ಮುಂಬೈ, ಪಂಜಾಬ್, ಮನಾಲಿಯಲ್ಲಿ ಕೋಟಿ ಕೋಟಿ ಆಸ್ತಿ.. ಬಿಜೆಪಿ ಅಭ್ಯರ್ಥಿ ಕಂಗನಾ ಎಷ್ಟು ಕೋಟಿ ಒಡತಿ..?

author-image
Ganesh
Updated On
ಮುಂಬೈ, ಪಂಜಾಬ್, ಮನಾಲಿಯಲ್ಲಿ ಕೋಟಿ ಕೋಟಿ ಆಸ್ತಿ.. ಬಿಜೆಪಿ ಅಭ್ಯರ್ಥಿ ಕಂಗನಾ ಎಷ್ಟು ಕೋಟಿ ಒಡತಿ..?
Advertisment
  • ಬಿಜೆಪಿಯಿಂದ ಉಮೇದುವಾರಿಕೆ ಸಲ್ಲಿಸಿದ ಕಂಗನಾ ರಣಾವತ್
  • ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ
  • ಬಿಎಂಡಬ್ಲ್ಯು ಸೇರಿ ಮೂರು ಐಷಾರಾಮಿ ಕಾರುಗಳು

ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಾಲಿವುಡ್ ನಟಿ, ಕಂಗನಾ ರಣಾವತ್ ನಿನ್ನೆ ನಾಮಪತ್ರ ಸಲ್ಲಿಸಿದ್ದಾರೆ.

ಈ ವೇಳೆ ಸಲ್ಲಿಸಿದ್ದ ಚುನಾವಣಾ ಅಫಿಡವಿಟ್ ಪ್ರಕಾರ 28.7 ಕೋಟಿ ಚರಾಸ್ತಿ ಮತ್ತು 62.9 ಕೋಟಿ ಸ್ಥಿರಾಸ್ತಿ ಸೇರಿದಂತೆ 91 ಕೋಟಿ ರೂಪಾಯಿಗೂ ಹೆಚ್ಚು ಆಸ್ತಿ ಹೊಂದಿದ್ದಾರೆ. 37 ವರ್ಷದ ಕಂಗನಾ ಕೈಯಲ್ಲಿ 2 ಲಕ್ಷ ರೂಪಾಯಿ ನಗದು ಮತ್ತು ಬ್ಯಾಂಕ್ ಬ್ಯಾಲೆನ್ಸ್‌ನಲ್ಲಿ ಸುಮಾರು 1.35 ಕೋಟಿ ರೂಪಾಯಿ ಹಣ ಹೊಂದಿದ್ದಾರೆ.

ಇದನ್ನೂ ಓದಿ:ಹೊಸ ಕೋಚ್ ಹುಡುಕಾಟದಲ್ಲಿ ಬಿಸಿಸಿಐ.. ಭಾರೀ ಷರತ್ತು ವಿಧಿಸಿದ ಶ್ರೀಮಂತ ಕ್ರಿಕೆಟ್ ಮಂಡಳಿ\

ಕಂಗನಾ ಮುಂಬೈ, ಪಂಜಾಬ್ ಮತ್ತು ಮನಾಲಿಯಲ್ಲಿ ಆಸ್ತಿಯನ್ನು ಹೊಂದಿದ್ದಾರೆ. ಅಲ್ಲದೇ ಬಿಎಂಡಬ್ಲ್ಯು, ಮರ್ಸಿಡಿಸ್ ಬೆಂಜ್ ಹಾಗೂ 3.91 ಕೋಟಿ ರೂಪಾಯಿಯ ಮರ್ಸಿಡಿಸ್ ಮೇಬ್ಯಾಚ್‌ ಸೇರಿದಂತೆ ಮೂರು ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ:ಹೀಗಾದರೆ.. ಆರ್​ಸಿಬಿ, ಸಿಎಸ್​ಕೆ ಎರಡೂ ತಂಡಗಳು ಪ್ಲೇ ಆಫ್​ಗೆ ಹೋಗುತ್ತವೆ..! ಅಚ್ಚರಿ ಪಡಬೇಕಾಗಿಲ್ಲ..!​

ಇದನ್ನೂ ಓದಿ:ಆರ್​ಸಿಬಿ ಪ್ಲೇ ಆಫ್ ಹಾದಿ ಮತ್ತಷ್ಟು ಸುಲಭ.. ಬದಲಾದಂತಿದೆ ಬೆಂಗಳೂರು ತಂಡದ ಅದೃಷ್ಟ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment