/newsfirstlive-kannada/media/post_attachments/wp-content/uploads/2025/04/SK-Shyamasundar.jpg)
ಕನ್ನಡ ಡಿಜಿಟಲ್ ಮಾಧ್ಯಮ ಕಂಡ ಅಪ್ರತಿಮ ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್ ನಿಧನರಾಗಿದ್ದಾರೆ. ಅವರಿಗೆ 72 ವರ್ಷಗಳಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಬನಶಂಕರಿಯಲ್ಲಿರುವ ದಿಗ್ವಿಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸುಮಾರು 40 ವರ್ಷ ಸೇವೆ ಸಲ್ಲಿಸಿ ಅನುಭವ ಹೊಂದಿದ್ದರು. ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದರು. ಈ ನಡುವೆ ಆರೋಗ್ಯ ಮತ್ತಷ್ಟು ಕ್ಷೀಣಿಸಿ ಕೋಮಾಗೆ ಜಾರಿದ್ದರು. ಸತತ ಚಿಕಿತ್ಸೆ ನೀಡಿದರೂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿರಲಿಲ್ಲ. ನಿನ್ನೆ ಹೃದಯಾಘಾತಕ್ಕೀಡಾಗಿ ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ: Rain effect: ರಾಜ್ಯದಲ್ಲಿ ಮಳೆ ರಗಳೆ, ಇನ್ನೂ ಎಷ್ಟು ದಿನ ಮಳೆ ಬೀಳಲಿದೆ..?
ಪ್ರಿಂಟ್ ಮೀಡಿಯಾ, ಟಿವಿ ಮಾಧ್ಯಮದಲ್ಲಿ ಸೇವೆ ಸಲ್ಲಿಸಿದ್ದ ಶ್ಯಾಮ್ ಸುಂದರ್ ಕನ್ನಡ ಮೊದಲ ಡಿಜಿಟಲ್ ಮೀಡಿಯಾದ ಎಡಿಟರ್ ಎಂಬ ಖ್ಯಾತಿ ಗಳಿಸಿದ್ದರು. ಈ ಮೂಲಕ ಡಿಜಿಟಲ್ ಪತ್ರಿಕೋದ್ಯಮಕ್ಕೆ ಹೊಸ ದಿಕ್ಕು ತೋರಿಸಿದ್ದರು. ಪತ್ರಕರ್ತರ ಬಳಗದಲ್ಲಿ ಶಾಮಿ ಎಂದೇ ಜನಪ್ರಿಯತೆ ಪಡೆದಿದ್ದರು.
ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಬರಹವನ್ನೇ ಬದುಕಾಗಿಸಿಕೊಂಡಿದ್ದ ಶ್ಯಾಮಸುಂದರ್ ಅವರು ಸುದೀರ್ಘಕಾಲ ಪತ್ರಕರ್ತರಾಗಿ ದುಡಿದವರು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಪಕ್ಷದೊಳಗೇ ಜಾತಿ ಗಣತಿ ಜಟಾಪಟಿ; ದಿಢೀರ್ ಒಕ್ಕಲಿಗ ಶಾಸಕರ ಸಭೆ ಕರೆದ ಡಿಕೆಶಿ..!
ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಬರಹವನ್ನೇ ಬದುಕಾಗಿಸಿಕೊಂಡಿದ್ದ ಶ್ಯಾಮಸುಂದರ್ ಅವರು ಸುದೀರ್ಘಕಾಲ ಪತ್ರಕರ್ತರಾಗಿ ದುಡಿದವರು.
ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
- ಮುಖ್ಯಮಂತ್ರಿ… pic.twitter.com/WZmifEo7zz— CM of Karnataka (@CMofKarnataka) April 14, 2025
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ