Advertisment

ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿ ದರ್ಶನ್ ಭಾವುಕ; ದಾಸ ಕೊಟ್ರು ಹೊಸ ಭರವಸೆ..!

author-image
Ganesh
Updated On
ಮಗನ​ ಹುಟ್ಟುಹಬ್ಬಕ್ಕೆ ಸರ್​ಪ್ರೈಸ್​ ಕೊಟ್ಟ ದರ್ಶನ್​ ತಾಯಿ ಮೀನಾ; ಸೆಲೆಬ್ರಿಟಿಸ್ ಫುಲ್​ ಖುಷ್​!
Advertisment
  • ತನ್ನ ಅಭಿಮಾನಿಗಳಿಗೆ ಸಂತಸದ ಸುದ್ದಿ ನೀಡಿದ ದಾಸ
  • ಫೆಬ್ರವರಿ 16 ರಂದು ಹುಟ್ಟುಹಬ್ಬ ಆಚರಿಸಿಕೊಂಡಿರುವ ನಟ
  • ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಏನಂದ್ರು?

ಫೆಬ್ರವರಿ 16 ರಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. 48ನೇ ವರ್ಷಕ್ಕೆ ಕಾಲಿಟ್ಟ ದಾಸನಿಗೆ ಸ್ಯಾಂಡಲ್​ವುಡ್​ ತಾರೆಯರು, ವಿವಿಧ ಕ್ಷೇತ್ರದ ಗಣ್ಯರು ಹಾಗೂ ಅವರ ಅಪಾರ ಅಭಿಮಾನಿಗಳು ತುಂಬು ಹೃದಯದಿಂದ ಶುಭಾಶಯ ಕೋರಿ, ‘ಒಳ್ಳೆಯದಾಗಲಿ’ ಎಂದು ಹಾರೈಸಿದರು.

Advertisment

ಅಪಾರ ಅಭಿಮಾನಿಗಳ ಬಳಗ ಹೊಂದಿರುವ ದರ್ಶನ್, ಬೆಂಬಲಿಗರು ತೋರಿಸುತ್ತಿರುವ ಪ್ರೀತಿಗೆ ಭಾವುಕರಾಗಿದ್ದಾರೆ. ಬರ್ತಡೇ ಸಂಭ್ರಮ ಮುಗಿದು ಎರಡು ದಿನಗಳ ಬಳಿಕ, ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳ ಪ್ರೀತಿ, ಸಹಕಾರ ಸ್ಮರಿಸಿ ಕೃತಜ್ಞತೆ ಸಲ್ಲಿಸಿದ್ದಾರೆ. ದರ್ಶನ್ ಏನಂದ್ರು ಅನ್ನೋ ವಿವರ ಇಲ್ಲಿದೆ.

ಪ್ರೀತಿಯ ಸೆಲೆಬ್ರಿಟಿಸ್​​ಗಳೇ 🙏🏾

ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತಹ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ.

ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿ ದೀಪವಾಗಲಿ.

ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ 🙏🏾

ನಿಮ್ಮ ದಾಸ ದರ್ಶನ್

ಅಭಿಮಾನಿಗಳಿಗೆ ಭರವಸೆ

ಆ ಮೂಲಕ ದರ್ಶನ್ ಅಭಿಮಾನಿಗಳಿಗೆ ಭೇಟಿಯಾಗುವ ಭರವಸೆಯನ್ನು ನೀಡಿದ್ದಾರೆ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ಬೇಗ ಭೇಟಿಯಾಗುತ್ತೇನೆ ಅನ್ನೋ ಮೂಲಕ ದರ್ಶನ್, ಅಭಿಮಾನಿಗಳ ಕುತೂಹಲವನ್ನು ಹೆಚ್ಚು ಮಾಡಿದ್ದಾರೆ. ದರ್ಶನ್ ಅವರು ಪ್ರತಿ ಬಾರಿ ತಮ್ಮ ಹುಟ್ಟುಹಬ್ಬದ ದಿನವನ್ನು ಅಭಿಮಾನಿಗಳಿಗೋಸ್ಕರ ಮೀಸಲಿಡುತ್ತಿದ್ದರು. ಆ ದಿನ ಅಭಿಮಾನಿಗಳ ಜೊತೆ ಕಳೆದು ಸಂಭ್ರಮಿಸುತ್ತಿದ್ದರು. ಆದರೆ ಈ ಬಾರಿ ಅನಿವಾರ್ಯ ಕಾರಣಗಳಿಂದ ದರ್ಶನ್ ತಮ್ಮ ಹುಟ್ಟುಹಬ್ಬವನ್ನು ವಿಜ್ರಂಭಣೆಯಿಂದ ಆಚರಿಸಿಕೊಂಡಿಲ್ಲ.

Advertisment

ಇದನ್ನೂ ಓದಿ: KAS ಮರು ಪರೀಕ್ಷೆ.. ಕರವೇ ಅಧ್ಯಕ್ಷ ನಾರಾಯಣ ಗೌಡ ಕೊಟ್ಟ ಎಚ್ಚರಿಕೆ ಏನು..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment