ಕಾಂತಾರ ಚಾಪ್ಟರ್ 1 ಸಹ ಕಲಾವಿದ ಆಗುಂಬೆ ಹೋಂ ಸ್ಟೇಯಲ್ಲಿ ನಿಧನ; ಆಗಿದ್ದೇನು?

author-image
admin
Updated On
ಕಾಂತಾರ ಚಾಪ್ಟರ್ 1 ಸಹ ಕಲಾವಿದ ಆಗುಂಬೆ ಹೋಂ ಸ್ಟೇಯಲ್ಲಿ ನಿಧನ; ಆಗಿದ್ದೇನು?
Advertisment
  • ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಾಪ್ಟರ್ 1
  • ಕೇರಳದ ತ್ರಿಶೂರ್ ಮೂಲದ ಸಹ ಕಲಾವಿದನ ದುರಂತ ಅಂತ್ಯ
  • ಸಿನಿಮಾ ಕೆಲಸದ ಹಿನ್ನೆಲೆಯಲ್ಲಿ ಆಗುಂಬೆ ಹೋಂ ಸ್ಟೇಯಲ್ಲಿ ತಂಗಿದ್ದರು

ಶಿವಮೊಗ್ಗ: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ನಿಧನರಾಗಿದ್ದಾರೆ. ವಿಜು ವಿ. ಕೆ ಎಂಬ ಕೇರಳದ ತ್ರಿಶೂರ್ ಮೂಲದ ಕಲಾವಿದ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಮಿಮಿಕ್ರಿ ಕಲಾವಿದ ವಿಜು ವಿ.ಕೆ ಅವರು ಕಾಂತಾರ ಚಾಪ್ಟರ್ 1 ಚಲನಚಿತ್ರದಲ್ಲಿ ಕೆಲಸ ಮಾಡುತ್ತಿದ್ದರು. ಸಿನಿಮಾ ಕೆಲಸದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಂ ಸ್ಟೇಯಲ್ಲಿ ತಂಗಿದ್ದರು.

ಇದನ್ನೂ ಓದಿ: ಕೊನೆಗೂ ಆಕ್ರೋಶಕ್ಕೆ ಮಣಿದ ರಿಷಬ್ ಶೆಟ್ಟಿ.. ಕಾಮಿಡಿ ಕಿಲಾಡಿ ರಾಕೇಶ್ ಪೂಜಾರಿ ತಾಯಿ, ತಂಗಿಗೆ ಸಾಂತ್ವನ 

ನಿನ್ನೆ ರಾತ್ರಿ ವಿಜು ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನ ತೀರ್ಥಹಳ್ಳಿಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯಲ್ಲಿ ಮೃತದೇಹ ಇರಿಸಲಾಗಿದೆ.
ವಿಜು ವಿ.ಕೆ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು, ಕುಟುಂಬಸ್ಥರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

Advertisment