ನಾಳೆಯೇ SSLC ಫಲಿತಾಂಶ ಪ್ರಕಟ; ಎಷ್ಟು ಗಂಟೆಗೆ? ರಿಸಲ್ಟ್ ನೋಡೋದು ಹೇಗೆ? ಇಲ್ಲಿದೆ ಮಾಹಿತಿ

author-image
admin
Updated On
ನಾಳೆಯೇ SSLC ಫಲಿತಾಂಶ ಪ್ರಕಟ; ಎಷ್ಟು ಗಂಟೆಗೆ? ರಿಸಲ್ಟ್ ನೋಡೋದು ಹೇಗೆ? ಇಲ್ಲಿದೆ ಮಾಹಿತಿ
Advertisment
  • 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಅಲ್ಲಿ 8.69 ಲಕ್ಷ ವಿದ್ಯಾರ್ಥಿಗಳು
  • ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ
  • ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸುದ್ದಿಗೋಷ್ಟಿ

ಬೆಂಗಳೂರು: 2023-24ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶಕ್ಕೆ ಸಮಯ ನಿಗದಿಯಾಗಿದೆ. ನಾಳೆ ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಟಿಯಲ್ಲಿ ಫಲಿತಾಂಶ ಪ್ರಕಟ ಮಾಡಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷೆ ಎನ್. ಮಂಜುಶ್ರೀ ಅವರು ನ್ಯೂಸ್ ಫಸ್ಟ್‌ಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ-1ನ್ನು ದಿನಾಂಕ 25.03.2024 ರಿಂದ 06.04.2024 ರವರೆಗೆ ಬರೆದಿದ್ದಾರೆ. 4,41,910 ಬಾಲಕರು ಮತ್ತು 4,28,058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದು, ನಾಳೆ ಇವರ ಭವಿಷ್ಯ ನಿರ್ಧಾರವಾಗುತ್ತಿದೆ.

publive-image

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತವಾಗಿ ಫಲಿತಾಂಶದ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಮಾರ್ಚ್/ಏಪ್ರಿಲ್ 2024ರಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-1 ನಡೆಸಲಾಗಿದೆ. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ.

ಇದನ್ನೂ ಓದಿ: BREAKING: ವಿದ್ಯಾರ್ಥಿಗಳೇ ಗಮನಿಸಿ.. SSLC ಫಲಿತಾಂಶ ಪ್ರಕಟಕ್ಕೆ ಸಮಯ ಫಿಕ್ಸ್

ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 09.05.2024 ರಂದು ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in  ಜಾಲತಾಣದಲ್ಲಿ ದಿನಾಂಕ:09.05.2024ರ ಬೆಳಗ್ಗೆ 10.30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ತಿಳಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment