/newsfirstlive-kannada/media/post_attachments/wp-content/uploads/2024/10/Neha-gowda-baby.jpg)
ಕನ್ನಡ ಕಿರುತೆರೆಯ ಗೊಂಬೆ, ಬಿಗ್​ಬಾಸ್​ ಬೆಡಗಿ ನೇಹಾ ಗೌಡ ಮನೆಯಲ್ಲಿ ಸಂತಸ ಮನೆ ಮಾಡಿದೆ. ಲಕ್ಷ್ಮೀ ಬಾರಮ್ಮ ಸೀರಿಯಲ್​ ಮೂಲಕ ಕನ್ನಡಿಗರ ಮನಸ್ಸಲ್ಲಿ ಹಚ್ಚ ಹಸಿರಾಗಿ ಉಳಿದುಕೊಂಡಿರೋ ನೇಹಾ ಗೌಡ ದಂಪತಿ ತಂದೆ-ತಾಯಿಯಾದ ಖುಷಿ ಸುದ್ದಿ ಹಂಚಿಕೊಂಡಿದ್ದಾರೆ.
ನಟಿ ನೇಹಾ ಗೌಡ ಅವರು ಹೆಣ್ಣು ಮಗುವಿಗೆ ಜನ್ಮ ಕೊಟ್ಟಿದ್ದು ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಇನ್ಸ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿರುವ ನೇಹಾ ಗೌಡ ಅವರು ತಾಯಿಯಾದ ಸಂತಸ ವ್ಯಕ್ತಪಡಿಸಿದ್ದಾರೆ. ನೇಹಾ ಗೌಡ, ಚಂದನ್ ಗೌಡ ದಂಪತಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.
/newsfirstlive-kannada/media/post_attachments/wp-content/uploads/2024/10/NEHA-GOWDA4.jpg)
ಇದನ್ನೂ ಓದಿ: ಸ್ಪೆಷಲ್ ದಿನದಂದೇ ಅದ್ಧೂರಿಯಾಗಿ ಬೇಬಿ ಶವರ್ ಪಾರ್ಟಿ ಮಾಡಿದ ನಟಿ ನೇಹಾ ಗೌಡ; ಯಾರೆಲ್ಲಾ ಬಂದಿದ್ರು?
ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದ ನೇಹಾ ಗೌಡ ಅವರು ಇತ್ತೀಚೆಗೆ ಹೊಸ ಫೋಟೋಶೂಟ್​ ಮಾಡಿಸಿಕೊಂಡಿದ್ದರು. ತುಂಬು ಗರ್ಭಿಣಿಯಾಗಿರೋ ನೇಹಾ ಗೌಡ ಮುದ್ದಾದ ಬೇಬಿ ಬಂಪ್ ಲುಕ್ ವಿಶೇಷವಾಗಿತ್ತು. ಈ ಫೋಟೋ ನೋಡಿದ ಅಭಿಮಾನಿಗಳು ಆರೋಗ್ಯಯುತ ಹಾಗೂ ಸುರಕ್ಷಿತವಾಗಿ ಹೆರಿಗೆ ಆಗಲಿ ನೇಹಾ ಅವರೇ, ಸೂಪರ್​ ಕ್ಯೂಟ್​ ನೇಹಾ ಅಂತಾ ಕಾಮೆಂಟ್ಸ್​ ಹಾಕಿದ್ದರು.
View this post on Instagram
ನಟಿ ನೇಹಾ ಗೌಡ ಅವರು ಲಕ್ಷ್ಮೀ ಬಾರಮ್ಮ ಸೀರಿಯಲ್‌ನಲ್ಲಿ ಗೊಂಬೆ ಪಾತ್ರದಲ್ಲಿ ಅಭಿನಯಿಸಿದವರು. ಗೊಂಬೆ ಪಾತ್ರದ ಮೂಲಕವೇ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ನಟಿ ನೇಹಾ ಗೌಡ ಹಾಗೂ ಚಂದನ್​ ಗೌಡ ಫೆಬ್ರವರಿ 18, 2018ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಚಂದನ್​ ಗೌಡ ಅವರು ಕಲರ್ಸ್​ ಕನ್ನಡದಲ್ಲಿ ಮೂಡಿ ಬರುತ್ತಿರೋ ಅಂತರಪಟ ಸೀರಿಯಲ್​ನಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us