/newsfirstlive-kannada/media/post_attachments/wp-content/uploads/2024/11/milana.jpg)
ಸ್ಯಾಂಡಲ್ವುಡ್ ಸ್ಟಾರ್ ಜೋಡಿ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವದ ದಿನದಂದು ಸ್ಟಾರ್ ದಂಪತಿ ಮುದ್ದಾದ ಮಗಳ ಜೊತೆಗೆ ಫೋಟೋಗೆ ಪೋಸ್ ಕೊಟ್ಟಿದ್ದಾರೆ.
ಇದನ್ನೂ ಓದಿ:ಫ್ಯಾನ್ಸ್ ಊಹಿಸಿದ್ದು ನಿಜವಾಗಿದೆ.. ಕನ್ನಡ ರಾಜ್ಯೋತ್ಸವ ದಿನವೇ ಗುಡ್ನ್ಯೂಸ್ ಕೊಟ್ಟ ಹರಿಪ್ರಿಯಾ ವಸಿಷ್ಠ ಜೋಡಿ
ಇತ್ತೀಚೆಗಷ್ಟೇ ಮುದ್ದಾದ ಹೆಣ್ಣು ಮಗುವನ್ನು ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ತಮ್ಮ ಮನೆಗೆ ಅದ್ಧೂರಿಯಾಗಿ ಬರಮಾಡಿಕೊಂಡಿದ್ದರು. ನಟಿ ಸುಂದರವಾಗಿ ಸಿಂಗಾರಗೊಂಡು ಮಗುವನ್ನು ಎತ್ತಿ ಮುದ್ದಾಡಿದ್ದಾರೆ. ನಟಿ ಮಿಲನಾ ನಾಗರಾಜ್ ಅವರು ಗುಲಾಬಿ ಬಣ್ಣದ ಸೀರೆಯಲ್ಲಿ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಕೈಯಲ್ಲಿ ಪುಟಾಣಿ ಮಗಳನ್ನು ಎತ್ತಿಕೊಂಡು ದಂಪತಿ ಫೋಟೋಗೆ ಪೋಸ್ ಕೊಡುತ್ತಿದ್ದಾರೆ. ಇದೇ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ.
View this post on Instagram
ಮಗುವಿನ ಆಗವನ್ನು ಹಂಚಿಕೊಂಡಿದ್ದ ಸ್ಟಾರ್ ಜೋಡಿ
ಶಿವರಾತ್ರಿ ಹಬ್ಬದ ದಿನ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ ಅಂತ ಅಭಿಮಾನಿಗಳಿಗೆ ಗುಡ್ನ್ಯೂಸ್ ಕೊಟ್ಟಿತ್ತು ಈ ಜೋಡಿ. ಇದಾದ ಬಳಿಕ ಗರ್ಭಿಣಿಯಾಗಿದ್ದ ಮಿಲನಾ ನಾಗರಾಜ್ ಅವರು ಹೊಸ ಹೊಸ ಬೇಬಿ ಬಂಪ್ ಲುಕ್ನಲ್ಲಿ ಫೋಟೋಗಳನ್ನು ಕ್ಲಿಕ್ಕಿಸಿಕೊಳ್ಳುವ ಮೂಲಕ ಖುಷಿ ಪಡುತ್ತಿದ್ದರು. ಸೆಪ್ಟೆಂಬರ್ 05ರಂದು ಮುಂಜಾನೆ ನಟಿ ಮಿಲನಾ ನಾಗರಾಜ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಈ ಖುಷಿಯನ್ನು ಡಾರ್ಲಿಂಗ್ ಕೃಷ್ಣ ಸೋಶಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದರು.
ಇದಾದ ಬಳಿಕ ಸೆಪ್ಟೆಂಬರ್ 27ರಂದು ಮುದ್ದಾದ ಮಗಳಾದ ಪರಿಯನ್ನು ತಮ್ಮ ನಿವಾಸಕ್ಕೆ ಗ್ರ್ಯಾಂಡ್ ಆಗಿ ವೆಲ್ಕಮ್ ಮಾಡಿದ್ದರು. ಆ ವಿಡಿಯೋವನ್ನು ದಂಪತಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಆ ವಿಡಿಯೋ ನೋಡಿದ ಫ್ಯಾನ್ಸ್ ಮುದ್ದಾದ ಪರಿಗೆ ಶುಭ ಹಾರೈಸುತ್ತಿದ್ದಾರೆ. ಮುದ್ದಾದ ನಿದಿಮಾ ಅಂತ ಕಾಮೆಂಟ್ಸ್ ಹಾಕಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ