/newsfirstlive-kannada/media/post_attachments/wp-content/uploads/2024/04/Aditi-Prabhudeva.jpg)
ಸ್ಯಾಂಡಲ್‌ವುಡ್ ನಟಿ ಅದಿತಿ ಪ್ರಭುದೇವ ಅವರ ಮನೆಗೆ ಯುಗಾದಿ ಹಬ್ಬದ ದಿನವೇ ಹೊಸ ಅತಿಥಿ ಆಗಮನವಾಗಿದೆ. ಯುಗಾದಿ ಹಬ್ಬದಂದು ತಾಯಿ ಆದ ಖುಷಿಯ ಜೊತೆಗೆ ನಮ್ಮ ಮನೆ ಮಹಾಲಕ್ಷ್ಮಿ ಅಂತಾ ಮಗುವಿನ ಫೋಟೋವನ್ನು ಅದಿತಿ ಹಂಚಿಕೊಂಡಿದ್ದಾರೆ.
ನಟಿ ಅದಿತಿ ಪ್ರಭುದೇವ ಅವರು ಏಪ್ರಿಲ್ 4ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಹುಟ್ಟಿದ ಬಳಿಕ ಯುಗಾದಿ ಶುಭ ದಿನದಂದು ಖುಷಿ ವಿಚಾರವನ್ನ ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. 2024ರ ಮೊದಲ ದಿನ ತಾಯಿಯಾಗುತ್ತಿದ್ದೇನೆ ಎಂದು ಹೇಳುವ ಮೂಲಕ ಅದಿತಿ ಪ್ರಭುದೇವ್ ಅವರು ತಮ್ಮ ಫ್ಯಾನ್ಸ್‌ಗೆ ಗುಡ್​ ನ್ಯೂಸ್​ ಕೊಟ್ಟಿದ್ದರು. ಇದೀಗ ಯುಗಾದಿ ಹಬ್ಬದ ದಿನ ಮಹಾಲಕ್ಷ್ಮಿ ಬಂದ ಸುದ್ದಿ ಹಂಚಿಕೊಂಡಿದ್ದಾರೆ.
/newsfirstlive-kannada/media/post_attachments/wp-content/uploads/2024/04/Aditi-Prabhudev.jpg)
ಇತ್ತೀಚೆಗೆ ಅದಿತಿ ಪ್ರಭುದೇವ ಅವರು ಶಾಸ್ತ್ರೋಕ್ತವಾಗಿ ತಮ್ಮ ಸೀಮಂತ ಕಾರ್ಯಕ್ರಮ ನೆರವೇರಿಸಿಕೊಂಡಿದ್ದರು. ಟ್ರೆಡಿಷನಲ್ ಲುಕ್​ನಲ್ಲಿ ಸೀಮಂತ ಕಾರ್ಯಕ್ರಮದ ಫೋಟೋ ಶೂಟ್​ ಮಾಡಿಸಿಕೊಳ್ಳಬೇಕು ಅಂತಾ ಅಂದುಕೊಂಡಿದ್ದೆ. ಅದರಲ್ಲೂ ರವಿವರ್ಮ ಪೇಂಟಿಂಗ್ ರೀತಿಯಲ್ಲಿ ಫೋಟೋಶೂಟ್ ಮಾಡಿಸಿಕೊಳ್ಳಬೇಕು ಅಂದುಕೊಂಡಿದ್ದೆ. ಅದೇ ರೀತಿಯಲ್ಲಿ ಫೋಟೋಶೂಟ್​ ಮಾಡಿಸಿಕೊಂಡಿದ್ದೇನೆ ಎಂದು ತಮ್ಮ ಯ್ಯೂಟೂಬ್ ಚಾನೆಲ್​ನಲ್ಲಿ ಈ ಮುದ್ದಾದ ಫೋಟೋಶೂಟ್​ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದರು.
ಇದನ್ನೂ ಓದಿ: PHOTO: ಬಹಳ ದಿನಗಳ ಆಸೆ ಈಡೇರಿಸಿಕೊಂಡ ಅದಿತಿ ಪ್ರಭುದೇವ; ಅವಳಿ ಜವಳಿ ಆಗಲಿ ಎಂದ ಫ್ಯಾನ್​!
ದಾವಣಗೆರೆ ಮೂಲದ ನಟಿ ಅದಿತಿ ಪ್ರಭುದೇವ ಅವರು 2022ರಲ್ಲಿ ಉದ್ಯಮಿ ಯಶಸ್ಸು ಚಂದ್ರಕಾಂತ್​ ಪಟ್ಲಾ ಅವರನ್ನು ವಿವಾಹವಾಗಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us