/newsfirstlive-kannada/media/post_attachments/wp-content/uploads/2024/04/KANYADANA_1.jpg)
ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರ ದೇಶದ ಜನರು ಸಂತೋಷದಿಂದಿದ್ದಾರೆ. ಒಮ್ಮೆಯಾದ್ರೂ ಅಯೋಧ್ಯೆಗೆ ಹೋಗಿಬರಬೇಕು ಅಂತಾ ಪ್ಲಾನ್ ಅಂತೂ ಮಾಡಿದ್ದಾರೆ. ಕೆಲವರು ಹೋಗಿ ಬಂದಿದ್ದಾರೆ ಕೂಡ. ಆದ್ರೆ, ಕನ್ನಡ ಸೀರಿಯಲ್ ಇಂಡಸ್ಟ್ರಿಯಲ್ಲಿ ಕನ್ಯಾದಾನ ಧಾರಾವಾಹಿ ಹೊಸ ದಾಖಲೆ ಬರೆದಿದೆ. ಅದೇನಂದ್ರೆ?.
ಉದಯ ಟಿವಿಯಲ್ಲಿ ಪ್ರಸಾರವಾಗೋ ಕನ್ಯಾದಾನ ಧಾರಾವಾಹಿಯಲ್ಲಿ ಈಗ ಹೊಸ ದಾಖಲೆ ಬರೆದಿದೆ. ಕನ್ನಡ ಟೆಲಿವಿಷನ್ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಅಯೋಧ್ಯೆಯಲ್ಲಿ ಚಿತ್ರೀಕರಣಗೊಂಡ ಮೊಟ್ಟ ಮೊದಲ ಸೀರಿಯಲ್ ಎಂಬ ಹೆಗ್ಗಳಿಕೆಗೆ ಕನ್ಯಾದಾನ ಧಾರಾವಾಹಿ ಪಾತ್ರವಾಗಿದೆ.
/newsfirstlive-kannada/media/post_attachments/wp-content/uploads/2024/04/KANYADANA_2.jpg)
ಜನವರಿ 22ರಂದು ಅಂದ್ರೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಇಲ್ಲಿಯವೆರೆಗೂ ಯಾವುದೇ ಸಿನಿಮಾವಾಗ್ಲಿ, ಅಥವಾ ಸೀರಿಯಲ್ ಆಗ್ಲಿ ಶೂಟ್ ಮಾಡಿರಲಿಲ್ಲ. ಆದ್ರೆ, ಕನ್ಯಾದಾನ ಧಾರವಾಹಿ ತಂಡ ಫಸ್ಟ್‌ಟೈಮ್ ಅಯೋಧ್ಯೆಗೆ ಹೋಗಿ ಚಿತ್ರೀಕರಣ ಮಾಡಿದೆ.
ಈ ಸೀರಿಯಲ್‌ನಲ್ಲಿ ಬಹುತೇಕ ಪಾತ್ರಗಳು ಒಂದಲ್ಲ ಒಂದು ಸಮಸ್ಯೆ ಎದುರಿಸ್ತಿವೆ. ಹಾಗಾಗಿ, ರಾಮನ ದರ್ಶನ ಪಡೆದು ಆ ಕಷ್ಟಗಳಿಂದ ಹೊರಬರಬೇಕು ಎಂದು ನಿರ್ಧರಿಸಿ, ರಾಮಮಂದಿರಕ್ಕೆ ಹೋಗಿ ಬಾಲರಾಮನ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಶೂಟಿಂಗ್ ಮಾಡಿರೋ ಬಗ್ಗೆ, ಸೀರಿಯಲ್​ ತಂಡ ಸಂತಸ ಹಂಚಿಕೊಂಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us