/newsfirstlive-kannada/media/post_attachments/wp-content/uploads/2025/06/sudharani.jpg)
ಸ್ಯಾಂಡಲ್ವುಡ್ ಸ್ಟಾರ್ ನಟಿ ಸುಧಾರಾಣಿ ಅವರು ಸದ್ಯ ಶ್ರೀರಸ್ತು ಶುಭಮಸ್ತು ಸೀರಿಯಲ್ನಲ್ಲಿ ನಟಿಸುತ್ತಿದ್ದಾರೆ. ಶ್ರೀರಸ್ತು ಶುಭಮಸ್ತು ಧಾರಾವಾಹಿಯ ಮೂಲಕ ಕಿರುತೆರೆಯಲ್ಲಿ ಲೋಕಕ್ಕೆ ಕಾಲಿಟ್ಟು ಈಗ ಹೊಸ ಸಾಹಸಕ್ಕೆ ಮುಂದಾಗಿದ್ದಾರೆ.
ಇದನ್ನೂ ಓದಿ: ಟಾಪ್ 6ರಲ್ಲಿ ಯಾರ ಕೈಗೆ ಸೇರಲಿದೆ Sa Re Ga Ma Pa ಟ್ರೋಫಿ.. ವೀಕ್ಷಕರ ಚಿತ್ತ ಯಾರತ್ತ?
ಹೌದು, ನಟಿ ಸುಧಾರಾಣಿ ಅವರು ‘GHOST, ದಿ. ದೆವ್ವ’ ಎಂಬ ಕಿರುಚಿತ್ರದ ಮೂಲಕ ಕಿರು ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಪಕಿಯಾಗಿ ಮಿಂಚೋದಕ್ಕೆ ಸಜ್ಜಾಗಿದ್ದಾರೆ. ವಿಶೇಷ ಎಂದರೆ ಕಿರುಚಿತ್ರಕ್ಕಾಗಿ ಶ್ರೀರಸ್ತು ಶುಭಮಸ್ತು ಧಾರಾವಾಹಿ ತಂಡದೊಂದಿಗೆ ಕೈಜೋಡಿಸಿರುವ ಸುಧಾರಾಣಿ, ಈ ಸಸ್ಪೆನ್ಸ್ ಥ್ರಿಲ್ಲರ್ ಶಾರ್ಟ್ ಮೂವಿಯಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.
View this post on Instagram
ಮೊದಲು ಬಾಲ ನಟಿಯಾಗಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದ ಸುಧಾರಾಣಿ, ಶಿವರಾಜ್‌ಕುಮಾರ್ ಅಭಿನಯದ ಆನಂದ್ ಸಿನಿಮಾದ ಮೂಲಕ ನಾಯಕಿಯಾದರು. ರಾಜ್ಕುಮಾರ್, ರವಿಚಂದ್ರನ್ ಸೇರಿದಂತೆ ಸಾಕಷ್ಟು ಸ್ಟಾರ್ ನಟರ ಜೊತೆಗೆ ನಟನೆ ಮಾಡಿದ್ದರು. ಇದಾದ ಬಳಿಕ ಕೆಲವು ವರ್ಷಗಳ ಹಿಂದೆ 'ಶ್ರೀರಸ್ತು ಶುಭಮಸ್ತು' ಧಾರಾವಾಹಿ ಮೂಲಕ ಕಿರುತೆರೆಗೂ ಎಂಟ್ರಿ ನೀಡಿದರು. ಇದೀಗ 'ಶ್ರೀರಸ್ತು ಶುಭಮಸ್ತು' ಧಾರಾವಾಹಿಯ ನಿರ್ದೇಶಕ ಸುದೇಶ್ ಕೆ ರಾವ್ ಈ ಕಿರುಚಿತ್ರವನ್ನು ನಿರ್ದೇಶನ ಮಾಡಿದ್ದು, ಅವರು ಕೂಡ ಒಂದು ಮಹತ್ವದ ಪಾತ್ರವನ್ನು ಮಾಡಿದ್ದಾರೆ. ಈ ಬಗ್ಗೆ ಖುದ್ದು ನಟಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ನೋಡಿದ ಅಭಿಮಾನಿಗಳು ಕೂಡ ನಟಿಯ ಮುಂದಿನ ಹೆಜ್ಜೆಗೆ ಶುಭ ಹಾರೈಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ