ಹೊಸ ವರ್ಷಕ್ಕೆ ಹೊಸ ಹೆಜ್ಜೆಯಿಟ್ಟ ರಂಜನಿ ರಾಘವನ್; ಕನ್ನಡತಿಯಿಂದ ಭರ್ಜರಿ ಗುಡ್​ನ್ಯೂಸ್​​

author-image
Veena Gangani
Updated On
ಹೊಸ ವರ್ಷಕ್ಕೆ ಹೊಸ ಹೆಜ್ಜೆಯಿಟ್ಟ ರಂಜನಿ ರಾಘವನ್; ಕನ್ನಡತಿಯಿಂದ ಭರ್ಜರಿ ಗುಡ್​ನ್ಯೂಸ್​​
Advertisment
  • ಬರವಣಿಗೆ, ಸೀರಿಯಲ್​, ಸಿನಿಮಾದ ಈಗ ನಟಿಯ ಪ್ಲಾನ್​ ಏನು?
  • ಕನ್ನಡತಿ ಧಾರಾವಾಹಿಯಲ್ಲಿ ಭುವಿ ಪಾತ್ರ ನಿಭಾಯಿಸಿದ್ದ ರಂಜನಿ
  • ಸೋಷಿಯಲ್​ ಮೀಡಿಯಾದಲ್ಲಿ ವೈರಲ್ ಆಯ್ತು ನಟಿ ಫೋಸ್ಟ್​

ಕನ್ನಡ ಕಿರುತೆರೆಯ ಜನ ಮೆಚ್ಚಿದ ಸೀರಿಯಲ್​ ಎಂದರೆ ಅದು ಕನ್ನಡತಿ. ಈ ಸೀರಿಯಲ್​​ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದಿರೋ ನಟಿ ರಂಜನಿ ರಾಘವನ್ ಎಲ್ಲರಿಗೂ ಅಚ್ಚುಮೆಚ್ಚು. ಕನ್ನಡತಿ ಧಾರಾವಾಹಿಯಲ್ಲಿ ಭುವಿ ಪಾತ್ರ ನಿಭಾಯಿಸಿದ್ದ ರಂಜನಿ ಅವರಿಗೆ ಸಾಕಷ್ಟು ಅಭಿಮಾನಿಗಳ ಬಳಗ ಇದೆ.

ಇದನ್ನೂ ಓದಿ:ಕಿಚ್ಚ ಸುದೀಪ್​ ಫ್ಯಾಮಿಲಿಯಿಂದ ಸ್ಯಾಂಡಲ್​​​ವುಡ್​ಗೆ ಹೀರೋ ಎಂಟ್ರಿ.. ಯುವ ನಟನ ಹೆಸರೇನು..?

ಜನ ಮೆಚ್ಚಿದ ಕನ್ನಡತಿ ಧಾರಾವಾಹಿ ಮುಕ್ತಾಯದ ನಂತರ ರಂಜನಿ ರಾಘವನ್ ಒಂದು ಲಾಂಗ್ ಬ್ರೇಕ್ ತೆಗೆದುಕೊಂಡಿದ್ದರು. ಸಿನಿಮಾ ಸೇರಿದಂತೆ ಬೇರೆ ಬೇರೆ ಕೆಲಸದಲ್ಲಿ ಬ್ಯುಸಿಯಾಗಿದ್ದ ನಟಿ ರಂಜನಿ ರಾಘವನ್ ಇದೀಗ ಅಭಿಮಾನಿಗಳಿಗೆ ಮತ್ತೊಂದು ಶುಭ ಸುದ್ದಿ ಕೊಟ್ಟಿದ್ದಾರೆ.

publive-image

ಸೀರಿಯಲ್​, ಸಿನಿಮಾ, ಬರವಣಿಗೆಯ ನಂತರ ನಿರ್ದೇಶನದತ್ತ ಮುಖ ಮಾಡಿದ್ದಾರೆ ಸ್ಟಾರ್​ ನಟಿ ರಂಜನಿ ರಾಘವನ್. ಪುಟ್ಟಗೌರಿ ಮದುವೆ, ಕನ್ನಡತಿ ಸೀರಿಯಲ್‌ಗಳ ಮೂಲಕ ಗಮನ ಸೆಳೆದ ಪ್ರತಿಭಾನ್ವಿತ ನಟಿ ರಂಜನಿ ರಾಘವನ್ ನಿರ್ದೇಶನದತ್ತ ಮುಖ ಮಾಡಿರೋದು ಅಭಿಮಾನಿಗಳಿಗೆ ಖುಷಿ ತಂದಿದೆ. ಅದರಲ್ಲೂ ನಟಿಯ ಚೊಚ್ಚಲ ಸಿನಿಮಾಗೆ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಸಂಯೋಜನೆಯಲ್ಲಿ ಮ್ಯೂಸಿಕ್ ಬರಲಿದೆ.

publive-image

ಹೊಸ ವರ್ಷದಂದು ನಿರ್ದೇಶನ ಮಾಡುತ್ತಿರುವ ಬಗ್ಗೆ ಅಭಿಮಾನಿಗಳೊಂದಿಗೆ ಈ ಖುಷಿಯನ್ನು ಹಂಚಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರ ಜೊತೆಗೆ ಇರುವ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಅದರ ಜೊತೆಗೆ ಹೊಸ ವರ್ಷದ ದಿನ ನನ್ನ ಹೊಸ ಕೆಲಸದ ಬಗ್ಗೆ ಹೇಳಿಕೊಳ್ಳಲು ಭಯ ಉತ್ಸಾಹ ಎರಡೂ ಇದೆ. ಈ ಹಿಂದೆ ಬರವಣಿಗೆ ಮತ್ತು ನಟನೆಯ ಮೂಲಕ ಕಥೆಗಳನ್ನ ತಲುಪಿಸೋ ಪ್ರಯತ್ನ ಮಾಡಿದ್ದೇನೆ. ಈಗ ಮೊದಲ ಬಾರಿಗೆ ಕಥೆಯೊಂದನ್ನ ದೊಡ್ಡ ಪರದೆಯ ಮೇಲೆ ನಿಮಗೆ ತೋರಿಸುವತ್ತ ಕೆಲಸ ನಡೆದಿದೆ. ಹೊಸ ಕೆಲಸ ಅನ್ನುವುದಕ್ಕಿಂತ ಸಿನಿಮಾ ನಿರ್ದೇಶಕಿ ಆಗಬೇಕೆಂಬ ಕನಸು ಹೊತ್ತು ಬಹಳ ವರ್ಷಗಳೇ ಸರಿದಿದೆ. ಈ ಕತೆ ಹುಟ್ಟಿ ಎರಡು ವರ್ಷಗಳಾಗಿವೆ. ಒಂದೂವರೆ ವರ್ಷದಿಂದ ಇದರ ಚಿತ್ರಕತೆಯನ್ನ ಬರೆದು ತಿದ್ದಿದ್ದೇನೆ. ಚಿತ್ರರಂಗದ ಹಲವಾರು ಜನರ ಸಹಾಯ ಪ್ರೋತ್ಸಾಹದಿಂದ, ನಮ್ಮ ನಿರ್ಮಾಪಕರಾದ ಡಾ.ಆನಂದ್ ಮತ್ತು ರಾಮಕೃಷ್ಣ ಸುಬ್ರಮಣ್ಯಂ ಅವರ ಸಹಕಾರದಿಂದ ನಮ್ಮ ಸಿನಿಮಾ ಬಗ್ಗೆ ಮಾತನಾಡುವ ಧೈರ್ಯ ಬಂದಿದೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಶಿವಣ್ಣ ಆರೋಗ್ಯದ ಬಗ್ಗೆ ಅಪ್​​ಡೇಟ್ಸ್​.. ಅಭಿಮಾನಿಗಳಿಗೆ ಭರ್ಜರಿ ಗುಡ್​​ನ್ಯೂಸ್

ಈ ಪಯಣದಲ್ಲಿ ಮುಖ್ಯವಾಗಿ ನನಗೆ ಶಕ್ತಿಯಾಗಿರುವವರು Maestro ಇಸೈಜ್ಞಾನಿ ಇಳಯರಾಜ ಸರ್. 1000 ಹೆಚ್ಚು ಚಿತ್ರಕ್ಕೆ ಸಂಗೀತ ನೀಡಿರುವವರು ನನ್ನ ಕತೆಯನ್ನ ಮೆಚ್ಚಿ ಜೊತೆಗೆ ನಿಂತಿದ್ದಾರೆ. ಸೆಪ್ಟೆಂಬರ್ 13ರಂದು 2023ರ ವೇಳೆ ಅವರನ್ನ ಭೇಟಿ ಆಗಿ ಕತೆ ಹೇಳುವ ಅದೃಷ್ಟ ಸಿಕ್ಕಾಗ ಚೆನ್ನೈಗೆ ಹೋಗಿ ಅವರನ್ನ ಭೇಟಿ ಆಗಿ, ಕಾಲಿಗೆ ಬಿದ್ದು ಒಂದು ಫೋಟೋ ತೆಗೆಸಿಕೊಂಡು ಬಂದ್ರೆ ಅದೇ ದೊಡ್ಡದು ಅಂತಷ್ಟೇ ಅಂದುಕೊಂಡಿದ್ದು. ಕನ್ನಡದಲ್ಲಿ ಕಥೆ ಹೇಳಮ್ಮ, ಕನ್ನಡ ನನಗೆ ಚೆನ್ನಾಗಿ ಬರುತ್ತೆ ಕೊಲ್ಲೂರು ಮೂಕಾಂಬಿಕೆ ನನ್ನವ್ವ ಎಂದು ಮಾತು ಶುರು ಮಾಡಿದವರು ಮೂರೇ ದಿನದಲ್ಲಿ ಕಥೆ ನನ್ನ ಮನಸ್ಸಿಗೆ ಬಹಳ ಹತ್ತಿರವಾಗಿದೆ ಎಂದು ತಿಳಿಸಿ ನಮ್ಮ ಸಿನಿಮಾದ ಭಾಗವಾಗಿ, ಇವತ್ತಿಗೆ ಇಳಯರಾಜ ಸರ್ ನಮಗೆ ‘ಒನ್ ಕಾಲ್ ಅವೇ’ ಅನ್ನೋ ಜಂಭ ಹುಟ್ಟಿಸಿದ್ದಾರೆ. ಹೋದ ವರ್ಷ 2024 ಜನವರಿ ಒಂದು ನನ್ನ ಹೊಸ ಕನಸಿನ ಬಗ್ಗೆ ಪೋಸ್ಟ್ ಹಾಕಿದ್ದರೂ ಅದೇನೆಂದು ಹೇಳಲು 2025 ಬರಬೇಕಾಯಿತು. ಸಿನಿಮಾ ಮಾಡುವಾಗ ಎಲ್ಲವೂ ಅಂದುಕೊಂಡಂತೆ ನಡೆಯುವುದಿಲ್ಲ ಅನ್ನುವುದು ಇಲ್ಲಿಯ ತನಕ ಕಲಿತ ಪಾಠವಾದರೂ ಒಳ್ಳೆಯ ಸಿನಿಮಾ ಆಗಲು ಅದಕ್ಕೇನು ಬೇಕೋ ಅದೇ ಪಡೆದುಕೊಳ್ಳುತ್ತದೆ ಅನ್ನೋ ನಂಬಿಕೆಯೂ ಅಚಲವಾಗಿದೆ. ಕನ್ನಡಿಗರ ಅಶೀರ್ವಾದ, ಸಹಕಾರವನ್ನ ಬೇಡುತ್ತಾ ಮುನ್ನಡೆಯುತ್ತಿದ್ದೇನೆ. ನಿಮ್ಮೆಲ್ಲರಿಗೂ ರಾಶಿ ಪ್ರೀತಿ ಎಂದು ಬರೆದುಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment