/newsfirstlive-kannada/media/post_attachments/wp-content/uploads/2024/09/harshika.jpg)
ಸ್ಯಾಂಡಲ್​ವುಡ್​ನ ಖ್ಯಾತ ನಟಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಮನೆಯಲ್ಲಿ ಸಂಭ್ರಮ ಮನೆಮಾಡಿದೆ. ನಟಿ ಹರ್ಷಿಕಾ ಪೂಣಚ್ಚ ಅವರು ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಹರ್ಷಿಕಾ ಅವರಿಗೆ ಸ್ಟಾರ್​ ಸುವರ್ಣ ಗಣೇಶೋತ್ಸವ ವತಿಯಿಂದ ಅದ್ಧೂರಿ ಸೀಮಂತ ಮಾಡಿದ್ದಾರೆ.
ಇದನ್ನೂ ಓದಿ:ರವಿವರ್ಮನ ಚಿತ್ರಪಟದಲ್ಲಿದ್ದಂತೆ ಕಾಣಿಸಿಕೊಂಡ ತುಂಬು ಗರ್ಭಿಣಿ ಹರ್ಷಿಕಾ ಪೂಣಚ್ಚ; ದೃಷ್ಟಿ ಆಗುತ್ತೆ ಎಂದ ಫ್ಯಾನ್ಸ್
/newsfirstlive-kannada/media/post_attachments/wp-content/uploads/2024/08/harshika.jpg)
ಹೌದು, ನಟಿ ಹರ್ಷಿಕಾ ಪೂಣಚ್ಚ ಅದ್ಭುತ ನಟಿ. ಕಳೆದ ವರ್ಷ 2023, ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ ಜೊತೆ ಹರ್ಷಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. 7 ತಿಂಗಳ ಗರ್ಭಿಣಿಯಾಗಿರೋ ಹರ್ಷಿಕಾ ಪೂಣಚ್ಚ ತಾಯಿ ಆಗುತ್ತಿರುವ ಸಂಭ್ರಮವನ್ನು ಎಂಜಾಯ್ ಮಾಡುತ್ತಿದ್ದಾರೆ. ಇದೇ ಸಂಭ್ರಮದಲ್ಲಿದ್ದ ಹರ್ಷಿಕಾ ಪೂಣಚ್ಚ ಅವರ ಖುಷಿ ದುಪ್ಪಟ್ಟಾಗಿದೆ.
/newsfirstlive-kannada/media/post_attachments/wp-content/uploads/2024/09/harshika1.jpg)
ತುಂಬು ಗರ್ಭಿಣಿಯಾಗಿರೋ ಹರ್ಷಿಕಾ ಪೂಣಚ್ಚ ಅವರಿಗೆ ಸ್ಟಾರ್​ ಸುವರ್ಣ ಗಣೇಶೋತ್ಸವ ವತಿಯಂದ ಅದ್ಧೂರಿ ಸೀಮಂತ ಮಾಡಿದ್ದಾರೆ. ಇದೇ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕಾರ್ಯಕ್ರಮದಲ್ಲಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಸೇರಿದಂತೆ ಸಾಕಷ್ಟು ಕಲಾವಿದರು ಭಾಗಿಯಾಗಿದ್ದರು.
/newsfirstlive-kannada/media/post_attachments/wp-content/uploads/2024/07/harshika-Poonacha.jpg)
ಹರ್ಷಿಕಾ ಮತ್ತು ಭುವನ್ ಪೊನ್ನಣ್ಣ ಅನೇಕ ವರ್ಷಗಳ ಸ್ನೇಹಿತರು. ಈ ಸ್ನೇಹ ಪ್ರೀತಿಗೆ ತಿರುಗಿ ಕಳೆದ ವರ್ಷ ಹಸೆಮಣೆ ಏರಿದರು. ವಿರಾಜಪೇಟೆಯ ಅಮ್ಮತ್ತಿಯಲ್ಲಿ ಹರ್ಷಿಕಾ ಮತ್ತು ಭುವನ್ ಕೊಡವ ಶೈಲಿಯಲ್ಲಿ ಅದ್ಧೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇಬ್ಬರ ಮದುವೆಗೆ ಸ್ಯಾಂಡಲ್​ನ ಅನೇಕ ಗಣ್ಯರು ಕೂಡ ಸಾಕ್ಷಿಯಾಗಿದ್ರು. ಸದ್ಯ ಈ ಜೋಡಿದ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us