newsfirstkannada.com

ಡಾ. ವಿಷ್ಣುವರ್ಧನ್ ಆಪ್ತ, ಸ್ಯಾಂಡಲ್​​ವುಡ್ ನಿರ್ದೇಶಕ ವಿ.ಆರ್. ಭಾಸ್ಕರ್ ಇನ್ನಿಲ್ಲ

Share :

14-09-2023

  ಮನೆಮನೆ ರಾಮಾಯಣ ಖ್ಯಾತಿಯ ನಿರ್ದೇಶಕ ಇನ್ನಿಲ್ಲ

  ಕದಂಬ, ಹೃದಯವಂತ ಸಿನಿಮಾದಲ್ಲಿ ಕೆಲಸ ಮಾಡಿದ್ದ ವಿ.ಆರ್. ಭಾಸ್ಕರ್

  ವಿಷ್ಣುವರ್ಧನ್ ಅವರ ಹಲವು ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದ ಭಾಸ್ಕರ್

ನಟ ಡಾ.ವಿಷ್ಣುವರ್ಧನ್ ಸಿನಿಮಾಗಳಲ್ಲಿ ಹೆಚ್ಚು ಕೆಲಸ ಮಾಡಿದ್ದ ನಿರ್ದೇಶಕ ವಿ.ಆರ್. ಭಾಸ್ಕರ್ ಕೊನೆಯುಸಿರೆಳೆದಿದ್ದಾರೆ. ಸಂಭಾಷಣೆಕಾರರಾಗಿ ಗುರುತಿಸಿಕೊಂಡಿದ್ದ ಅವರು ಅನೇಕ ಸಿನಿಮಾಗಳನ್ನು ನಿರ್ದೇಶನ ಕೂಡ ಮಾಡಿದ್ದರು. ಆದರೆ ಮೈಸೂರಿನ ಜೆ.ಎಸ್.ಎಸ್ ಆಸ್ಪತ್ರೆಯಲ್ಲಿ ಭಾಸ್ಕರ್ ಉಸಿರುಚೆಲ್ಲಿದ್ದಾರೆ.

ನಿರ್ದೇಶಕ ವಿ.ಆರ್. ಭಾಸ್ಕರ್ ಅವರು, ಅನುರಾಗ ದೇವತೆ, ಮನೆಮನೆ ರಾಮಾಯಣ, ಸಕಲಕಲಾವಲ್ಲಭ, ಹೃದಯಾಂಜಲಿ, ಪಂಜಾಬಿ ಹೌಸ್, ಮುಂತಾದ ಸಿನಿಮಾಗಳಿಗೆ ವಿ.ಆರ್.ಭಾಸ್ಕರ್ ನಿರ್ದೇಶನ ಮಾಡಿದ್ದರು. ರುದ್ರ ನಾಗ, ಕರ್ತವ್ಯ, ನನ್ನ ಶತ್ರು ಪೊಲೀಸ್ ಮತ್ತು ದಾದಾ, ರುದ್ರ ವೀಣೆ, ದಾದಾ, ಆರಾಧನೆ, ಕರುಳಿನ ಕುಡಿ, ಕದಂಬ, ಸುಪ್ರಭಾತ, ರುದ್ರ, ಲಯನ್ ಜಗಪತಿ ರಾವ್, ಒಂದಾಗಿ ಬಾಳು, ಡಿಸೆಂಬರ್ 31, ಹೃದಯವಂತ, ನೀನು ನಕ್ಕರೆ ಹಾಲು ಸಕ್ಕರೆ, ರವಿವರ್ಮ, ಏಕದಂತ, ಡಾಕ್ಟರ್ ಕೃಷ್ಣ, ಗಾಡ್ ಫಾದರ್, ಆಪ್ರಮಿತ್ರ, ಆಪ್ತರಕ್ಷಕ ಸೇರಿದಂತೆ ‌ವಿಷ್ಣುವರ್ಧನ್ ಅವರ ಹಲವು ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದಾರೆ.

ಸಿನಿಮಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ವಿ.ಆರ್. ಭಾಸ್ಕರ್ ಅವರ ನಿಧನಕ್ಕೆ ಸ್ಯಾಂಡಲ್​​ವುಡ್​ ತಾರೆಯರು ಕಂಬನಿ ಮಿಡಿದಿದ್ದಾರೆ. ಅಂದಹಾಗೆಯೇ ಇವರ ಅಂತ್ಯಕ್ರಿಯೆ ಚಾಮುಂಡಿ ಬೆಟ್ಟದ ಬಳಿ ಇರೋ ಹರಿಶ್ಚಂದ್ರ ಘಾಟ್ ನಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಡಾ. ವಿಷ್ಣುವರ್ಧನ್ ಆಪ್ತ, ಸ್ಯಾಂಡಲ್​​ವುಡ್ ನಿರ್ದೇಶಕ ವಿ.ಆರ್. ಭಾಸ್ಕರ್ ಇನ್ನಿಲ್ಲ

https://newsfirstlive.com/wp-content/uploads/2023/09/Laksgman.jpg

Load More