/newsfirstlive-kannada/media/post_attachments/wp-content/uploads/2025/02/PUC_EXAMS.jpg)
ಬೆಂಗಳೂರು: ಸಿಇಟಿ ಕನ್ನಡ ಭಾಷೆ ಪರೀಕ್ಷೆ ಏಪ್ರಿಲ್ 15ಕ್ಕೆ ಹಿಂದೂಡಿಕೆ ಆಗಿದೆ. ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ನಿಗದಿಗೊಳಿಸಿದ್ದ ಸಿಇಟಿ ಪರೀಕ್ಷೆ ಇದಾಗಿದೆ.
ಏಪ್ರಿಲ್ 18ರಂದು ಗುಡ್ ಫ್ರೈಡೇ ಹಿನ್ನಲೆ ಪರೀಕ್ಷೆಯ ದಿನಾಂಕ ಬದಲಾಯಿಸಬೇಕೆಂದು ಒತ್ತಾಯ ಬಂದಿತ್ತು. ಸರ್ಕಾರದ ನಿರ್ದೇಶನದಂತೆ ಈಗ ಬದಲಾವಣೆ ಮಾಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.
ಇದನ್ನೂ ಓದಿ: ಕರ್ನಾಟಕ 540 ಅರಣ್ಯ ರಕ್ಷಕ ಹುದ್ದೆಗಳ ದೈಹಿಕ ಪರೀಕ್ಷೆಯ ದಿನಾಂಕ ಪ್ರಕಟಿಸಿದ ಇಲಾಖೆ.. ಯಾವಾಗ?
ಬೆಂಗಳೂರು, ಮಂಗಳೂರು, ವಿಜಯಪುರ, ಬೆಳಗಾವಿ ಕೇಂದ್ರಗಳಲ್ಲಿ ಮಾತ್ರ ಕನ್ನಡ ಭಾಷಾ ಪರೀಕ್ಷೆ ನಡೆಸಲಾಗ್ತಿದೆ. ಅಂದು ಬೆಳಗ್ಗೆ 10.30ರಿಂದ 11.30ರವರೆಗೆ ಪರೀಕ್ಷೆ ನಡೆಯಲಿದೆ. ಸಿಇಟಿ-25ರ ಉಳಿದ ಪರೀಕ್ಷೆಗಳು ನಿಗದಿಯಂತೆ ಏಪ್ರಿಲ್ 16 ಮತ್ತು 17ರಂದು ನಡೆಯಲಿವೆ ಎಂದು ತಿಳಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನ್ಯೂಸ್ಫಸ್ಟ್ಗೆ ಮಾಹಿತಿ ನೀಡಿದೆ.
ಇದನ್ನೂ ಓದಿ: ವಿಚಾರಣೆ ಎದುರಿಸಿದ ಡಿಜಿಪಿ ರಾಮಚಂದ್ರರಾವ್; ಆ ನಾಲ್ಕು ಪ್ರಶ್ನೆಗಳಿಗೆ ಒಂದೇ ಆನ್ಸರ್..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ