ಕಾವೇರಿ ಜಲಾನಯನ ಪ್ರದೇಶದಲ್ಲಿ ತಗ್ಗಿದ ಮಳೆ.. ಇಳಿಕೆ ಕಂಡ ಒಳ ಹರಿವು! ಇಂದು KRS ಡ್ಯಾಂನ ನೀರಿನ ಮಟ್ಟ ಎಷ್ಟಿದೆ?

author-image
AS Harshith
Updated On
Dam Water Level: ರಾಜ್ಯದ ಜಲಾಶಯಗಳ ಇಂದಿನ ನೀರಿನಮಟ್ಟ ಎಷ್ಟಿದೆ? ಇಲ್ಲಿದೆ ಮಾಹಿತಿ
Advertisment
  • ಕಾವೇರಿ ಜಲಾನಯನ ಪ್ರದೇಶದಲ್ಲಿ ತಗ್ಗಿದ ಮಳೆ
  • ಮಳೆ ತಗ್ಗಿದ ಕಾರಣ ಡ್ಯಾಂನ ಒಳ ಹರಿವಿನಲ್ಲಿ ಇಳಿಕೆ
  • ಸದ್ಯ ಕೆಆರ್​ಎಸ್​ ಡ್ಯಾಂನಲ್ಲಿ ಸಂಗ್ರಹವಾದ ನೀರೆಷ್ಟು?

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾರ್ಭಟ ಕೊಂಚ ಕಡಿಮೆಯಾಗಿದೆ. ಹೀಗಾಗಿ ಕೆಆರ್‌ಎಸ್ ಡ್ಯಾಂನ ಒಳ ಹರಿವು ಇಳಿಕೆ ಕಂಡಿದೆ.

ಮಾಹಿತಿಯಂತೆಯೇ, ನಿನ್ನೆ ಕೃಷ್ಣರಾಜ ಸಾಗರ ಅಣೆಕಟ್ಟಿನ ಒಳಹರಿವು 6,146 ಕ್ಯೂಸೆಕ್ ಇತ್ತು. ಆದರಿಂದು 4,673 ಕ್ಯೂಸೆಕ್ ಗೆ ಇಳಿಕೆಯಾಗಿದೆ.

124.80 ಅಡಿ ಗರಿಷ್ಠ ಮಟ್ಟದ ಕೆಆರ್​ಎಸ್​ ಡ್ಯಾಂನಲ್ಲಿ 104.50 ಅಡಿ ನೀರು ಸಂಗ್ರಹವಾಗಿದೆ. 49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ 26.548 ಟಿಎಂಸಿ ನೀರು ಸಂಗ್ರಹವಾಗಿದೆ. ಡ್ಯಾಂನಿಂದ 2507 ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗಿದೆ.

ಇದನ್ನೂ ಓದಿ: ಇಂದು ವಿಶ್ವ ಕಬಾಬ್​ ದಿನ! ತಿನ್ನೋ ಮುಂಚೆ ಇತಿಹಾಸ ಮತ್ತು ವಿಶೇಷತೆ ತಿಳಿದುಕೊಳ್ಳಿ.. ಪ್ಲೀಸ್​​

ಇಂದಿನ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ

ಗರಿಷ್ಠ ಮಟ್ಟ - 124.80 ಅಡಿ.
ಇಂದಿನ ಮಟ್ಟ - 104.50 ಅಡಿ.
ಗರಿಷ್ಠ ಸಾಮರ್ಥ್ಯ - 49.452 ಟಿಎಂಸಿ
ಇಂದಿನ ಸಾಮರ್ಥ್ಯ - 26.548 ಟಿಎಂಸಿ
ಒಳ ಹರಿವು - 4,673 ಕ್ಯೂಸೆಕ್
ಹೊರ ಹರಿವು - 2,507 ಕ್ಯೂಸೆಕ್

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment