಳೀಯ ಜನರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ.
ಇದನ್ನೂ ಓದಿ:ದರ್ಶನ್ ಸಿಕ್ಕಿದ್ಮೇಲೆ ಪವಿತ್ರಾ ಕೋಟಿ ಕುಳ.. ಹತ್ತು ವರ್ಷ.. ಹೇಗಿದ್ದಳು..? ಹೇಗಾದಳು..?
ಸದ್ಯದ ಅಪ್ಡೇಟ್ಸ್
- ಗೂಡ್ಸ್ ರೈಲು ಸಿಗ್ನಲ್ ಜಂಪ್ ಮಾಡಿ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿಯಾಗಿದೆ.
- ಎನ್‌ಡಿಆರ್‌ಎಫ್ ಮತ್ತು 15 ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ತಲುಪಿವೆ
- ರೈಲು ಅಪಘಾತದ ನಂತರ ಸಹಾಯವಾಣಿ ಸಂಖ್ಯೆಯನ್ನು ನೀಡಲಾಗಿದೆ
- ರೈಲ್ವೆ ಸಚಿವಾಲಯವು ಅಪಘಾತದ ಬಗ್ಗೆ ನಿರಂತರವಾಗಿ ನಿಗಾ ವಹಿಸುತ್ತಿದೆ
- ಅಪಘಾತದ ಬಗ್ಗೆ ಮಮತಾ ಬ್ಯಾನರ್ಜಿ ಸಂತಾಪ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯ ಯುದ್ಧೋಪಾದಿಯಲ್ಲಿ ನಡೆಯುತ್ತಿದೆ ಎಂದರು.
- ಅಪಘಾತದಿಂದಾಗಿ ಅಗರ್ತಲಾ-ಕೋಲ್ಕತ್ತಾ ರೈಲು ಮಾರ್ಗ ಸಂಪೂರ್ಣ ಸ್ಥಗಿತಗೊಂಡಿದೆ.
ಇದನ್ನೂ ಓದಿ:‘ಸಿಟ್ಟು ಬಂದ್ರೆ ಏನ್ಮಾಡ್ತಾಳೆ ಅಂತಾ ಅವಳಿಗೂ ಗೊತ್ತಿರಲ್ಲ..’ ಪವಿತ್ರ ಗೌಡಳ ಇನ್ನೊಂದು ಮುಖ ಅನಾವರಣ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ