ಕೆನಡಾ ಸಂಸತ್‌ನಲ್ಲಿ ಕನ್ನಡಿಗನ ಹವಾ.. ಪ್ರತಿಯೊಬ್ಬರೂ ನೋಡಲೇಬೇಕಾದ ವಿಡಿಯೋ ಇದು!

author-image
admin
Updated On
ಕೆನಡಾ ಸಂಸತ್‌ನಲ್ಲಿ ಕನ್ನಡಿಗನ ಹವಾ.. ಪ್ರತಿಯೊಬ್ಬರೂ ನೋಡಲೇಬೇಕಾದ ವಿಡಿಯೋ ಇದು!
Advertisment
  • ಕರ್ನಾಟಕ ಮೂಲದ ಸಂಸದ ಚಂದ್ರ ಆರ್ಯ ಕನ್ನಡ ಪ್ರೇಮ!
  • ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿದ ತುಮಕೂರಿನ ಚಂದ್ರ
  • ಕೆನಡಾ ಸಂಸದರಾಗಿ ಮಾತೃಭಾಷೆಯಲ್ಲೇ ಮಾತನಾಡಿರುವ ಸಂಸದ

ಎಲ್ಲಾದರು ಇರು ಎಂತಾದರು ಇರು.. ಎಂದೆಂದಿಗೂ ನೀ ಕನ್ನಡವಾಗಿರು.. ರಾಷ್ಟ್ರಕವಿ ಕುವೆಂಪು ಅವರು ಬರೆದ ಈ ಸಾಲುಗಳು ಸ್ವಾಭಿಮಾನಿ ಕನ್ನಡಿಗರ ಹೃದಯದಲ್ಲಿ ಅಚ್ಚಳಿಯದೆ ಉಳಿದಿವೆ. ಈ ಹಾಡಿಗೆ ಸಾಕ್ಷಿಯಾದ ಅಪರೂಪದ ಘಟನೆ ಕೆನಡಾ ಸಂಸತ್ತಿನಲ್ಲಿ ನಡೆದಿದೆ. ಕರ್ನಾಟಕ ಮೂಲದ ಸಂಸದ ಚಂದ್ರ ಆರ್ಯ ಅವರು ಕನ್ನಡ ಡಿಂಡಿಮಕ್ಕೆ ಸಾಕ್ಷಿಯಾಗಿದ್ದಾರೆ.

ಕೆನಡಾ ಪ್ರಧಾನಿ ಹುದ್ದೆಗೆ ಜಸ್ಟಿನ್ ಟ್ರುಡೊ ರಾಜೀನಾಮೆ ಕೊಟ್ಟ ಬಳಿಕ ಭಾರತ ಮೂಲದ ಚಂದ್ರ ಆರ್ಯಾ ಅವರ ಹೆಸರು ಹೆಚ್ಚು ಚಾಲ್ತಿಯಲ್ಲಿದೆ. ಮುಂದಿನ ಪ್ರಧಾನ ಮಂತ್ರಿ ರೇಸ್‌ನಲ್ಲಿ ತಮ್ಮ ಹೆಸರು ಕೇಳಿ ಬರುತ್ತಿರುವಾಗಲೇ ಚಂದ್ರ ಆರ್ಯ ಅವರು ಕೆನಡಾ ಪ್ರಧಾನಿ ಹುದ್ದೆಗೆ ಕನ್ನಡದಲ್ಲೇ ಮಾತನಾಡಿ ನಾಮಪತ್ರ ಸಲ್ಲಿಸಿದ್ದಾರೆ. ಚಂದ್ರ ಆರ್ಯ ಅವರ ಈ ಮಾತು ಕೋಟ್ಯಾಂತರ ಕನ್ನಡಿಗರ ಹೃದಯ ಗೆದ್ದಿದೆ.

ಇದನ್ನೂ ಓದಿ: ಕೆನಡಾದಲ್ಲಿ ಡಿಂಡಿಮಿಸಲಿದೆಯಾ ಕನ್ನಡದ ಸೊಗಡು; ಪ್ರಧಾನಿ ಸ್ಥಾನದ ರೇಸ್​ನಲ್ಲಿ ನಾಡಿನ ಕುವರ 

ಕೆನಡಾ ಸಂಸತ್‌ನಲ್ಲಿ ಚಂದ್ರ ಆರ್ಯ ಅವರು ಕನ್ನಡದಲ್ಲೇ ಮಾತನಾಡಿದ್ದು, ಕನ್ನಡಿಗರಿಗೆ ಹೆಮ್ಮೆಯ ವಿಚಾರವಾಗಿದೆ. ಚಂದ್ರ ಆರ್ಯ ಅವರು ಕೆನಡಾ ಸಂಸದರಾಗಿ ಕನ್ನಡದಲ್ಲಿ ಮಾತನಾಡಿರುವ ವಿಡಿಯೋ ಹೃದಯಸ್ಪರ್ಶಿಯ ಕ್ಷಣಗಳಿಗೆ ಸಾಕ್ಷಿಯಾಗಿದೆ. ಸಂಸದ ಚಂದ್ರ ಆರ್ಯ ಅವರು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಗ್ರಾಮದವರು.


">January 17, 2025

ಚಂದ್ರ ಆರ್ಯ ಮುತ್ತಿನ ಮಾತು!
ಮಾನ್ಯ ಸಭಾಪತಿ.. ಕೆನಡಾ ದೇಶದ ಸಂಸತ್ತಿನಲ್ಲಿ ನನ್ನ ಮಾತೃ ಭಾಷೆ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದಕ್ಕೆ ನನಗೆ ಸಂತೋಷವಾಗುತ್ತಿದೆ. ಭಾರತ ದೇಶದ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಗ್ರಾಮದ ವ್ಯಕ್ತಿಯೊಬ್ಬ ಕೆನಡಾದಲ್ಲಿ ಸಂಸತ್ ಸದಸ್ಯನಾಗಿ ಆಯ್ಕೆಯಾಗಿ ಮತ್ತು ಕನ್ನಡದಲ್ಲಿ ಮಾತನಾಡುವುದು ಸುಮಾರು 5 ಕೋಟಿ ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ.

ಕೆನಡಾ ದೇಶದ ಕನ್ನಡಿಗರು 2018ನೇ ಇಸವಿಯಲ್ಲಿ ಕೆನಡಾದ ಈ ಸಂಸತ್ತಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು. ರಾಷ್ಟ್ರಕವಿ ಕುವೆಂಪು ಬರೆದಿರುವ ಮತ್ತು ನಟಸಾರ್ವಭೌಮ ಡಾ.ರಾಜ್‌ಕುಮಾರ್ ಹಾಡಿರುವ ಭಾವಗೀತೆಯ ಕೆಲವು ಪದಗಳೊಂದಿಗೆ ನನ್ನ ಹೇಳಿಕೆಯನ್ನು ಮುಗಿಸುತ್ತಿದ್ದೇನೆ. ಎಲ್ಲಾದರು ಇರು ಎಂತಾದರು ಇರು.. ಎಂದೆಂದಿಗೂ ನೀ ಕನ್ನಡವಾಗಿರು..
- ಧನ್ಯವಾದಗಳು ಸಭಾಪತಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment