ಪುತ್ರಿ ಗೌರಿ ಜೊತೆಗೆ ಧರ್ಮಸ್ಥಳಕ್ಕೆ ಭೇಟಿ ಕೊಟ್ಟ ಹಿರಿಯ ನಟಿ ಶ್ರುತಿ
ಸೋಷಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಶೇರ್ ಮಾಡಿದ ನಟಿ
ವಿಶೇಷವಾದ ದಿನದಂದು ರಾಖಿ ಕಟ್ಟಿ ಆಶೀರ್ವಾದ ಪಡೆದುಕೊಂಡ ಶ್ರುತಿ
ಸ್ಯಾಂಡಲ್ವುಡ್ ಹಿರಿಯ ನಟಿ ಶ್ರುತಿ ಅವರು ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಶ್ರೀ ಮಂಜುನಾಥನ ದರ್ಶನ ಪಡೆದ ಬಳಿಕ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರಿಗೆ ರಾಖಿ ಕಟ್ಟುವ ಮೂಲಕ ರಕ್ಷಾಬಂಧನ ಆಚರಿಸಿದ್ದಾರೆ.
ಇದನ್ನೂ ಓದಿ: Raksha Bandhan: ಬಂದೇ ಬಿಡ್ತು ರಕ್ಷಾ ಬಂಧನ.. ರಾಖಿ ಕಟ್ಟೋ ಮುನ್ನ ತಿಳಿಯಬೇಕಾದ ಪ್ರಮುಖ ವಿಚಾರ ಇಲ್ಲಿದೆ
ನಟಿ ಶೃತಿ ಅವರು ರಕ್ಷಾ ಬಂಧನ ಹಬ್ಬದ ಹಿನ್ನೆಲೆಯಲ್ಲಿ ಪುತ್ರಿ ಗೌರಿ ಜೊತೆಗೆ ಧರ್ಮಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ಮಂಜುನಾಥನ ದರ್ನ ಪಡೆದುಕೊಂಡು ಅದರ ಜೊತೆಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರನ್ನೂ ಸಹ ಭೇಟಿಯಾಗಿದ್ದಾರೆ.
ರಕ್ಷಾ ಬಂಧನದ ಹಿನ್ನೆಲೆಯಲ್ಲಿ ನಟಿ ಶ್ರುತಿ ವೀರೇಂದ್ರ ಹೆಗ್ಗಡೆಯವರ ಕೈಗೆ ರಾಖಿ ಕಟ್ಟಿ ಆಶೀರ್ವಾದ ಪಡೆಯುವ ಮೂಲಕ ವಿಶೇಷವಾಗಿ ರಕ್ಷಾಬಂಧನವನ್ನ ಆಚರಿಸಿದ್ದಾರೆ. ಇನ್ನು ಈ ವಿಶೇಷವಾದ ಫೋಟೋಗಳನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಪ್ರೇಕ್ಷಕರ ಮನ ಗೆದ್ದ ‘ಕೃಷ್ಣಂ ಪ್ರಣಯ ಸಖಿ’; ವೀಕೆಂಡಲ್ಲೂ ಗೋಲ್ಡನ್’ ಸಿನಿಮಾ ಹೌಸ್ ಫುಲ್
ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನ ಹಾಗೂ ಪೂಜ್ಯರ ಆಶೀರ್ವಾದ ಪಡೆದು, ನಿನ್ನೆ ರಕ್ಷಾ ಬಂಧನದ ದಿನ ಅವರಿಗೆ ರಾಖಿ ಕಟ್ಟಿ ಆಶೀರ್ವಾದ ಪಡೆದ ನಾವು ಧನ್ಯ. ಶ್ರೀ ಮಂಜುನಾಥ್ ನಿಮ್ಮೆಲ್ಲರಿಗೂ ಒಳ್ಳೆಯದು ಮಾಡಲಿ ಅಂತ ಬರೆದುಕೊಂಡಿದ್ದಾರೆ. ಸದ್ಯ ನಟಿ ಶ್ರುತಿ ಅವರು ಗಿಚ್ಚಿ ಗಿಲಿಗಿಲಿ ಕಾಮಿಡಿ ಕಾರ್ಯಕ್ರಮದಲ್ಲಿ ಜಡ್ಜ್ ಆಗಿ ಕನ್ನಡ ಕಿರುತೆರೆಯಲ್ಲಿ ಮನೆ ಮಾತಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ