Breaking: ಸ್ಯಾಂಡಲ್​​ವುಡ್​ನ ಅಭಿನಯ ಸರಸ್ವತಿ ಬಿ.ಸರೋಜಾದೇವಿ ಇನ್ನಿಲ್ಲ

author-image
Ganesh
Updated On
13ನೇ ವಯಸ್ಸಿನಲ್ಲಿ ಸಿನಿಮಾ ಆಫರ್​; 60 ವರ್ಷದಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟನೆ.. ಸರೋಜಾದೇವಿ ಸಿನಿ ಬದುಕು..
Advertisment
  • ಚಂದನವನದ ಅಭಿನಯ ಶಾರದೆ ಸರೋಜಾದೇವಿ ಇನ್ನಿಲ್ಲ
  • ಮಲ್ಲೇಶ್ವರಂನ ಮಣಿಪಾಲ್​ ಆಸ್ಪತ್ರೆಯಲ್ಲಿ ಸರೋಜಾದೇವಿ ನಿಧನ
  • ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸರೋಜಾದೇವಿ

ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರು ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ, ಸರೋಜಾದೇವಿ ಯಶವಂತಪುರದಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 87 ವರ್ಷಗಳಾಗಿತ್ತು.

ಬಿ.ಸರೋಜಾದೇವಿ ಅವರು ಕನ್ನಡ ಚಿತ್ರರಂಗದ ಪ್ರಮುಖ ನಟಿ. ಅವರನ್ನು ‘ಅಭಿನಯ ಸರಸ್ವತಿ’ ಎಂದು ಕರೆಯಲಾಗುತ್ತಿತ್ತು. ಅವರು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಹೆಸರುವಾಸಿಯಾಗಿದ್ದರು. ಅವರು 1955 ರಿಂದ 1984 ರವರೆಗೆ ಸತತವಾಗಿ 161 ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದರು.

ಇದನ್ನೂ ಓದಿ: ಒಟ್ಟಿಗೆ ಬೆಳೆದ ಸ್ಟಾರ್ ಜೋಡಿ ಇದು! ಸೈನಾ – ಕಶ್ಯಪ್ ಲವ್ ಸ್ಟೋರಿ ಶುರುವಾಗಿದ್ದು ಹೇಗೆ..?

ಸರೋಜಾದೇವಿ ಅವರು 1969ರಲ್ಲಿ ಪದ್ಮಶ್ರೀ ಪ್ರಶಸ್ತಿ ಮತ್ತು 1992ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಮತ್ತು ತಮಿಳುನಾಡಿನಿಂದ ಕಲೈಮಾಮಣಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.

ಸರೋಜಾದೇವಿ ಅವರು ಕನ್ನಡ ಚಲನಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ ಮಹಾನ್ ನಟಿ. ಮಹಾಕವಿ ಕಾಳಿದಾಸ, ಕಿತ್ತೂರು ಚೆನ್ನಮ್ಮ, ಅಣ್ಣಾ ತಮ್ಮ, ಭಕ್ತ ಕನಕದಾಸ, ಬಾಳೇ ಬಂಗಾರ, ನಾಗಕನ್ಯೆ, ಬೆಟ್ಟದ ಹೂವು, ಕಸ್ತೂರಿ ನಿವಾಸ ಸೇರಿದಂತೆ ಅನೇಕ ಕನ್ನಡ ಚಿತ್ರಗಳಲ್ಲಿ ನಟಿಸಿದ್ದರು. ನಾಡೋಡಿ ಮನ್ನನ್, ಕರ್ಪೂರ ಕರಸಿ, ಪಾಂಡುರಂಗ ಮಹಾತ್ಯಂ, ತಿರುಮಣಂ ತಮಿಳು ಚಿತ್ರಗಳಲ್ಲಿ ಅಭಿನಯಿಸಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment