/newsfirstlive-kannada/media/post_attachments/wp-content/uploads/2024/11/ramya3.jpg)
ಸ್ಯಾಂಡಲ್​ವುಡ್​ ಸ್ಟಾರ್ ನಟಿ, ಮೋಹಕ ತಾರೆ ರಮ್ಯಾ ಹುಟ್ಟು ಹಬ್ಬದ ಸಂಭ್ರಮದಲ್ಲಿ ಇದ್ದಾರೆ. 42ನೇ ವಸಂತಕ್ಕೆ ಕಾಲಿಟ್ಟ ನಟಿ ರಮ್ಯಾ ಅವರು ತಮ್ಮ ಜನ್ಮದಿನವನ್ನು ಕೀನ್ಯಾದ ಮಸಾಯಿ ಮಾರ ರಾಷ್ಟ್ರೀಯ ಮೀಸಲು ಪ್ರದೇಶದಲ್ಲಿ ಆಚರಿಸಿಕೊಂಡಿದ್ದಾರೆ.
ಇದನ್ನೂ ಓದಿ: ನಟಿ ಚಂದನಾ ಅನಂತಕೃಷ್ಣ ಮದುವೆಗೆ ಯಾರ್ ಯಾರು ಬಂದಿದ್ರು? ಟಾಪ್ 10 ಫೋಟೋ ಇಲ್ಲಿವೆ!
/newsfirstlive-kannada/media/post_attachments/wp-content/uploads/2024/11/ramya2.jpg)
ಹೌದು, ನಟಿ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಕೆಲವೊಂದು ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಆ ಫೋಟೋಗಳಲ್ಲಿ ನಟಿ ಆಫ್ರಿಕಾದ ಕೀನ್ಯಾದ ಮಸಾಯಿ ಮಾರ ರಾಷ್ಟ್ರೀಯ ಮೀಸಲು ಪ್ರದೇಶಕ್ಕೆ ಗೆಳೆಯ ಸಂಜೀವ್ ಮೋಹನ್ ಎಂಬುವವರ ಜತೆಗೆ ಭೇಟಿ ಕೊಟ್ಟಿದ್ದಾರೆ. ಅಲ್ಲಿನ ಸೌಂದರ್ಯಕ್ಕೆ ಮಾರು ಹೋದ ರಮ್ಯಾ ಸುಂದರವಾ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ.
/newsfirstlive-kannada/media/post_attachments/wp-content/uploads/2024/11/ramya1.jpg)
ನಟನೆಯಿಂದ ದೂರ ಉಳಿದುಕೊಂಡ ರಮ್ಯಾ ಸೋಷಿಯಲ್​ ಮೀಡಿಯಾದಲ್ಲಿ ತುಂಬಾನೇ ಌಕ್ಟೀವ್​ ಆಗಿದ್ದಾರೆ. ಹೊಸ ಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾ ಅಭಿಮಾನಿಗಳ ಜೊತೆಗೆ ಸಂಪರ್ಕದಲ್ಲಿ ಇರುತ್ತಾರೆ. ಇನ್ನೂ ನಟಿಯ ಹುಟ್ಟು ಹಬ್ಬದ ನಿಮಿತ್ತ ಅಭಿಮಾನಿಗಳು ರಮ್ಯಾ ಅವರ ಹೊಸ ಹೊಸ ಫೋಟೋಗಳನ್ನು ಶೇರ್ ಮಾಡಿಕೊಂಡು ಹುಟ್ಟು ಹಬ್ಬಕ್ಕೆ ಶುಭ ಕೋರಿದ್ದಾರೆ. ಆದಷ್ಟು ಬೇಗ ಕಮ್​ಬ್ಯಾಕ್ ಮಾಡಿ ಅಂತಿದ್ದಾರೆ.
/newsfirstlive-kannada/media/post_attachments/wp-content/uploads/2024/01/ramya.jpg)
ಸದ್ಯ ನಟಿ ಯಾವುದೇ ಹೊಸ ಸಿನಿಮಾ ಕೂಡ ಘೋಷಣೆ ಮಾಡಿಲ್ಲ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರ ಮಾಡಿದ್ದರು. ತಮ್ಮ ಒಪ್ಪಿಗೆ ಇಲ್ಲದೆ ದೃಶ್ಯಗಳನ್ನು ಬಳಕೆ ಮಾಡಲಾಗಿದೆ ಎಂದು ರಮ್ಯಾ ಆರೋಪಿಸಿ ಕೋರ್ಟ್ ಮೆಟ್ಟಿಲೇರಿದ್ದರು. ಧನಂಜಯ್ ನಟನೆಯ ‘ಉತ್ತರಕಾಂಡ’ ಸಿನಿಮಾದಲ್ಲಿ ಅವರು ನಾಯಕಿ ಆಗಿ ನಟಿಸಬೇಕಿತ್ತು. ಆದರೆ, ಈ ಸಿನಿಮಾದಿಂದಲೂ ನಟಿ ಆಚೆ ಬಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us