newsfirstkannada.com

ಮೋಹಕ ತಾರೆ ಅಭಿಮಾನಿಗಳಿಗೆ ಬೇಸರದ ಸುದ್ದಿ.. ಶಾಕಿಂಗ್ ನಿರ್ಧಾರ ಅನೌನ್ಸ್ ಮಾಡಿದ ರಮ್ಯಾ; ಏನದು?

Share :

Published March 26, 2024 at 5:07pm

    8 ವರ್ಷದ ನಂತರ ಮತ್ತೆ ಬಣ್ಣದ ಲೋಕಕ್ಕೆ ಬರುವ ನಿರ್ಧಾರ ಏನಾಯ್ತು?

    ಸಿನಿಮಾದಲ್ಲಿ ನಟಿಸಲು ಸಾಕಷ್ಟು ತಯಾರಿ ನಡೆಸಿದ್ದ ಮೋಹಕ ತಾರೆ ರಮ್ಯಾ

    ಇನ್​ಸ್ಟಾ ಸ್ಟೇಟಸ್​ನಲ್ಲಿ ಪೋಸ್ಟ್ ಬಿಗ್ ಶಾಕ್ ಕೊಟ್ಟ ಸ್ಯಾಂಡಲ್​ವುಡ್ ನಟಿ

ಮೋಹಕ ತಾರೆ ರಮ್ಯಾ 8 ವರ್ಷಗಳ ನಂತರ ಮತ್ತೆ ಬಣ್ಣದ ಲೋಕಕ್ಕೆ ಬರುತ್ತಾರೆ ಎಂದು ಹೇಳಲಾಗುತ್ತಿತ್ತು. ಉತ್ತರಕಾಂಡ ಸಿನಿಮಾದಲ್ಲಿ ಡಾಲಿ ಧನಂಜಯ್​ಗೆ ಜೋಡಿಯಾಗಿ ಮೋಹಕ ತಾರೆ ಕಾಣಿಸಿಕೊಂಡು ಸ್ಯಾಂಡಲ್​ವುಡ್​ನಲ್ಲಿ ಹಂಗಮಾ ಸೃಷ್ಟಿ ಮಾಡುತ್ತಾರೆ ಎಂದು ಹೇಳಲಾಗುತ್ತಿತ್ತು. ಆದರೆ ಉತ್ತರಕಾಂಡ ಸಿನಿಮಾದಲ್ಲಿ ರಮ್ಯಾ ನಟಿಸುವುದಿಲ್ಲ ಎನ್ನುವ ಸುದ್ದಿ ಹೊರ ಬಿದ್ದಿದ್ದು ಈ ಬಗ್ಗೆ ಸ್ವತಃ ರಮ್ಯಾ ಮಾಹಿತಿ ಹಂಚಿಕೊಂಡಿದ್ದಾರೆ.

ರಮ್ಯಾ ಅವರು ಈ ಬಗ್ಗೆ ತಮ್ಮ ಅಧಿಕೃತ ಇನ್​ಸ್ಟಾದ ಸ್ಟೇಟಸ್​ನಲ್ಲಿ ಉತ್ತರಕಾಂಡ ಸಿನಿಮಾದಲ್ಲಿ ಅಭಿನಯಿಸುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ. ಡೇಟ್ಸ್​ ಇಲ್ಲದ ಕಾರಣದಿಂದ ನಾನು ಉತ್ತರಾಖಂಡ ಸಿನಿಮಾದ ಕೆಲಸದಿಂದ ಹೊರ ಬಂದಿದ್ದೇನೆ. ಸಿನಿಮಾ ತಂಡಕ್ಕೆ ಶುಭ ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಈಜಲು ನದಿಗೆ ಇಳಿದಿದ್ದ ಮೂವರು ಯುವಕರು ನೀರು ಪಾಲು.. ಓರ್ವನ ಮೃತದೇಹ ಪತ್ತೆ

ರೋಹಿತ್ ಪದಕಿ‌ ನಿರ್ದೇಶನದಲ್ಲಿ ಉತ್ತರಕಾಂಡ ಸಿನಿಮಾದಲ್ಲಿ ಡಾಲಿ ನಟಿಸುತ್ತಿದ್ದು ಇದಕ್ಕೆ ಕೆಆರ್​ಜಿ ನಿರ್ಮಾಣ ಸಂಸ್ಥೆ ಬಂಡವಾಳ ಹೂಡುತ್ತಿದೆ. ಅಲ್ಲದೇ ಪ್ರಮುಖ ಪಾತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್​ ಕುಮಾರ್​ ಕೂಡ ಅಭಿನಯ ಮಾಡುತ್ತಿದ್ದಾರೆ. ಆದರೆ ರಮ್ಯಾ ಅವರು ಸಿನಿಮಾದಲ್ಲಿ ನಟಿಸುತ್ತಾರೆ ಎಂದು ಹೇಳಲಾಗಿತ್ತು. ಇದಕ್ಕಾಗಿ ರಮ್ಯಾ ಕೂಡ ಸಾಕಷ್ಟು ತಯಾರಿ ನಡೆಸಿದ್ದರು. ಬಹಳ ವರ್ಷಗಳ ನಂತರ ಸ್ಯಾಂಡಲ್​ವುಡ್​ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿತ್ತು. ಆದರೆ ಈಗ ರಮ್ಯಾ ಅವರೇ ನಾನು ನಟಿಸುತ್ತಿಲ್ಲ ಎಂದು ಹೇಳಿದ್ದಾರೆ. ಇದರಿಂದ ಚಿತ್ರತಂಡ ಹೊಸ ಹೀರೋಯಿನ್​ರನ್ನ ಕರೆತರಬೇಕಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮೋಹಕ ತಾರೆ ಅಭಿಮಾನಿಗಳಿಗೆ ಬೇಸರದ ಸುದ್ದಿ.. ಶಾಕಿಂಗ್ ನಿರ್ಧಾರ ಅನೌನ್ಸ್ ಮಾಡಿದ ರಮ್ಯಾ; ಏನದು?

https://newsfirstlive.com/wp-content/uploads/2024/03/RAMYA.jpg

Load More