newsfirstkannada.com

Breaking: ಎಸ್​ಎಸ್​ಎಲ್​ಸಿ ರಿಸಲ್ಟ್​ ಪ್ರಕಟ.. ಉಡುಪಿ ಜಿಲ್ಲೆ ಪ್ರಥಮ.. ಫಲಿತಾಂಶ ನೋಡಲು ಈ ವೆಬ್​ಸೈಟ್​ಗೆ ಭೇಟಿ ನೀಡಿ

Share :

Published May 9, 2024 at 10:43am

Update May 9, 2024 at 10:50am

    ವಿದ್ಯಾರ್ಥಿಗಳಿಗೆ ಸಿಹಿಸುದ್ದಿ.. ಹೊರಬಿತ್ತು SSLC ಫಲಿತಾಂಶ

    ಫಲಿತಾಂಶ ಪ್ರಕಟಿಸಿದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ

    2023-24ನೇ ಸಾಲಿನಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿದ್ದಾರೆ

ರಾಜ್ಯದಲ್ಲಿ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ವಿದ್ಯಾರ್ಥಿಗಳು ಬಹು ದಿನಗಳಿಂದ ಕಾಯುತ್ತಿದ್ದ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಫಲಿತಾಂಶವನ್ನು ಪ್ರಕಟಿಸಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀಯವರು ಈ ಬಾರಿಯ ಎಸ್​ಎಸ್​ಎಲ್​ಸಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಇವರ ಜೊತೆಗೆ ನಿರ್ದೇಶಕ ಗೋಪಾಲಕೃಷ್ಣ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾದ ರಿತೇಶ್ ಕುಮಾರ್ ಸಿಂಗ್ ಜೊತೆಯಾಗಿ ಪತ್ರಿಕಾಗೋಷ್ಠಿ ನಡೆಸಿ ರಿಸಲ್ಟ್​ ಅನೌನ್ಸ್​ ಮಾಡಿದ್ದಾರೆ.

ಅಂದಹಾಗೆಯೇ ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ-1ನ್ನು ದಿನಾಂಕ 25.03.2024 ರಿಂದ 06.04.2024 ರವರೆಗೆ ಬರೆದಿದ್ದಾರೆ. 4,41,910 ಬಾಲಕರು ಮತ್ತು 4,28,058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದಾರೆ. ಹೊರಬಿದ್ದ ಫಲಿತಾಂಶದಂತೆ ಈ ಬಾರಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ.

ಫಲಿತಾಂಶವನ್ನು ನೋಡೋದು ಹೇಗೆ?

2024ನೇ ಸಾಲಿನ SSLC ವಿದ್ಯಾರ್ಥಿಗಳು ನೀವಾಗಿದ್ದರೆ, ಫಲಿತಾಂಶ ನೋಡಲು ಯಾವುದೇ ಗೊಂದಲ ಬೇಡ. ಆರಾಮಾಗಿ ಫಲಿತಾಂಶವನ್ನು ಪರಿಶೀಲಿಸಬಹುದು.

https://karresults.nic.in

sslc.karnataka.gov.in

kseab.karnataka.gov.in

ಮೇಲಿನ ಮೂರು ವೆಬ್​ಸೈಟ್​ನಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಪರಿಶೀಲಿಸಬಹುದಾಗಿದೆ. ಇವು ಮೂರು ಸರ್ಕಾರಿ ವೆಬ್​ಸೈಟ್​ಗಳಾಗಿವೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking: ಎಸ್​ಎಸ್​ಎಲ್​ಸಿ ರಿಸಲ್ಟ್​ ಪ್ರಕಟ.. ಉಡುಪಿ ಜಿಲ್ಲೆ ಪ್ರಥಮ.. ಫಲಿತಾಂಶ ನೋಡಲು ಈ ವೆಬ್​ಸೈಟ್​ಗೆ ಭೇಟಿ ನೀಡಿ

https://newsfirstlive.com/wp-content/uploads/2024/05/SSLC-Exam-Result-2024.jpg

Load More