ನ. 1ರಿಂದ ಟೀಮ್ ಇಂಡಿಯಾ, ನ್ಯೂಜಿಲೆಂಡ್ ಮಧ್ಯೆ 3ನೇ ಟೆಸ್ಟ್
ಪಂದ್ಯಕ್ಕೂ ಮುನ್ನ ನ್ಯೂಜಿಲೆಂಡ್ಗೆ ಶಾಕ್ ಕೊಟ್ಟ ಸ್ಟಾರ್ ಪ್ಲೇಯರ್
3ನೇ ಟೆಸ್ಟ್ ಪಂದ್ಯದಿಂದಲೂ ಸ್ಟಾರ್ ಪ್ಲೇಯರ್ ವಿಲಿಯಮ್ಸನ್ ಔಟ್
ಟೀಮ್ ಇಂಡಿಯಾ, ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಟೆಸ್ಟ್ ಸರಣಿ ಮುಕ್ತಾಯ ಹಂತಕ್ಕೆ ಬಂದಿದೆ. ಇತ್ತೀಚೆಗೆ ನಡೆದ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿಯ 2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 113 ರನ್ ಗಳಿಂದ ಸೋಲು ಕಂಡಿತು. ಈ ಮೂಲಕ ಭಾರತ ಟೆಸ್ಟ್ ಸರಣಿಯನ್ನು ಕೈಚೆಲ್ಲಿದೆ.
ಪುಣೆಯಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಫಸ್ಟ್ ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ 259 ರನ್ಗಳಿಗೆ ಆಲೌಟ್ ಆಗಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ್ದ ಭಾರತ ತಂಡ ಕೇವಲ 156 ರನ್ಗಳಿಗೆ ಆಲೌಟ್ ಆಗುವ ಮೂಲಕ 103 ರನ್ ಗಳ ಹಿನ್ನಡೆ ಅನುಭವಿಸಿತ್ತು. 2ನೇ ಇನ್ನಿಂಗ್ಸ್ ಆರಂಭಿಸಿದ್ದ ನ್ಯೂಜಿಲೆಂಡ್ 255 ರನ್ ಕಲೆ ಹಾಕಿ ಆಲೌಟ್ ಆಗಿತ್ತು. ಇದರೊಂದಿಗೆ ಭಾರತಕ್ಕೆ ಗೆಲ್ಲಲು 359 ರನ್ ಗುರಿ ನೀಡಿತ್ತು. ಈ ರನ್ ಗುರಿ ಬೆನ್ನಟ್ಟಿದ ಭಾರತ 245 ರನ್ಗಳಿಗೆ ಆಲೌಟ್ ಆಗುವ ಮೂಲಕ 113 ರನ್ ಗಳಿಂದ ಪಂದ್ಯ ಸೋತಿದೆ.
ಟೀಮ್ ಇಂಡಿಯಾ ಮತ್ತು ನ್ಯೂಜಿಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಮ್ನಲ್ಲಿ ನಡೆಯಲಿದೆ. ಇದಕ್ಕೆ ಟೀಮ್ ನ್ಯೂಜಿಲೆಂಡ್ ತಂಡ ಭರ್ಜರಿ ತಯಾರಿ ಮಾಡಿಕೊಂಡಿದೆ. ನವೆಂಬರ್ 1ನೇ ತಾರೀಕಿನಿಂದ ಶುರುವಾಗೋ ಈ ಟೆಸ್ಟ್ ಪಂದ್ಯ 5ರ ವರೆಗೆ ನಡೆಯಲಿದೆ. ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ತಲುಪಲು ಈ ಪಂದ್ಯ ಗೆಲ್ಲಲೇಬೇಕಿದೆ. ಈ ಮಧ್ಯೆ ನ್ಯೂಜಿಲೆಂಡ್ ತಂಡದ ಸ್ಟಾರ್ ಆಟಗಾರನ ಕುರಿತು ಬಿಗ್ ಅಪ್ಡೇಟ್ ಒಂದು ಬಿದ್ದಿದೆ.
3ನೇ ಟೆಸ್ಟ್ನಿಂದಲೂ ಕೇನ್ ವಿಲಿಯಮ್ಸನ್ ಔಟ್
ನ್ಯೂಜಿಲೆಂಡ್ ತಂಡದ ಸ್ಟಾರ್ ಬ್ಯಾಟರ್ ಕೇನ್ ವಿಲಿಯಮ್ಸನ್ ಭಾರತದ ವಿರುದ್ಧದ 3ನೇ ಟೆಸ್ಟ್ ಕೂಡ ಆಡುವುದಿಲ್ಲ ಎಂದು ತಿಳಿದು ಬಂದಿದೆ. ಇವರು 3ನೇ ಟೆಸ್ಟ್ ಆಡಲು ಫಿಟ್ ಆಗಿಲ್ಲ ಎಂದು ನ್ಯೂಜಿಲೆಂಡ್ ತಂಡದ ಕ್ಯಾಪ್ಟನ್ ಟಾಮ್ ಲ್ಯಾಥಮ್ ಸ್ಪಷ್ಟನೆ ನೀಡಿದ್ದಾರೆ.
ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ತೀವ್ರವಾಗಿ ಗಾಯಗೊಂಡಿದ್ದರು. ಈ ಕಾರಣಕ್ಕೆ ಇವರು ಭಾರತ ವಿರುದ್ಧ ಟೆಸ್ಟ್ ಸರಣಿಯಲ್ಲಿ ಭಾಗಿಯಾಗುವುದು ಅನುಮಾನ ಎಂದು ಈ ಹಿಂದೆ ನ್ಯೂಜಿಲೆಂಡ್ ಕ್ರಿಕೆಟ್ ಬೋರ್ಡ್ ತಿಳಿಸಿತ್ತು.
ಭಾರತ ವಿರುದ್ಧ ಟೆಸ್ಟ್ ಸರಣಿಗೆ ನ್ಯೂಜಿಲೆಂಡ್ ತಂಡ ಹೀಗಿದೆ!
ಟಾಮ್ ಲ್ಯಾಥಮ್ (ಕ್ಯಾಪ್ಟನ್), ಟಾಮ್ ಬ್ಲಂಡೆಲ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಮ್ಯಾಟ್ ಹೆನ್ರಿ, ಡ್ಯಾರೆಲ್ ಮಿಚೆಲ್, ವಿಲ್ ಓ ರೂರ್ಕ್, ಅಜಾಜ್ ಪಟೇಲ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಬೆನ್ ಸಿಯರ್ಸ್, ಇಶ್ ಸೋಧಿ, ಟಿಮ್ ಸೌಥಿ, ಕೇನ್ ವಿಲಿಯಮ್ಸನ್, ವಿಲ್ ಯಂಗ್.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ