‘ಸೀತಾ ವಲ್ಲಭ’ ನಟಿ ಸುಪ್ರೀತಾ ಸತ್ಯನಾರಾಯಣ್ ಮನೆಯಲ್ಲಿ ಮದುವೆ ಸಂಭ್ರಮ

author-image
Veena Gangani
Updated On
‘ಸೀತಾ ವಲ್ಲಭ’ ನಟಿ ಸುಪ್ರೀತಾ ಸತ್ಯನಾರಾಯಣ್ ಮನೆಯಲ್ಲಿ ಮದುವೆ ಸಂಭ್ರಮ
Advertisment
  • ಸೀತಾ ವಲ್ಲಭದಲ್ಲಿ ಮೈಥಲಿ ಪಾತ್ರದ ನಟಿ ಸುಪ್ರೀತಾ ಅಭಿನಯ
  • ಸೀತಾ ವಲ್ಲಭ ಧಾರಾವಾಹಿ ಮೂಲಕ ಫೇಮಸ್ ಆಗಿದ್ದ ನಟಿ
  • ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಸುಪ್ರೀತಾ ಸತ್ಯನಾರಾಯಣ್‌

ಕನ್ನಡ ಕಿರುತೆರೆಯಲ್ಲಿ ವಿಭಿನ್ನವಾಗಿ ಮೂಡಿ ಬರುತ್ತಿತ್ತು ಸೀತಾ ವಲ್ಲಭ ಧಾರಾವಾಹಿ. ಇದೇ ಧಾರಾವಾಹಿ ಮೂಲಕ ಸಖತ್​ ಫೇಮಸ್​ ಆಗಿದ್ದ ನಟಿ ಎಂದರೆ ಸುಪ್ರೀತಾ ಸತ್ಯನಾರಾಯಣ್‌. ಇದೀಗ ನಟಿ ಸುಪ್ರೀತಾ ಸತ್ಯನಾರಾಯಣ್‌ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

ಇದನ್ನೂ ಓದಿ:ಪಾಕಿಸ್ತಾನಕ್ಕೆ ಮೊತ್ತೊಂದು ದೊಡ್ಡ ಆಘಾತ; 12 ಸೈನಿಕರು ಛಿದ್ರ ಛಿದ್ರ..! VIDEO

publive-image

ಹೌದು, ಕನ್ನಡ ಕಿರುತೆರೆ ನಟಿ ಸುಪ್ರೀತಾ ಸತ್ಯನಾರಾಯಣ್ ಸೀತಾ ವಲ್ಲಭ ಧಾರಾವಾಹಿಯಲ್ಲಿ ಮೈಥಲಿ ಪಾತ್ರದ ಮೂಲಕ ಪ್ರೇಕ್ಷಕರ ಮನಸ್ಸು ಗೆದ್ದುಕೊಂಡಿದ್ದರು. ಅಲ್ಲದೇ ಗಿರೀಶ್ ವೈರಮುಡಿ ನಿರ್ದೇಶನದ ರಹದಾರಿ ಚಿತ್ರದ ಮೂಲಕ ಸಾಂಡಲ್​ವುಡ್​ಗೆ ಪಾದಾರ್ಪಣೆ ಮಾಡಿದ್ದರು.

publive-image

ಇದೀಗ ನಟಿ ಸುಪ್ರೀತಾ ಸತ್ಯನಾರಾಯಣ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಸದ್ಯ ನಟಿ ಸುಪ್ರೀತಾ ಸತ್ಯನಾರಾಯಣ್ ಹಾಗೂ ಭಾವಿ ಪತಿ ಜೊತೆಗೆ ಅರಿಶಿಣ ಶಾಸ್ತ್ರದಲ್ಲಿ ಮಿಂದೆದ್ದಿದ್ದಾರೆ. ಅರಿಶಿಣ ಶಾಸ್ತ್ರದ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್​ ಆಗಿವೆ.

ಇನ್ನೂ, ಈ ಹಿಂದೆ ನಟಿ ಸುಪ್ರೀತಾ ಸತ್ಯನಾರಾಯಣ್ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಫೋಟೋ ಶೇರ್​ ಮಾಡಿಕೊಳ್ಳುವ ಮೂಲಕ ಬಹಿರಂಗ ಪಡಿಸಿದ್ದರು. ಕಳೆದ ಮಾರ್ಚ್‌ ತಿಂಗಳಿನಲ್ಲಿ ಸುಪ್ರೀತಾ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದರು.

publive-image

ಯಾರು ಈ ಚಂದನ್‌ ಶೆಟ್ಟಿ?

ನಟಿ ಸುಪ್ರೀತಾ ಸತ್ಯನಾರಾಯಣ್‌ ಅವರು ಚಂದನ್‌ ಶೆಟ್ಟಿ ಎನ್ನುವವರ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಚಂದನ್‌ ಶೆಟ್ಟಿ ಅವರು ಇನ್‌ಸ್ಟಾಗ್ರಾಮ್​ನಲ್ಲಿ ಡಿಜಿಟಲ್‌ ಕ್ರಿಯೇಟರ್‌, ಸಾಫ್ಟ್‌ವೇರ್‌ ಉದ್ಯೋಗಿ ಎಂದು ಬರೆದುಕೊಂಡಿದ್ದಾರೆ. ಕೊಡಗಿನಿಂದ ಬೆಂಗಳೂರಿಗೆ ಬಂದು ನೆಲೆಸಿದ್ದಾರೆ. ಇನ್​ಸ್ಟಾ ಖಾತೆಯಲ್ಲಿ ದೇಶ ವಿದೇಶ ಸುತ್ತಿರೋ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment