ವಿಮಾನ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಧ್ರುವ ಸರ್ಜಾ ಪಾರು

author-image
Ganesh
Updated On
ವಿಮಾನ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಧ್ರುವ ಸರ್ಜಾ ಪಾರು
Advertisment
  • ದೆಹಲಿಯಿಂದ ಶ್ರೀನಗರಕ್ಕೆ ಚಿತ್ರತಂಡ ತೆರಳುವ ವೇಳೆ ಘಟನೆ
  • ಶ್ರೀನಗರದಲ್ಲಿ ಲ್ಯಾಂಡಿಂಗ್ ವೇಳೆ ವ್ಯತ್ಯಯ, ತಪ್ಪಿದ ದುರಂತ
  • ವಿಮಾನ ಅಪಘಾತದಿಂದ ಪಾರಾದ ಮಾರ್ಟಿನ್ ಚಿತ್ರತಂಡ

ಸ್ಯಾಂಡಲ್‌ವುಡನ ಧ್ರುವ ಸರ್ಜಾ ಸೇರಿದಂತೆ ಮಾರ್ಟಿನ್‌ ಚಿತ್ರ ತಂಡವಿದ್ದ ವಿಮಾನವು ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಚಿತ್ರ ತಂಡ ಸೇರಿದಂತೆ ವಿಮಾನದಲ್ಲಿದ್ದ ಪ್ರಯಾಣಿಕರೆಲ್ಲಾ ಸುರಕ್ಷಿತವಾಗಿ ಲ್ಯಾಂಡ್‌ ಆಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಚಿತ್ರತಂಡವು ಸೋಮವಾರ ಸಂಜೆ ಸಾಂಗ್ ಶೂಟಿಂಗ್​​ಗಾಗಿ ದೆಹಲಿ ವಿಮಾನ ನಿಲ್ದಾಣದಿಂದ ಶ್ರೀನಗರ ವಿಮಾನ ನಿಲ್ದಾಣಕ್ಕೆಗೆ ಹೋಗುತ್ತಿತ್ತು. ಇಂಡಿಗೋ ವಿಮಾನದಲ್ಲಿ ಧ್ರುವ ಅಂಡ್ ಟೀಂ ತೆರಳುತ್ತಿತ್ತು. ಈ ವೇಳೆ ಹವಾಮಾನ ವೈಪರೀತ್ಯದಿಂದ ಏಕಾಏಕಿ ವಿಮಾನ ಹಾರಾಟದಲ್ಲಿ ವ್ಯತ್ಯಯ ಆಗಿದೆ. ಕೆಟ್ಟ ಹವಾಮಾದಿಂದ ವಿಮಾನವನ್ನು ಲ್ಯಾಂಡಿಂಗ್‌ ಮಾಡಲು ಆಗದೇ ಪೈಲಟ್‌ ಪರದಾಟ ನಡೆಸಿದ್ದಾರೆ.

ವಿಮಾನದಲ್ಲಿ ಪ್ರಯಾಣಿಕರೆಲ್ಲಾ ಗಾಬರಿಯಾಗಿದ್ದರು. ನಂತರ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ. ಘಟನೆಯ ಬಳಿಕ ಮಾರ್ಟಿನ್‌ ಚಿತ್ರತಂಡವು ವಿಮಾನ ಇಳಿಯುವ ಸಂದರ್ಭದಲ್ಲಿಯೇ ವಿಡಿಯೋ ಮಾಡಿಕೊಂಡು ಕೆಟ್ಟ ಸಂದರ್ಭವನ್ನು ವಿವರಿಸಿ ಮರು ಜನ್ಮ ಸಿಕ್ಕಿದೆ ಎಂದಿದೆ.

ನನ್ನ ಜೀವಮಾನದಲ್ಲಿಯೇ ವಿಮಾನದಲ್ಲಿ ಮೊದಲ ಬಾರಿ ಅತ್ಯಂತ ಕೆಟ್ಟ ಅನುಭವವಾಯಿತು. ಸದ್ಯ ನಾವು ಸುರಕ್ಷಿತವಾಗಿದ್ದೇವೆ. ಥ್ಯಾಂಕ್‌ ಗಾಡ್‌, ಜೈ ಆಂಜನೇಯ ಎಂದು ಧ್ರುವ ಸರ್ಜಾ ಹೇಳಿದ್ದಾರೆ. ಎ.ಪಿ ಅರ್ಜುನ್‌, ನಾಯಕ ನಟಿ ಅನ್ವೇಶಿ ಜೈನ್, ನೃತ್ಯ ಸಂಯೋಜಕ ಇಮ್ರಾನ್‌ ಸರ್ಧಾರಿಯಾ ಸೇರಿದಂತೆ 15ಕ್ಕೂ ಹೆಚ್ಚು ಮಂದಿ ಇದ್ದರು

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment