/newsfirstlive-kannada/media/post_attachments/wp-content/uploads/2024/06/renuka-case.jpg)
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಸೇರಿ ಒಟ್ಟು 17 ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಬರ್ಬರವಾಗಿ ಕೊಲೆಯಾದ ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಸಂದೇಶ ಹಾಗೂ ಫೋಟೋವನ್ನು ಕಳುಹಿಸಿದ್ದ. ಹೀಗಾಗಿ ಇದೇ ಕೋಪದಲ್ಲಿ ನಟ ದರ್ಶನ್​ ಮತ್ತು ಸಹಚರರು ರೇಣುಕಾಸ್ವಾಮಿಯನ್ನು ಅಪಹರಿಸಿ ಬೆಂಗಳೂರಿಗೆ ಕರೆತಂದು ಬಹಳ ಕ್ರೂರವಾಗಿ ಕೊಲೆ ಮಾಡಿದ್ದರು ಎನ್ನಲಾಗಿದೆ.
/newsfirstlive-kannada/media/post_attachments/wp-content/uploads/2024/06/renukaswami7.jpg)
ಇದನ್ನೂ ಓದಿ:ದರ್ಶನ್ ಗ್ಯಾಂಗ್ ಜೈಲಲ್ಲಿ ಒಳಸಂಚು ರೂಪಿಸುತ್ತಾ.. ಕೋರ್ಟ್​ಗೆ ಪೊಲೀಸರು ಮತ್ತೆ ಮನವಿ ಮಾಡಿದ್ದೇನು?
ಇದೇ ವಿಚಾರದ ಬಗ್ಗೆ ಸೋಷಿಯಲ್​ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಒಂದು ಕಡೆ ರೇಣುಕಾಸ್ವಾಮಿ ಕೆಟ್ಟದಾಗಿ ಮೆಸೇಜ್ ಮಾಡಿದ್ದು ತಪ್ಪು ಎಂಬುದು ಕೆಲವರ ವಾದ. ಇನ್ನೂ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಹೀಗೆ ಮೆಸೇಜ್​ ಬರುವುದು ಸರ್ವೆ ಸಾಮಾನ್ಯ ಅಂತ ಕೆಲವರ ವಾದ. ಕೊಲೆಯಾದ ರೇಣುಕಾಸ್ವಾಮಿ ಫೇಕ್ ಅಕೌಂಟ್‌ಗಳ ಮೂಲಕ ಸಾಕಷ್ಟು ಜನರಿಗೆ ಇದೇ ರೀತಿ ಕೆಟ್ಟ ಮೆಸೇಜ್ ಕಳುಹಿಸುತ್ತಿದ್ದ ಎನ್ನುವ ಆರೋಪ ಕೇಳಿ ಬರುತ್ತಿದೆ.
/newsfirstlive-kannada/media/post_attachments/wp-content/uploads/2024/06/renuka-case2.jpg)
ಬಿಗ್‌ಬಾಸ್ ಖ್ಯಾತಿಯ ನಟಿ ಚಿತ್ರಾಲ್ ರಂಗಸ್ವಾಮಿ ಕೂಡ ತಮಗೂ ಈ ಅಕೌಂಟ್‌ನಿಂದ ಕೆಟ್ಟ ಮೆಸೇಜ್ ಬಂದಿತ್ತು ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋ ಶೇರ್ ಮಾಡಿ ರೇಣುಕಾಸ್ವಾಮಿ ಅವರದ್ದು ಎನ್ನಲಾದ ಅಕೌಂಟ್​ ಫೋಟೋವನ್ನು ಸ್ಟೋರಿಯಲ್ಲಿ ಶೇರ್ ಮಾಡಿಕೊಂಡು ಅದರ ಬಗ್ಗೆ ಸವಿವರವಾಗಿ ಮಾತನಾಡಿದ್ದಾರೆ.
ಹೌದು, ನಟಿ ಹಾಗೂ ಬಿಗ್‌ಬಾಸ್ ಖ್ಯಾತಿಯ ಚಿತ್ರಾಲ್ ರಂಗಸ್ವಾಮಿ ಅವರು ಈ ಬಗ್ಗೆ ಮಾತಾಡಿದ್ದಾರೆ. ಪ್ರಸ್ತುತವಾಗಿ ಇಲ್ಲಿ ಏನು ನಡೆಯುತ್ತಿದೆ ಎಂದು ಎಲ್ಲರಿಗೂ ಗೊತ್ತಿದೆ. ಈ ಕೊಲೆ ವಿಚಾರವಾಗಿ ಎಲ್ಲರಿಗೂ ಡಿಸ್ಟರ್ಬ್ ಕೂಡ ಆಗಿದೆ. ಇಲ್ಲಿ ಯಾರಿಗೂ ನಾನು ಸಪೋರ್ಟ್ ಮಾಡಲು ಬಂದಿಲ್ಲ. ದೇವರು ರೇಣುಕಾಸ್ವಾಮಿ ಕುಟುಂಬಕ್ಕೆ ಶಕ್ತಿ ಕೊಡಲಿ. ಆದರೆ ರೇಣುಕಾಸ್ವಾಮಿ ಅವರು ಈ ತರ ಹಲವರಿಗೆ ಸಂದೇಶ ಕಳುಹಿಸಿದ್ದರು. ಈ ಬಗ್ಗೆ ಮಾರ್ಚ್‌ನಲ್ಲಿ ಪೊಲೀಸ್​ ಸ್ಟೇಷನ್‌ನಲ್ಲಿ ಕಂಪ್ಲೇಟ್ ಕೂಡ ಆಗಿದೆ. ಅವರ ಅಕೌಂಟ್ ಈ ರೀತಿ ಗೌತಮ್ ಅನ್ನುವ ಹೆಸರಲ್ಲಿ ಇತ್ತು. ಈ ಅಕೌಂಟ್​ನಿಂದ ಅದೇ ರೀತಿಯ ಕೆಟ್ಟ ಮೆಸೇಜ್‌ಗಳನ್ನು ಸಾಕಷ್ಟು ಜನರಿಗೆ ಕಳುಹಿಸಿದ್ದರಂತೆ. ನನಗೆ ಅಚ್ಚರಿ ಆಯಿತು.
/newsfirstlive-kannada/media/post_attachments/wp-content/uploads/2024/06/renuka-case1.jpg)
ನಾನು ಅದರ ಸ್ಕ್ರೀನ್ ಶಾಟ್ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡರೆ ತಪ್ಪಾಗುತ್ತದೆ. ಹಾಗಾಗಿ ಹಾಕಲಿಲ್ಲ. ನನಗೆ ಆ ರೀತಿ ಮರ್ಮಾಂಗದ ಚಿತ್ರ ಆಗಲಿ, ಬೆತ್ತಲೆ ಫೋಟೋ ಆಗಲಿ ಅಥವಾ ಹಸ್ತ ಮೈಥುನದ ವಿಡಿಯೋ ಆಗಲಿ ಬಂದರೆ ನಾನು ಕೂಡಲೇ ಆ ಅಕೌಂಟ್ ಬ್ಲಾಕ್ ಮಾಡ್ತೀನಿ. ನನ್ನ ಇನ್‌ಸ್ಟಾಗ್ರಾಮ್ ಬ್ಲಾಕ್ ಲಿಸ್ಟ್ ಅಲ್ಲಿ ನೋಡಿದಾಗ ಈ ಅಕೌಂಟ್ ಇದೆ. ಇಷ್ಟು ದಿನ ನಾನು ಸುಮ್ಮನಿದ್ದೆ. ಆದರೆ ಇದನ್ನು ನೋಡಿದ ಮೇಲೆ ಹೇಳಬೇಕು ಎಂದು ಮುಂದೆ ಬಂದೆ. ನನಗೆ ಇದನ್ನು ನೋಡಿ ಫುಲ್ ಶಾಕ್​ ಆಯಿತು. ಅಂತಹ ಸುಂದರ ಹೆಂಡತಿ ಇರುವಾಗ ಈ ರೀತಿ ಸರೀನಾ? ಛೀ ಎನಿಸುತ್ತದೆ. ನಾನು ಈ ಅಕೌಂಟ್​ ನೋಡಿ ನನಗೂ ಇದರಿಂದ ಮೆಸೇಜ್​ ಬಂದಿದೆ ಅಂತ ಬ್ಲಾಕ್​ ಲಿಸ್ಟ್​ನಲ್ಲಿ ನೋಡಿದೆ. ಆಗ ಅಕೌಂಟ್​ನಿಂದ ನನಗೂ ಮೆಸೇಜ್​ ಬಂದಿತ್ತು. ಆಗ ನನಗೆ ನಿಜವಾಗಲೂ ಶಾಕ್​ ಆಯ್ತು ಅಂತ ಹೇಳಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us