/newsfirstlive-kannada/media/post_attachments/wp-content/uploads/2024/08/kannada-actress4.jpg)
ರಾಮಾಚಾರಿ ಸೀರಿಯಲ್ ಕನ್ನಡ ಕಿರುತೆರೆಯಲ್ಲಿ ವೀಕ್ಷಕರ ಫೇವರೆಟ್​ ಆಗಿ ಉಳಿದುಕೊಂಡಿದೆ. ಇದೇ ಧಾರಾವಾಹಿಯಲ್ಲಿ ಇತ್ತೀಚೆಗೆ ಶುರುವಾಗಿದ್ದ ರಾಮಾಚಾರಿ ಹಾಗೂ ಚಾರು ಮದುವೆಯ ರೋಚಕ ತಿರುವು ಕೊನೆಗೂ ಅಂತ್ಯ ಕಂಡಿದೆ. ಆದರೆ ಇದರ ಮಧ್ಯೆ ಅಭಿಮಾನಿಗಳಿಗೆ ನಟಿ ಮೌನ ಗುಡ್ಡೆಮನೆ ಗುಡ್​ನ್ಯೂಸ್​ವೊಂದನ್ನು ಕೊಟ್ಟಿದ್ದಾರೆ.
/newsfirstlive-kannada/media/post_attachments/wp-content/uploads/2024/08/ramachari-serial2.jpg)
ಹೌದು, ಇಷ್ಟು ದಿನ ಧಾರಾವಾಹಿ ಮೂಲಕ ವೀಕ್ಷಕರನ್ನು ರಂಜಿಸುತ್ತಿದ್ದ ನಟಿ ಮೌನ ಗುಡ್ಡೆಮನೆ ಸ್ಯಾಂಡಲ್​ವುಡ್​ಗೆ ಕಾಲಿಟ್ಟಿದ್ದಾರೆ. ಅದು ಕೂಡ ಹೊಚ್ಚ ಹೊಸ ಸಿನಿಮಾದಲ್ಲಿ ನಾಯಕಿಯಾಗಿ ಮಿಂಚಲಿದ್ದಾರೆ. ಅದೇ ಸಿನಿಮಾದಲ್ಲಿ ಕಾಮಿಡಿ ಕಿಲಾಡಿಗಳು ಸೀಸನ್ 2ರ ವಿನ್ನರ್ ಆಗಿದ್ದ ಮಡೆನೂರು ಮನು ನಾಯಕ ನಟನಾಗಿ ಜೋಡಿಯಾಗಿದ್ದಾರೆ.
/newsfirstlive-kannada/media/post_attachments/wp-content/uploads/2023/06/RAMACHARI_MOUNA.jpg)
ಯೋಗರಾಜ್ ಭಟ್ ಅವರ ಯೋಗರಾಜ್ ಸಿನಿಮಾಸ್ ಅರ್ಪಿಸುವ ಹೊಸ ಸಿನಿಮಾದಲ್ಲಿ ಮಡೆನೂರು ಮನುಗೆ ಹೀರೋ ಆಗಿ ಮಿಂಚಲು ಸಜ್ಜಾಗಿದ್ದಾರೆ. ವಿಶೇಷವೆಂದರೆ, ಈ ಸಿನಿಮಾಗೆ ರಾಮಾಚಾರಿ ಧಾರಾವಾಹಿಯಲ್ಲಿ ಚಾರುಲತಾ ಪಾತ್ರದ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದುಕೊಂಡಿದ್ದ ಮೌನ ಗುಡ್ಡೆಮನೆ ನಾಯಕಿಯಾಗಿ ಆಯ್ಕೆ ಆಗಿದ್ದಾರೆ. ಇದೇ ಮೊದಲ ಬಾರಿಗೆ ಮಡೆನೂರು ಮನು ಮತ್ತು ಮೌನ ಗುಡ್ಡೆಮನೆ ಸ್ಯಾಂಡಲ್​ವುಡ್​ಗೆ ಎಂಟ್ರಿ ಕೊಡುತ್ತಿದ್ದಾರೆ.
/newsfirstlive-kannada/media/post_attachments/wp-content/uploads/2024/07/Mouna-Guddemane1.jpg)
ಈ ಹೊಸ ಸಿನಿಮಾಗೆ 'ಕುಲದಲ್ಲಿ ಕೀಳ್ಯಾವುದೋ' ಅಂತ ಟೈಟಲ್ ಇಡಲಾಗಿದೆ. ಸದ್ಯ ಟೈಟಲ್‌ನಿಂದಲೇ ಈ ಸಿನಿಮಾದ ಮೇಲೆ ಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಾಗಿದೆ. ಇದೇ ಸಿನಿಮಾವನ್ನು ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ ಕೆ ಮತ್ತು ವಿದ್ಯಾ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.
ಇದನ್ನೂ ಓದಿ:ರಾಮಾಚಾರಿ ಅಭಿಮಾನಿಗಳಿಗೆ ಶುಭ ಸುದ್ದಿ; ಪರಭಾಷೆಗೆ ರಿಮೇಕ್ ಆಗಲು ಸಜ್ಜಾಗಿದೆ ಧಾರಾವಾಹಿ
View this post on Instagram
ಸ್ಯಾಂಡಲ್‌ವುಡ್‌ನಲ್ಲಿ ಸಾಕಷ್ಟು ಸಿನಿಮಾಗಳನ್ನು ನಿರ್ದೇಶನ ಮಾಡಿರೋ ಕೆ ರಾಮ್ ನಾರಾಯಣ್ ಅವರು ಈ ಬಾರಿ 'ಕುಲದಲ್ಲಿ ಕೀಳ್ಯಾವುದೋ' ಸಿನಿಮಾಕ್ಕೆ ಡೈರೆಕ್ಷನ್ ಮಾಡಲಿದ್ದಾರೆ. ಈಗಾಗಲೇ ಈ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆ ಆಗಿ, ಸದ್ದು ಮಾಡುತ್ತಿದೆ. ಟೀಸರ್ ಮೂಲಕವೇ ಕುತೂಹಲ ಮೂಡಿಸಿರುವ ಈ ಸಿನಿಮಾದ ಚಿತ್ರೀಕರಣ ಸೆಪ್ಟೆಂಬರ್‌ನಲ್ಲಿ ಶುರುವಾಗಲಿದೆ. ಸಕಲೇಶಪುರ, ಹಾಸನ, ರಾಮನಗರ, ಬೆಂಗಳೂರು ಮುಂತಾದ ಕಡೆ ಶೂಟಿಂಗ್ ನಡೆಯಲಿದೆ. ನಡೆಯಲಿದೆ ಎಂದು ತಿಳಿದು ಬಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us